![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, May 19, 2024, 12:11 AM IST
ಹಾಸನ: ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಹೆಚ್ಚುವರಿ ಆರೋಪಿಯನ್ನಾಗಿ ಪರಿಗಣಿಸಿ ವಿಚಾರಣೆಗಾಗಿ ಶುಕ್ರವಾರ ಒಂದು ದಿನ ವಶಕ್ಕೆ ತೆಗೆದುಕೊಂಡಿದ್ದ ಎಸ್‌ಐಟಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಶನಿವಾರ 2 ದಿನ ವಶಕ್ಕೆ ತೆಗೆದುಕೊಂಡಿದೆ.
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಯಾಚಾರ ಆರೋಪದ
ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದೇವರಾಜೇಗೌಡ ಅವರನ್ನು ಎಸ್‌ಐಟಿ ಶುಕ್ರವಾರ ಸಂಜೆ ಒಂದು ದಿನದ ಮಟ್ಟಿಗೆ ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿತ್ತು.
ವಶಕ್ಕೆ ಪಡೆದಿದ್ದ ಅವಧಿ ಮುಗಿದಿದ್ದರಿಂದ ಶನಿವಾರ ಸಂಜೆ ಹಾಸನದ 5ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಕ್ಕೆ ಎಸ್‌ಐಟಿ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 5 ದಿನ ವಶಕ್ಕೆ ನೀಡುವಂತೆ ಮನವಿ ಮಾಡಿತು. ಆದರೆ, ನ್ಯಾಯಾಧೀಶರು 2 ದಿನಗಳ ಕಾಲ ಅಂದರೆ ಮೇ 20ರ ಸಂಜೆ 5 ಗಂಟೆಯವರೆಗೆ ಮಾತ್ರ ಎಸ್‌ಐಟಿ ವಶಕ್ಕೆ ನೀಡಿದರು.
ಆರೋಪಿ ದೇವರಾಜೇಗೌಡ ಅವರನ್ನು ವಶಕ್ಕೆ ತೆಗೆದುಕೊಂಡ ಎಸ್‌ಐಟಿ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ಯಿತು. ಸೋಮವಾರ ಸಂಜೆ 5 ಗಂಟೆಗೆ ಇದೇ ನ್ಯಾಯಾಲಯಕ್ಕೆ ಆರೋಪಿಯನ್ನು ಎಸ್‌ಐಟಿ ಹಾಜರುಪಡಿಸಬೇಕಿದೆ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.