ಎರಡು ಹಂತಗಳಲ್ಲಿ ಗ್ರಾಪಂ ಚುನಾವಣೆ: ಸಿದ್ಧತೆ
Team Udayavani, Nov 18, 2020, 4:26 PM IST
ಹಾಸನ: ಮುಂದಿನ ಮೂರು ವಾರಗಳೊಳಗೆ ಗ್ರಾಮ ಪಂಚಾಯ್ತಿ ಚುನಾವಣೆ ಘೋಷಿಸಲು ರಾಜ್ಯ ಉತ್ಛ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ಎಲ್ಲಾ ಜಿಲ್ಲೆಗಳಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಸಲು ಸೂಕ್ತ ಸಿದ್ಧತೆ ಕೈಗೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ¤ ಡಾ.ಬಿ. ಬಸವರಾಜು ಸೂಚಿಸಿದರು.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿಯಾಗದಂತೆ ಹಾಗೂ ಸಿಬ್ಬಂದಿಗಳಕೊರತೆಯಾಗದಂತೆ ಯೋಜಿಸಿ 2 ಹಂತಗಳಲ್ಲಿ ಚುನಾವಣೆ ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳ ಬೇಕು ಎಂದು ನಿರ್ದೇಶನ ನೀಡಿದರು.
ಜವಾಬ್ದಾರಿ ತೆಗೆದುಕೊಳ್ಳಿ: ಕೋವಿಡ್ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸವಾಲಾಗಿದೆ. ಆದರೆ, ಗ್ರಾಮ ಪಂಚಾಯ್ತಿ ಪ್ರಜಾ ಪ್ರಭುತ್ವದ ಮೂಲ ಅಡಿಪಾಯವಾಗಿದೆ. ಹಾಗಾಗಿ ಎಲ್ಲಾ ಸೂಕ್ಷ್ಮ ವಿಷಯಗಳ ಮೇಲೂ ಹೆಚ್ಚಿನ ಗಮನಹರಿಸಿ, ಯಾವುದೇಲೋಪಗಳಿಲ್ಲದಂತೆನ್ಯಾಯಯುತವಾಗಿ ಚುನಾವಣೆ ನಡೆಸಲು ಪ್ರತಿಯೊಬ್ಬರೂ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಮತದಾನ ಕಡಿಮೆ ಆಗದಿರಲಿ: ಚುನಾವಣೆ ಸಂದರ್ಭದಲ್ಲಿ ಹೆಚ್ಚಿನ ಜನಸಂದಣಿ ಆಗುವುದನ್ನು ತಪ್ಪಿಸಲು1000 ಅಧಿಕ ಮತದಾರರನ್ನು ಒಳಗೊಂಡ ಮತಗಟ್ಟೆಗೆ ಹೆಚ್ಚುವರಿ ಕೊಠಡಿಯಲ್ಲಿ ಮತಗಟ್ಟೆ ಗಳನ್ನು ಸ್ಥಾಪಿಸಬೇಕು. ಮತಗಟ್ಟೆಗಳನ್ನು ಕಡ್ಡಾಯ ವಾಗಿ ಸ್ಯಾನಿಟೈಸ್ ಮಾಡುವುದರ ಜೊತೆಗೆ ಮತ ದಾರರಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ಆದರೆ, ಯಾವುದೇ ಕಾರಣಕ್ಕೂ ಮತದಾನದ ಸಂಖ್ಯೆಯಲ್ಲಿ ಇಳಿಕೆಯಾಗಬಾರದು ಎಂದು ಅವರು ಹೇಳಿದರು.
ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ಉಪಭಾಗಾಧಿಕಾರಿ ಮಟ್ಟದಲ್ಲಿ ಆಯ್ಕೆ ಮಾಡಿ ಅವರಿಗೆ ಸೂಕ್ತ ತರಬೇತಿ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಯು ಮತ ಚಲಾವಣೆಯನ್ನು ಅಂಚೆ ಮತ ಪತ್ರದ ಮೂಲಕ ಮಾಡುವುದೋ ಅಥವಾ ಪಿಪಿಇ ಕಿಟ್ ಧರಿಸಿ ತಾನೇ ಖುದ್ದಾಗಿ ಮತ ಚಲಾವಣೆ ಮಾಡುವುದೋ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ದೇಶನ ನೀಡಲಾಗುವುದು ಎಂದು ಆಯುಕ್ತರು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳು ಮತಗಟ್ಟೆಗಳ ದುರಸ್ತಿ ಕಾರ್ಯವನ್ನು ಮಾಡಿಸ ಬೇಕು. ಜೊತೆಗೆ ಮತಗಟ್ಟೆಗಳಲ್ಲಿ ಅಂತರ್ಜಾಲ ಸೌಲಭ್ಯ ಸೇರಿ ಇತರೆ ಮೂಲ ಸೌಕರ್ಯ ಒದಗಿಸು ವಂತೆ ಆಯಾಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು.
ಇದರ ಜೊತೆಗೆ ಮತಗಟ್ಟೆಗಳನ್ನು ಸ್ಯಾನಿಟೈಸ್ ಮಾಡಿಸುವುದು, ಆರೋಗ್ಯ ಇಲಾಖೆಯ ಸಹಕಾರ ದೊಂದಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನು ಸರಿಸುವುದು ಹಾಗೂ ಮತದಾರರಿಗೆ ಸೂಕ್ತ ಪ್ರಚಾರ ನೀಡುವುದು ಜಿಪಂ ಸಿಇಒ ಜವಾಬ್ದಾರಿ ಆಗಿರುತ್ತದೆ ಎಂದು ಆಯುಕ್ತರು ತಿಳಿಸಿದರು.
ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸಗೌಡ, ಜಿಪಂ ಸಿಇಒ ಬಿ.ಎ.ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಚುನಾವಣಾ ತಹಶೀಲ್ದಾರ್ ಎಚ್.ಟಿ.ಪದ್ಮನಾಭಶಾಸ್ತ್ರೀ, ಮತ್ತಿತರರು ಹಾಜರಿದ್ದರು.
ಬಂದೋಬಸ್ತ್ ವ್ಯವಸ್ಥೆಮಾಡಿಕೊಳ್ಳಿ : ಜಿಲ್ಲಾಧಿಕಾರಿಗಳು ಹಾಗೂ ಎಸ್ಪಿ ಚುನಾವಣೆ ಸಂದರ್ಭದಲ್ಲಿಕಾನೂನು ಸುವ್ಯವಸ್ಥೆಕಾಪಾಡಿಕೊಳ್ಳಲು ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಬೇಕು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಅವುಗಳಿಗೆ ಅಗತ್ಯ ಬಂದೋಬಸ್ತ್ಕಲ್ಪಿಸಬೇಕು. ಚುನಾವಣೆ ಸಂದರ್ಭದಲ್ಲಿ ಹಣ, ಸಾಮಗ್ರಿಗಳು ಹಾಗೂ ಅಕ್ರಮ ಮದ್ಯ ವಿತರಣೆಯಾಗದಂತೆ ಅಬಕಾರಿ ಇಲಾಖೆಯ ಸಹಯೊಗದೊಂದಿಗೆ ಅಗತ್ಯ ನಿಯಂತ್ರಣಾಕ್ರಮಗಳನ್ನುಕೈಗೊಳ್ಳಬೇಕು ಎಂದು ಚುನಾವಣಾ ಆಯೋಗದ ಆಯುಕ್ತರು ಹೇಳಿದರು. ಚುನಾವಣೆಗೆ ಅಗತ್ಯ ಅನುದಾನವನ್ನು ಒದಗಿಸಲಾಗುತ್ತಿದ್ದು, ಅದನ್ನು ಮಿತವಾಗಿ ನಿಯೋಗ ಮಾಡಿ, ನಿಯೋಗ ಮಾಡಿದ ಅನುದಾನದ ವಿವರವನ್ನುಕಡ್ಡಾಯವಾಗಿ ಆಯೋಗಕ್ಕೆ ನಿಗದಿತ ಸಮಯದೊಳಗೆ ನೀಡಬೇಕು. ಚುನಾವಣೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯಾವುದೇ ಅಧಿಕಾರಿ ರಜೆ ಅಥವಾಕೇಂದ್ರ ಸ್ಥಾನ ಬಿಟ್ಟು ಹೋಗುವ ಹಾಗಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.