ಕಾಲೇಜು ಕಟ್ಟಡ ಕಾಮಗಾರಿ ಪೂರ್ಣಕ್ಕೆ ಆಗ್ರಹ
Team Udayavani, Feb 10, 2020, 3:38 PM IST
ಸಕಲೇಶಪುರ: ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡದ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ತಾಲೂಕಿನ ಹೆತ್ತೂರು ಗ್ರಾಮದಲ್ಲಿ ಯುವ ರೈತ ಸಂಘದ ಪದಾಧಿಕಾರಿಗಳು ಕಾಲೇಜು ಕಟ್ಟಡದ ಎದುರು ಪ್ರತಿಭಟನೆ ನಡೆಸಿದರು.
1990ರಲ್ಲಿ ಆರಂಭವಾದ ಕಾಲೇಜಿಗೆ ಮೂರು ಕೊಠಡಿ ನಿರ್ಮಾಣ ಮಾಡಲಾಗಿತ್ತು. ಆದರೆ ಕೊಠಡಿ ಶಿಥಿಲಗೊಂಡ ಕಾರಣದಿಂದ ಗ್ರಾಮಸ್ಥರು ಕಾಲೇಜಿಗೆ ಹೆಚ್ಚುವರಿ ಕೊಠಡಿ ನಿರ್ಮಿಸುವಂತೆ ಮನವಿ ಮಾಡಿದ್ದರು. ಹೀಗಾಗಿ 2006ರಲ್ಲಿ ಗ್ರಂಥಾಲಯ ಸೇರಿದಂತೆ 6 ಕೊಠಡಿಗಳ ಹೊಸ ಕಾಲೇಜು ಕಟ್ಟಡದ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಕಟ್ಟಡ ನಿರ್ಮಾಣ ವೇಗವಾಗಿ ನಡೆದಿತ್ತು. 2008ರ ವೇಳೆಗೆ ಕಟ್ಟಡದ ಕಾಮಗಾರಿ ಶೇ.90 ಮುಗಿದಿದ್ದು, ಅನುದಾನದ ಕೊರತೆ ಕಾರಣ ನೀಡಿ ಗುತ್ತಿಗೆದಾರ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.
ಪಾಳು ಬಿದ್ದ ಕಟ್ಟಡ:ಕಟ್ಟಡ ಕಾಮಗಾರಿ ಸ್ಥಗಿತಗೊಂಡು 15 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯ ವಾಗಿಲ್ಲ. ಪಾಳುಬಿದ್ದ ಕಟ್ಟಡ ಈಗ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕಿಡಿಗೇಡಿಗಳು ಕಿಟಕಿ, ಬಾಗಿಲು ಧ್ವಂಸಗೊಳಿಸಿದ್ದಾರೆ. ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 150 ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು ವಾಣಿಜ್ಯ ಹಾಗೂ ಕಲಾ ವಿಭಾಗಗಳು ನಡೆಯುತ್ತಿವೆ. ಆದರೆ, ಕಟ್ಟಡದ ಕೊರತೆ ಕಾರಣ ಹೆಚ್ಚಿನ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿಲ್ಲದಾಗಿದೆ ಎಂದರು.
ಇನ್ನೂ 15ದಿನದೊಳಗಾಗಿ ಕಟ್ಟಡ ಕಾಮಗಾರಿಗೆ ಅನುದಾನ ಬಿಡುಗಡೆಯಾಗದಿದ್ದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಹೆತ್ತೂರು ಪಿಡಿಒ ವೀರಭದ್ರಪ್ಪಗೆ ಮನವಿ ಸಲ್ಲಿಸಲಾಯಿತು. ಯುವ ರೈತ ಸಂಘದ ಅಧ್ಯಕ್ಷ ಡಿಲಾಕ್ಷ, ಮಧುಸೂದನ್, ಕಿಶೋರ್, ಕೀರ್ತಿಕುಮಾರ್, ವಿಜಯ್, ಮಧುಚಂದ್ರ, ಗ್ರಾಪಂ ಸದಸ್ಯ ಕೃಷ್ಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.