ದೃಢ ನಿರ್ಧಾರದಿಂದ ಪ್ಲಾಸ್ಟಿಕ್ ತ್ಯಜಿಸಿ
Team Udayavani, Oct 1, 2019, 5:09 PM IST
ಸಕಲೇಶಪುರ: ಎಲ್ಲರೂ ದೃಢ ನಿರ್ಧಾರದೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಪ್ಲಾಸ್ಟಿಕ್ ಬಳಕೆಯನ್ನುಸಂಪೂರ್ಣ ತ್ಯಜಿಸಲು ಪ್ರತಿಜ್ಞೆ ಮಾಡ ಬೇಕೆಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಹೇಳಿದರು. ಪಟ್ಟಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆಯಿಂದ ಏರ್ಪಡಿಸಿದ್ದ ಪ್ಲಾಸ್ಟಿಕ್ ನಿಷೇಧ ಜಾಗೃತಿ ಜಾಥಾದಲ್ಲಿಮಾತನಾಡಿದ ಅವರು, ಪ್ಲಾಸ್ಟಿಕ್ ನಿಂದಾಗುವ ದುಷ್ಪರಿಣಾಮದ ಅರಿವು ಮೂಡಿಸುವುದು ಅಗತ್ಯ ಎಂದರು.
ತಹಶೀಲ್ದಾರ್ ರಕ್ಷಿತ್ ಮಾತನಾಡಿ, ಪ್ಲಾಸ್ಟಿಕ್‌ಗಳನ್ನು ಅಂಗಡಿಗಳಲ್ಲಿ ಹಾಗೂ ಎಲ್ಲೂ ಕೂಡ ಮಾರಾಟ ಮತ್ತು ಬಳಕೆಮಾಡುವುದು ಬೇಡ. ಬಟ್ಟೆ ಇತರೆ ಬ್ಯಾಗುಗಳನ್ನು ಮಾರಾಟ ಮತ್ತು ಬಳಕೆ ಮಾಡಬೇಕು. ಪ್ಲಾಸ್ಟಿಕ್ ಭೂಮಿಗೆಬಿದ್ದರೇ ಅದು ಎಷ್ಟು ವರ್ಷಗಳಾದರೂ ಕರಗುವುದಿಲ್ಲ. ಉತ್ತಮ ಭವಿಷ್ಯಕ್ಕಾಗಿ ಈಗಲೇ ಯೋಚನೆ ಮಾಡಿ ಇಂದಿನಿಂದ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಅಂಗಡಿಗಳಲ್ಲಿ ಯಾರು ಪ್ಲಾಸ್ಟಿಕ್ ಮಾರಾಟ ಮಾಡುತ್ತಾರೆ ಅವರಿಗೆ ದಂದ ವಿಧಿಸಲಾಗುತ್ತದೆ ಎಂದರು.
ಪಟ್ಟಣದ ಎಆರ್‌ಟಿ ಕಚೇರಿ ಯಿಂದ ಪುರಭವನದವರೆಗೆ ಜಾಥ ನಡೆಸಲಾಯಿತು. ತಾಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರೀಶ್, ಸಾರಿಗೆ ಅಧಿಕಾರಿ ಅನಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ್, ತಾಪಂ ಸದಸ್ಯ ಯಡೇ ಹಳ್ಳಿ ಮಂಜುನಾಥ್, ತಾಪಂ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಉದಯ್ ಕುಮಾರ್, ತಾಪಂ ಸದಸ್ಯೆ ರುಕ್ಮಿಣಿ, ಸಮಾಜ ಸೇವಕ ಅರಸೀ ಕೆರೆಯ ಉಮಾಪತಿ ಮೊದಲಿಯಾರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.