ಕಲ್ಲು ಗಣಿಗಾರಿಕೆ ತಾತ್ಕಾಲಿಕ ನಿಷೇಧಕ್ಕೆ ಆಗ್ರಹ

Team Udayavani, Feb 27, 2021, 3:37 PM IST

ಕಲ್ಲು ಗಣಿಗಾರಿಕೆ ತಾತ್ಕಾಲಿಕ ನಿಷೇಧಕ್ಕೆ ಆಗ್ರಹ

ಅರಸೀಕೆರೆ: ತಾಲೂಕಿನಲ್ಲಿ ವಾಯು, ಶಬ್ದ ಮಾಲಿನ್ಯದ ಜೊತೆಗೆ ಅಂತರ್ಜಲ ಕುಸಿಯಲು ಕಾರಣ ಆಗಿರುವ ಕಲ್ಲು ಗಣಿಗಾರಿಕೆ ನಿಲ್ಲಿಸಲು ತಾಲೂಕು ಆಡಳಿತಕ್ಕೆಆಗ್ರಹಿಸಿ ರೈತ ಸಂಘದ ಮುಖಂಡರು ಶುಕ್ರವಾರ ಪ್ರತಿಭಟಿಸಿದರು.

ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ತಾಲೂಕು ರೈತಸಂಘದ ಮುಖಂಡರು, ಕಾರ್ಯಕರ್ತರು ಪರಿಸರ ಉಳಿಸಿ, ಜೀವ ಸಂಕುಲ ರಕ್ಷಿಸಿ ಎಂಬಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವ್ಯಕ್ತಪಡಿಸಿ, ಕ್ರಮಕೈಗೊಳ್ಳಲು ತಹಶೀಲ್ದಾರ್‌ಸಂತೋಷ್‌ ಕುಮಾರ್‌ಗೆ ಮನವಿ ಸಲ್ಲಿಸಿದರು.

ತಾತ್ಕಾಲಿಕ ತಡೆ ನೀಡಿ: ಈ ವೇಳೆ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಬೋರನಕೊಪ್ಪಲು ಶಿವಲಿಂಗಪ್ಪ ಮಾತ  ನಾಡಿ, ಕಲ್ಲು ಗಣಿಗಾರಿಕೆಯಿಂದ ರೈತ ಸಮುದಾಯಕ್ಕೆಇನ್ನಿಲ್ಲದ ತೊಂದರೆ ಆಗುತ್ತಿದೆ. ಕಲ್ಲು ಒಡೆಯಲು ಬಳಸುವ ಜಿಲಿಟಿನ್‌ ಸ್ಫೋಟಕಗಳಿಂದ ಪರಿಸರದಲ್ಲಿ ವಾಯು, ಶಬ್ದ ಮಾಲಿನ್ಯ ಜೊತೆಗೆ ಅಂತರ್ಜಲ ಮಟ್ಟಕುಸಿಯುತ್ತಿದೆ. ಇದರಿಂದ ಲಕ್ಷಾಂತರ ರೂ. ಖರ್ಚು ಮಾಡಿ ಕೊರೆಯಿಸಿದ ರೈತರ ಕೊಳವೆಬಾವಿಗಳು ಬತ್ತಿ ಹೋಗಿವೆ. ತಾಲೂಕು ಆಡಳಿತ ಕೂಡಲೇ ಕಲ್ಲುಗಣಿಗಾರಿಕೆ ತಾತ್ಕಾಲಿಕವಾಗಿ ತಡೆಯಬೇಕೆಂದು ಮನವಿ ಮಾಡಿದರು.

ಇತ್ತೀಚೆಗೆ ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕಗಳು ಸಿಡಿದು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದರು. ಇದರಿಂದ ಅವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರವನ್ನೂ ನೀಡದೆ, ಅನ್ಯಾಯ ಮಾಡುತ್ತಿದೆ. ಇಂತಹ ಸಣ್ಣಪುಟ್ಟ ದುರಂತ ಪ್ರಕರಣ ತಾಲೂಕಿನಲ್ಲಿ ನಡೆದಿವೆ. ಆದರೆ, ಅದನ್ನು ಬೆಳಕಿಗೆ ಬಾರದಂತೆ ಪ್ರಭಾವಿ ಶಕ್ತಿಗಳುಮುಚ್ಚುಹಾಕುತ್ತಿವೆ ಎಂದು ದೂರಿದರು.

ಸ್ಫೋಟಕಗಳ ತಡೆ ಹಿಡಿ ಹಿಡಿಯಿರಿ: ಕೂಡಲೇ ತಾಲೂಕು ಆಡಳಿತ ಸೂಕ್ತ ಕಾನೂನು ಕ್ರಮಕೈಗೊಂಡು, ಅಕ್ರಮವಾಗಿ ದಾಸ್ತಾನು ಮಾಡಿರುವಸ್ಫೋಟಕ ವಸ್ತುಗಳನ್ನು ತಪಾಸಣೆ ಮಾಡಬೇಕು ಹಾಗೂ ತಾತ್ಕಾಲಿಕವಾಗಿ ಎಲ್ಲಾ ಕಲ್ಲು ಗಣಿಗಾರಿಕೆ ತಡೆಯಬೇಕೆಂದು ಒತ್ತಾಯಿಸಿದರು.

ರೈತ ಮುಖಂಡ ಮೇಳೇನಹಳ್ಳಿ ರಮೇಶ್‌ ಮಾತನಾಡಿ, ನಗರ ಸೇರಿ ತಾಲೂಕಿನಲ್ಲಿ ಅಕ್ರಮಮರಳು ಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ.ರೈತರು ತಮ್ಮ ಮನೆಯ ರಿಪೇರಿ ಕೆಲಸ ಕಾರ್ಯಗಳಿಗೆತಮ್ಮ ಜಮೀನಲ್ಲಿರುವ ಮರಳು ತೆಗೆದುಕೊಂಡುಹೋಗಲು ಅವಕಾಶ ನೀಡದೆ, ಪೊಲೀಸರಿಂದ ಪ್ರಕರಣ ದಾಖಲಾಗುತ್ತದೆ. ಆದರೆ, ಆಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಡುವವರ ಮೇಲೆಯಾವುದೇ ಕಾನೂನು ಕ್ರಮಕೈಗೊಳ್ಳುತ್ತಿಲ್ಲ, ಇದು ರೈತ ವಿರೋಧಿ ನೀತಿಯಾಗಿದೆ ಎಂದು ಕಿಡಿಕಾರಿದರು.

ಗಂಭೀರ ಚಿಂತನೆ ಮಾಡಲಿ: ಹರತನಹಳ್ಳಿ ಜಯಣ್ಣ ಮಾತನಾಡಿ, ತಾಲೂಕಿನ ಅನೇಕ ಗ್ರಾಮಗಳಸಮೀಪದಲ್ಲಿ ಕಲ್ಲು ಗಣಿಗಾರಿಕೆಗಳಿಗೆ ಬಳಸುವ ಸ್ಫೋಟಕಗಳ ಶಬ್ದಗಳಿಗೆ ಅನೇಕ ಜೀವಸಂಕುಲಗಳು ನಾಶವಾಗುತ್ತಿವೆ. ಹಲವು ಮನೆಗಳಿಗೂ ಹಾನಿಯಾಗುತ್ತಿದೆ. ಪ್ರತಿನಿತ್ಯ ಲಾರಿ, ಟ್ರ್ಯಾಕ್ಟರ್‌ಗಳು ತಿರುಗಾಡುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ. ಈ ಬಗ್ಗೆ ತಾಲೂಕು ಆಡಳಿತ ಗಂಭೀರ ಚಿಂತನೆ ಮಾಡುವ ಮೂಲಕ ಸಾರ್ವಜನಿಕರಿಗೆ ಉಂಟಾಗುತ್ತಿರುವ ಹತ್ತು ಹಲವು ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಲು ಮುಂದಾಗಬೇಕೆಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಕಾರ್ಯದರ್ಶಿ ಅಣ್ಣಾ ನಾಯಕನಹಳ್ಳಿ ಶಿವಮೂರ್ತಿ, ತಾಲೂಕು ಉಪಾಧ್ಯಕ್ಷ ರಮೇಶ್‌ ಬಾಬು, ಚಂದ್ರಶೇಖರ್‌, ಮಂಜುನಾಥ್‌, ಸ್ವಾಮಣ್ಣ, ವೆಂಕಟಬೋವಿ, ಮಲ್ಲಯ್ಯ, ಕುಮಾರ್‌, ಸುರೇಶ್‌ ಜಗದೀಶ್‌ ಇದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.