ಜೇನುಕಲ್ ಮಾದರಿ ಸೀಗೆಗುಡ್ಡಕ್ಷೇತ್ರಾಭಿವೃದ್ಧಿ
Team Udayavani, Dec 20, 2021, 12:10 PM IST
ಹಾಸನ: ಅರಸೀಕೆರೆಯ ಜೇನುಕಲ್ ಸಿದ್ದೇಶ್ವರ ದೇವಸ್ಥಾನದ ಮಾದರಿ ಹಾಸನ ತಾಲೂಕಿನ ಸೀಗೆ ಗುಡ್ಡದ ಮಳೆಮಲ್ಲೇಶ್ವರ ಕ್ಷೇತ್ರವನ್ನು ಅಭಿವೃದ್ಧಿಪಡಿ ಸಲಾಗುವುದು ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.
ಹಾಸನ ತಾಲೂಕಿನ ಸಾಲಗಾಮೆ ಹೋಬಳಿ ವೀರಾಪುರದ ಗಡಿಯಿಂದ ಮಳೆಮಲೇಶ್ವರತಪ್ಪಲಿನ ವರೆಗೆ 3.50 ಕೋಟಿ ರೂ. ಅಂದಾಜಿನಲ್ಲಿ ಋಷ್ಯಶೃಂಗ ಪರ್ವತದ 7 ಕಿ.ಮೀ ರಸ್ತೆ ನಿರ್ಮಾಣ ಕಾಮಗಾರಿಗೆ ಸೀಗೆಗುಡ್ಡ ಮಠದ ಆವರಣದಲ್ಲಿ ಭಾನುವಾರ ಬೆಳಿಗ್ಗೆ ಭೂಮಿ ಪೂಜೆ ನೆರವೇರಿಸಿ ಬಳಿಕ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವಾಪರ ಯುಗದ ಹಿನ್ನೆಲೆ ಹೊಂದಿರುವ ಸೀಗೆನಾಡಿನ ಮಳೆಮಲ್ಲೇಶ್ವರ ಸನ್ನಿಧಿಗೆ ಉತ್ತಮ ರಸ್ತೆ ನಿರ್ಮಾಣ ಆಗಬೇಕು ಎಂಬುದು ಇಲ್ಲಿನ ಜನರ ದಶಕಗಳ ಬೇಡಿಕೆಯಾಗಿತ್ತು.ಯಡಿಯೂರಪ್ಪ ಸಹಕಾರದೊಂದಿಗೆ ಈ ಕಾಮಗಾರಿ ಭೂಮಿಪೂಜೆ ಮಾಡಲಾಗಿದೆ ಎಂದರು.
ಯಡಿಯೂರಪ್ಪ ಅವರು ಮುಖ್ಯ ಮಂತ್ರಿಯಾದ ಮೊದಲ ದಿನವೇ ಈ ಕಾಮಗಾರಿಗೆ 3.50 ರೂ.ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಕಳೆದ ಎರಡು ವರ್ಷಗಳಿಂದ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯುವುದು ಅಡಚಣೆ ಆಗಿತ್ತು. ದೆಹಲಿಗೆ ಭೇಟಿನೀಡಿ ಕೇಂದ್ರ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಾ ಗಿದ್ದರಿಂದ ಕಾರಣ ವಿಳಂಬವಾಗಿತ್ತು ಎಂದರು.
ಸೀಗೆನಾಡು ವ್ಯಾಪ್ತಿಯ 11 ಗ್ರಾಪಂಗಳು, ಬೇಲೂರುಹಾಗೂ ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆಒಳಪಡುತ್ತದೆ. ಇದು ಒಂದು ಪವಿತ್ರವಾದ ಸ್ಥಳ. 40ವರ್ಷಗಳಿಂದ ದೇವರ ಸನ್ನಿಧಿಗೆ ರಸ್ತೆ ಆಗಬೇಕು ಎಂಬ ಕನಸು ಯಡಿಯೂರಪ್ಪ ಅವರಿಂದ ಸಾಕಾರ ವಾಗಿದೆ. ಹಾಗಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಸಾಲಗಾಮೆ ರಸ್ತೆಯಿಂದ ಸೀಗೆಗುಡ್ಡದ ವರೆಗೆ ಗುಂಡಿ ಮುಕ್ತ ರಸ್ತೆ ನಿರ್ಮಾಣ ಆಗಬೇಕು ಎಂಬ ಜನರ ಅಪೇಕ್ಷೆಯಿದೆ. ವೀರಾಪುರ ಗಡಿಯಿಂದ ಸೀಗೆಗುಡ್ಡದ ತಪ್ಪಲಿನ ವರೆಗೆ 3.50 ಕೋಟಿ ರೂ.ವೆಚ್ಚದಲ್ಲಿ ಮೊದಲು ಹಂತದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮುಂದಿನದಿನಗಳಲ್ಲಿ ಉಳಿದ ರಸ್ತೆಯನ್ನು 3 ಕೋಟಿ ವೆಚ್ಚದ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು. ಮುಂದಿನದಿನಗಳಲ್ಲಿ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿ ಇಲ್ಲಿಗೆ ಭೇಟಿ ನೀಡುವ ಭಕ್ತರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಕಾರ್ಯಪ್ರವೃತ್ತರಾಗಲಿದ್ದೇವೆ ಎಂದು ತಿಳಿಸಿದರು.
ಹುಡಾ ಅಧ್ಯಕ್ಷ ಲಲಾಟ್ ಮೂರ್ತಿ, ಸೀಗೆ ಗ್ರಾಪಂಅಧ್ಯಕ್ಷೆ ಗೀತಾ ಮಣಿ, ಉಪಾಧ್ಯಕ್ಷ ಮಲ್ಲೇಶ್‌ಗೌಡ, ಸದಸ್ಯ ಕೃಷ್ಣೇಗೌಡ, ಕುಮಾರ್, ರೇವಣ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.