ತಾಲೂಕಿನ ಎಳನೀರಿಗೆ ಹೊರ ರಾಜ್ಯದಲ್ಲೂ ಬೇಡಿಕೆ
Team Udayavani, May 10, 2022, 5:55 PM IST
ಚನ್ನರಾಯಪಟ್ಟಣ: ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿ ನಿತ್ಯವೂ ಮಳೆ ಬೀಳುತ್ತಿದ್ದರೂ, ಬಿಸಿಲ ತಾಪ ಕಡಿಮೆಯಾಗಿಲ್ಲ. ದಿನೇ ದಿನೆ ಧಗೆ ಹೆಚ್ಚುತ್ತಿದ್ದು, ಜನಸಾಮಾನ್ಯರು ತಂಪು ಪಾನೀ ಯಕ್ಕೆ ಮೊರೆ ಹೋಗುವುದು ಸಹಜ. ಇದರಿಂದ ತಾಲೂಕಿನ ಎಳನೀರಿಗೆ ಎಲ್ಲಿಲ್ಲದ ಬೇಡಿಕೆ ಕಂಡು ಬಂದಿದ್ದು, ಹೊರ ಜಿಲ್ಲೆ ಹಾಗೂ ರಾಜ್ಯಕ್ಕೆ ರಫ್ತು ಮಾಡಲಾಗುತ್ತಿದೆ.
ರಾಜ್ಯದ ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕಲಬುರಗಿ, ಬೆಂಗಳೂರು ಮಾತ್ರವಲ್ಲದೆ, ದೇಶದ ರಾಜ್ಯಧಾನಿ ನವದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶ, ಹರಿಯಾಣ ಹಾಗೂ ಗೋವಾ ರಾಜ್ಯಕ್ಕೆ ಚನ್ನರಾಯಪಟ್ಟಣದ ಎಳನೀರು ರಫ್ತಾಗುತ್ತಿದೆ.
ಮಳೆ ನಡುವೆಯೂ ಬಿಸಿಲ ಝಳ: ಬಡವರ ಊಟಿ ಎಂದೇ ಖ್ಯಾತಿ ಪಡೆದಿರುವ ಹಾಸನ ಜಿಲ್ಲೆಯಲ್ಲಿ ರಾತ್ರಿ ಮಳೆ ಬರುತ್ತಿದೆ, ತಂಪನೆ ವಾತಾವರಣ ಇರುತ್ತದೆ. ಆದರೆ, ಮಧ್ಯಾಹ್ನ 38 ಡಿಗ್ರಿಗೂ ಹೆಚ್ಚಿನ ತಾಪಮಾನ ಇರುವುದರಿಂದ ಜಿಲ್ಲೆಯಲ್ಲಿ ತಾಲೂಕಿನ ಎಳನೀರಿಗೆ ಬಹಳ ಬೇಡಿಕೆ ಇದೆ. ತಾಲೂಕು ಅರೆಮಲೆನಾಡು ಪ್ರದೇಶ ಆಗಿರುವುದರಿಂದ ಎಳನೀರು ಕುಡಿಯಲು ತುಂಬಾ ಸಹಿಯಾಗಿದ್ದು, ದಣಿವಾರುಸುವಲ್ಲಿ ನೈಸರ್ಗಿಕ ಪಾನೀಯದಲ್ಲಿ ಮೊದಲನೇ ಸ್ಥಾನದಲ್ಲಿದೆ.
ವೃದ್ಧಿಯಾಗಿದೆ ಅಂತರ್ಜಲ: ಕಳೆದ ವರ್ಷ ಉತ್ತಮ ಮಳೆಯಾಗಿದ್ದು, ಸಾಕಷ್ಟು ಕೆರೆಗಳು ಭರ್ತಿಯಾದವು. ಇನ್ನು ಏತನೀರಾವರಿ ಯೋಜನೆ ಮೂಲಕ ನೂರಾರು ಕೆರೆಗೆ ನೀರು ಹರಿಸಲಾಗಿದ್ದು, ಅಂತರ್ಜಲ ವೃದ್ಧಿಯಾಗಿದೆ. ಕೊಳವೆ ಬಾವಿಯಲ್ಲಿ ನೀರು ಸಾಕಷ್ಟು ಇರುವುದರಿಂದ ರೈತರು ತೆಂಗಿನ ತೋಟಕ್ಕೆ ನೀರು ಹರಿಸುತ್ತಿದ್ದಾರೆ. ಇದರಿಂದ ಉತ್ತಮ ಫಸಲು ಬರುತ್ತಿದೆ. ಸಾಕಷ್ಟು ರೈತರು ಎಳನೀರು ಮಾರಾಟ ಮಾಡಲು ಮುಂದಾಗಿದ್ದಾರೆ.
ಮಳೆ ಬರುತ್ತಿದ್ದರೂ ಬೇಸಿಗೆ ರೀತಿಯಲ್ಲಿ ಬಿಸಿಲ ಧಗೆ ಇರುವುದರಿಂದ ಮಹಾನಗರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಎಳನೀರು ಮೊರೆ ಹೋಗುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಎಳನೀರಿಗೆ ಉತ್ತಮ ಬೆಲೆಯಿದೆ. ಚನ್ನರಾಯಪಟ್ಟಣ ಹಾಗೂ ಅರಸೀಕೆರೆ ತಾಲೂಕಿನ ಎಳನೀರು ವ್ಯಾಪಾರ ಮಾಡಿ ಹೊರ ಜಿಲ್ಲೆ, ರಾಜ್ಯಕ್ಕೆ ರಫ್ತು ಮಾಡಲಾಗುತ್ತಿದೆ. -ರಾಮಸ್ವಾಮಿ, ಎಳನೀರು ವರ್ತಕ
ತಾಲೂಕಿನ ದಂಡಿಗನಹಳ್ಳಿ, ಹಿರೀಸಾವೆ, ಬಾಗೂರು, ನುಗ್ಗೆಹಳ್ಳಿ ಹೋಬಳಿಯ ರೈತರು ಕೊಳವೆ ಬಾವಿ ಆಶ್ರಯದಿಂದ ತೆಂಗಿನ ತೋಟ ನಿರ್ವಹಣೆ ಮಾಡುತ್ತಿದ್ದಾರೆ. ಇಂತಹ ಭೂಮಿಯಲ್ಲಿನ ಎಳನೀರಿಗೆ ಬಹಳ ಬೇಡಿಕೆ, ಹೇಮಾವತಿ ನಾಲೆ ನೀರಿನಿಂದ ತೋಟ ನಿರ್ವಹಣೆ ಮಾಡುತ್ತಿರುವ ಕಸಬಾ, ಶ್ರವಣಬೆಳಗೊಳ ಹೋಬಳಿ ಎಳನೀರು ನೋಡಲು ದಪ್ಪದಾಗಿದ್ದು, ನೀರು ಹೆಚ್ಚಿರುತ್ತದೆ. ಆದರೆ, ನೀರು ಸಪ್ಪೆಯಾಗಿದ್ದು, ಕುಡಿಯಲು ಅಷ್ಟು ರುಚಿಸುವುದಿಲ್ಲ. – ಗಿಡ್ಡೇಗೌಡ, ಸ್ಥಳೀಯ ಎಳನೀರು ಮಾರಾಟಗಾರ
-ಶಾಮಸುಂದರ್ ಕೆ.ಅಣ್ಣೇನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.