ಯೋಜನಾ ನಿರಾಶ್ರಿತರಿಗೆ ತ್ವರಿತವಾಗಿ ಪರಿಹಾರ ವಿತರಿಸಿ
Team Udayavani, Jun 16, 2019, 3:00 AM IST
ಹಾಸನ: ಜಿಲ್ಲೆಯಲ್ಲಿ ಜಲಾನಯನ ಪ್ರದೇಶಗಳು ಸೇರಿದಂತೆ ಅಭಿವೃದ್ಧಿ ಯೋಜನೆಗಳಿಗಾಗಿ ಜಮೀನು ಕಳೆದು ಕೊಂಡವರಿಗೆ ದೀರ್ಘಕಾಲದಿಂದ ಬಾಕಿ ಇರುವ ಪರಿಹಾರಗಳನ್ನು ಶೀಘ್ರವೇ ವಿತರಣೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು 15-20 ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಸರ್ಕಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಬಾಕಿ ಪಾವತಿ ಬಗ್ಗೆ ಎಲ್ಲಾ ತಹಶೀಲ್ದಾರರು ಸಭೆ ನಡೆಸಿ ವಿವರ ಸಂಗ್ರಸಿ ಗ್ರಾಮಲೆಕ್ಕಿಗರ ಮೂಲಕ ಎಲ್ಲಾ ಗ್ರಾಮಗಳಲ್ಲಿ ಕರಪತ್ರಗಳನ್ನು ವಿತರಣೆ ಮಾಡಿ ಅರ್ಹ ಫಲಾನುಭಗಳನ್ನು ಗುರುತಿಸಿ ಆದಷ್ಟು ಬೇಗ ಪರಿಹಾರ ನೀಡಿ ಎಂದು ಹೇಳಿದರು.
ಸರ್ವೆಯರ್ ನಿಯೋಜಿಸಿ: ತಾಲೂಕುವಾರು ಹೆಚ್ಚುವರಿ ಇರುವ ಸರ್ವೆಯರ್‌ಗಳನ್ನು ಕಾರ್ಯ ಒತ್ತಡಗಳಿರುವ ಕಚೇರಿಗಳಿಗೆ ನಿಯೋಜನೆಗೊಳಿಸಬೇಕು. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಕೆಳಹಂತದ ಹುದ್ದೆಗಳ ನೇಮಕಾತಿ, ಪದೋನ್ನತಿಗಳನ್ನು ಬೇಗನೆ ಮುಗಿಸಿ, ಅಗತ್ಯವಿರುವ ಹೆಚ್ಚುವರಿ ಖಾಸಗಿ ಸರ್ವೆಯರ್‌ಗಳನ್ನು ಬಾಹ್ಯ ಗುತ್ತಿಗೆ ಮೇರೆಗೆ ಪಡೆದು ಬಾಕಿ ಇರುವ ಎಲ್ಲಾ ಭೂಸ್ವಾಧೀನ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಸಚಿವರು ನಿರ್ದೇಶನ ನೀಡಿದರು.
ವೃದ್ಧರನ್ನು ಕಚೇರಿಗೆ ಅಲೆಸದಿರಿ: ವಯೋವೃದ್ಧರು, ದಿವ್ಯಾಂಗರು, ಬಡವರು, ನಿರ್ಗತಿಕರನ್ನು ಅಲೆಸಬೇಡಿ. ಜಿಲ್ಲೆಯಲ್ಲಿ ಸಾಮಾಜಿಕ ಭದ್ರತೆ, ಪಡಿತರ ಕಾರ್ಡ್ ವಿತರಣೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಡೆಸಿ. ಯಾವುದೇ ಅರ್ಹ ಫಲಾನುಭವಿ ಮಾಸಾಶನದಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಕಾರ್ಮಿಕರನ್ನು ನೇಮಿಸಿ: ಜಿಲ್ಲೆಯಲ್ಲಿರುವ ಎಲ್ಲಾ ಕಾರ್ಖಾನೆಗಳ ಮುಖ್ಯಸ್ಥರನ್ನು ಕರೆಸಿ ಅಲ್ಲಿ ಕೆಲಸಗಾರರ ನೇಮಕಾತಿಗಳಲ್ಲಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡುವಂತೆ ಸೂಕ್ತ ಸೂಚನೆ ನೀಡಲು ಜಿಲ್ಲಾಧಿಕಾರಿಯವರು ಕಾರ್ಮಿಕ ಇಲಾಖೆ ಹಾಗೂ ಕೈಗಾರಿಕಾ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯವರು, ಅಪರ ಜಿಲ್ಲಾಧಿಕಾರಿಯವರು, ಉಪಭಾಗಾಧಿಕಾರಿಗಳು, ತಹಶೀಲ್ದಾರರು ಪ್ರತ್ಯೇಕವಾಗಿ ತಿಂಗಳಿಗೆ ಕನಿಷ್ಠ ನಾಲ್ಕು ಗ್ರಾಮಗಳಿಗೆ ಎಲ್ಲಾ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಅರ್ಜಿ ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಅಕ್ರಂಪಾಷಾ, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಉಪಭಾಗಾಧಿಕಾರಿಗಳಾದ ಎಚ್.ಎಲ್ ನಾಗರಾಜ್, ಕವಿತಾ ರಾಜಾರಾಂ, ವಿಶೇಷ ಭೂಸ್ವಾಧೀನಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಕಂಟ್ರೋಲ್ ರೂಂ ಸ್ಥಾಪಿಸಿ: ಮೊಸಳೆಹೊಸಳ್ಳಿ, ಹರಿಹರಪುರ, ಹೆರಗು, ಸೋಮನಹಳ್ಳಿ ಸೇರಿದಂತೆ ಕಡೆ ಅಗತ್ಯವಿರುವ ಸ್ಥಳಗಳಲ್ಲಿ ನಾಡ ಕಚೇರಿಗಳನ್ನು ತೆರೆಯಲು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಜಿಲ್ಲೆಯಲ್ಲಿ ಒಂದು ಅತ್ಯಾಧುನಿಕ ವ್ಯವಸ್ಥಿತ ಕಂಟ್ರೋಲ್ ರೂಂ ಸ್ಥಾಪಿಸಿ ಜಿಲ್ಲೆಯ ಎಲ್ಲಾ ಆಗು ಹೋಗುಗಳ ಬಗ್ಗೆ ನಿಗಾವಹಿಸಬೇಕು. ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಿ ಇದೇ ರೀತಿ ಅಕ್ರಮ ಸಕ್ರಮ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅದೇ ರೀತಿ ಸರ್ಕಾರಿ ಜಾಗಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ರೇವಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.