ತನಿಖಾ ಠಾಣಾಧಿಕಾರಿಗಳಿಗೆ ಡೀಸಿ ತರಾಟೆ

Team Udayavani, Jun 12, 2020, 7:07 AM IST

tanika-dc

ಸಕಲೇಶಪುರ: ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮರಳು ತನಿಖಾ ಠಾಣೆಗೆ ಗುರುವಾರ ಜಿಲ್ಲಾಧಿಕಾರಿ ಗಿರೀಶ್‌ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು ಹಾಜರಿರಲಿಲ್ಲ. ಈ  ಸಂದರ್ಭದಲ್ಲಿ ಹಿರಿಯ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡ ಡೀಸಿ ಇನ್ನು ಮುಂದೆ ಕರ್ತವ್ಯಲೋಪವಾಗದಂತೆ ಎಚ್ಚರ ವಹಿಸಿ ಎಂದರು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಕಲ್ಲು ಸಾಗಿಸುವ ಲಾರಿಯನ್ನು ತಡೆದು ಡೀಸಿ  ಪರಿಶೀಲಿಸಿದ ಸಂದರ್ಭದಲ್ಲಿ ಲಾರಿ ಚಾಲಕ ಕಲ್ಲು ಸಾಗಣೆ ಮಾಡಲು ಪರವಾನಗಿ ಪ್ರತಿ ಇಟ್ಟುಕೊಳ್ಳದೇ ಕೇವಲ ಮೊಬೈಲ್‌ ವ್ಯಾಟ್ಸಪ್‌ನಲ್ಲಿ ಇಟ್ಟುಕೊಂಡಿದ್ದಕ್ಕೆ ತರಾಟೆಗೆ ತೆಗೆದು ಕೊಂಡರು. ಸೂಕ್ತ ದಾಖಲೆ ಇಟ್ಟುಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಅನಿರೀಕ್ಷಿತವಾಗಿ ತಾಲೂಕಿನ ಬೆಳಗೋಡು ಹೋಬಳಿ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಗಿರೀಶ್‌ ಜಮೀನು ವಿವಾದ, ವಿಧವಾ ವೇತನ ಹಾಗೂ ಇನ್ನಿತರ ಸರಕಾರಿ ಸೇವೆಗಳ ಪ್ರಗತಿ ಪರಿಶೀಲನೆ  ನಡೆಸಿದರು. ಈ ಸಂದರ್ಭದಲ್ಲಿ ಬೆಳಗೋಡು ನಾಡಕಚೇರಿಗೆ ಯುಪಿಎಸ್‌ ಸೌಲಭ್ಯ ಕಲ್ಪಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ  ಜಿಲ್ಲಾಧಿಕಾರಿ ಗಿರೀಶ್‌, ಮಳಲಿ ಗ್ರಾಮದ ಕಸವಿಲೇವಾರಿ ಘಟಕದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ಸುಮಾರು 1.62 ಕೋಟಿ ರೂ. ವೆಚ್ಚದಲ್ಲಿ ಟೆಂಡರ್‌ ಕರೆಯಲಾಗಿದೆ. ಅಲ್ಲಿಯ ವರೆಗೆ ಪಟ್ಟಣದ ಕಸವನ್ನು  ಹಾಸನದ ಅಗಿಲೆ ಘನತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತದೆ ಎಂದರು.

ಇದೇ ವೇಳೆ ಪತ್ರಕರ್ತರ ಭವನಕ್ಕಾಗಿ ಮೀಸಲಿರಿಸಿರುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡವನ್ನು ಕಟ್ಟಿರುವುದನ್ನು ತೆರವುಗೊಳಿಸುಂತೆ ಎಸಿ ಗಿರೀಶ್‌  ನಂದನ್‌ಗೆ ಆದೇಶಿಸಿದರು. ತಹಶೀಲ್ದಾರ್‌ ಮಂಜುನಾಥ್‌, ಬೆಳಗೋಡು ಹೋಬಳಿ ಕಂದಾಯ ನಿರೀಕ್ಷಕ ಜನಾರ್ದನ್‌, ಪಿಡಿಒ ಪ್ರಭಾ ಹಾಜರಿದ್ದರು.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.