ಸಮಾಜ ಕಲ್ಯಾಣ ಇಲಾಖೆ ಅನುದಾನ ದುರ್ಬಳಕೆ ತನಿಖೆಗೆ ಆಗ್ರಹ
Team Udayavani, Jan 9, 2020, 3:00 AM IST
ಬೇಲೂರು: ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಾಸ್ಟೆಲ್‌ಗಳಿಗೆ ನೀಡಿರುವ 50 ಲಕ್ಷ ರೂ. ದುರ್ಬಳಕೆ ಮಾಡಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಸಮಗ್ರ ತನಿಖೆ ನಡೆಸಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯ ಮಂಜುನಾಥ್ ಒತ್ತಾಯಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಹಿಂದೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಭರಮಪ್ಪ ಎಂಬುವರು 2019 ಮಾರ್ಚ್ ಅಂತ್ಯದಲ್ಲಿ ವಿದ್ಯಾರ್ಥಿಗಳಿಗೆ ತಲುಪಬೇಕಾದ ಸೌಲತ್ತುಗಳನ್ನು ವಂಚಿಸಿ ಸರ್ಕಾರದ ಸುಮಾರು 50 ಲಕ್ಷ ಅನುದಾನವನ್ನು ದುರುಪಯೋಗಪಡಿಸಿಕೊಂಡಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಿ ಎಂದು ಹಾಲಿ ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಮೋಹನ್‌ಕುಮಾರ್ ಅವರನ್ನು ಒತ್ತಾಯಿಸಿದರು.
ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಶಶಿಕುಮಾರ್ ಮತ್ತು ಉಪಾಧ್ಯಕ್ಷೆ ಜಮುನಾ ತಾಲೂಕಿನಲ್ಲಿ ಪರಿಶಿಷ್ಟ ವಿದ್ಯಾರ್ಥಿನಿಲಯಗಳಲ್ಲಿ ಶುಚಿತ್ವ ಇರುವುದಿಲ್ಲ. ಮಕ್ಕಳಿಗೆ ಗುಣ ಮಟ್ಟದ ಆಹಾರ ನೀಡುವುದಿಲ್ಲ. ಅಧಿಕಾರಿಗಳು ಸರ್ಕಾರದ ಅನುದಾನವನ್ನು ದುರುಪಯೋಗಪಡಿಸಿಕೊಂಡರೆ ಮಕ್ಕಳ ಭವಿಷ್ಯ ಎನು ಎಂದು ಪ್ರಶ್ನಿಸಿದರು.
ತನಿಖೆಗೆ ಆದೇಶ: ಅಧ್ಯಕ್ಷ ರಂಗೇಗೌಡ ಮಾತನಾಡಿ, ಈ ಅವ್ಯವಹಾರದ ಬಗ್ಗೆ ಹಿಂದಿನಿಂದಲೂ ಚರ್ಚೆ ನಡೆಸಲಾಗಿದೆ. ತಕ್ಷಣ ಭಷ್ಟಚಾರದ ನಡೆದಿರುವ ಬಗ್ಗೆ ವಿವರಣೆ ನೀಡಬೇಕು ಎಂದು ಆದೇಶಿಸಿದರು. ಇಂತಹ ಅಧಿಕಾರಿಗಳಿಂದ ಸರ್ಕಾರದ ಯೋಜನೆಗಳು ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.
ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಸದಸ್ಯ ಬಿ.ಎಸ್.ತಮ್ಮಣ್ಣಗೌಡ ಮಾತನಾಡಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಕೆಲ ಇಲಾಖೆ ಅಧಿಕಾರಿಗಳು ಅಗಮಿಸದೇ ಇಲಾಖೆ ಪ್ರಗತಿ ತಿಳಿಯುತ್ತಿಲ್ಲ. ಅಧ್ಯಕ್ಷರು ಈ ಬಗ್ಗೆ ಗಮನಹರಿಸಿ ಸಭೆಗೆ ಗೈರಾದ ಇಲಾಖೆ ಅಧಿಕಾರಿಗಳ ವಿರುದ್ಧ ಜಿಪಂ ಸಿಇಒಗೆ ದೂರು ನೀಡಲು ಒತ್ತಾಯಿಸಿದರು.ಸಭೆಯಲ್ಲಿ ತಾಪಂ ಸಾಯಿ ಸಮಿತಿ ಅಧ್ಯಕ್ಷ ರವಿ. ಕಾರ್ಯನಿರ್ವಾಹಣಾಧಿಕಾರಿ ರವಿಕುಮಾರ್ ಇದ್ದರು.
ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಸದಸ್ಯ ಶಶಿಕುಮಾರ್ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ರೋಗಿಗಳನ್ನು ವೈದ್ಯರು ಪರೀಕ್ಷಿಸದೇ ನಾಳೆ ಬನ್ನಿ ಎಂದು ಉಡಾಫೆ ಉತ್ತರ ನೀಡಿ ಕಳುಹಿಸುತ್ತಾರೆ. ಜನ ಪ್ರತಿನಿಧಿಯಾದ ನನಗೇ ಈರೀತಿಯಾದರೆ ಜನ ಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು. ನಿರ್ಲಕ್ಷ್ಯ ವಹಿಸಿರುವ ವೈದ್ಯರ ವಿರ್ಧುಧ ಕೂಡಲೇ ಕ್ರಮ ಕೈಗೊಳ್ಳುವಂತೆ ತಾಲೂಕು ಅರೋಗ್ಯಾಧಿಕಾರಿ ವಿಜಯ್ ಅವರನ್ನು ಒತ್ತಾಯಿಸಿತಿಳಿಸಿದರು.
ಪಡಿತರ ಬಯೋ ಮೆಟ್ರಿಕ್ ಸಮಸ್ಯೆ ಸರಿಪಡಿಸಿ: ಸದಸ್ಯ ಸೋಮಯ್ಯ ಮಾತನಾಡಿ, ಆಹಾರ ಇಲಾಖೆಯ ಅವಾಂತರದಿಂದ ಪರಿತರ ಚೀಟಿದಾರರು ಬೆರಳಚ್ಚು ನೀಡಲು ದಿನ ನಿತ್ಯ ಪರದಾಡುವಂತಾಗಿದ್ದು, ಬಡವರು ಕೂಲಿ ಕಾರ್ಮಿಕರ ಬೆರಳಚ್ಚು ನೀಡಲು ಬೆಳಗ್ಗೆಯಿಂದ ಸಂಜೆಯವರೆಗೆ ನ್ಯಾಯಬೆಲೆ ಅಂಗಡಿ ಮುಂದೆ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಯಾವಾಗ ನೋಡಿದರು ಸರ್ವರ್ ಇಲ್ಲ ಎಂದು ಅಂಗಡಿ ಮಾಲೀಕರು ಹೇಳುತ್ತಿದ್ದು ಇದರಿಂದ ಗ್ರಾಮೀಣ ಜನರು ಪರಿತಪಿಸುತ್ತಿದ್ದಾರೆ. ಖಾಸಗಿಯವರು ಬೆರಳಚ್ಚು ಪಡೆಯುವ ವ್ಯವಸ್ಥೆ ಕೈಗೊಳ್ಳಿ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.