ಸಕಾಲದಲ್ಲಿ ಕಚೇರಿಗೆ ಬಾರದಿದ್ದರೆ ಶಿಸ್ತು ಕ್ರಮ

Team Udayavani, Jul 13, 2019, 12:11 PM IST

hasan-tdy-1..

ಹಾಸನ ಜಿಲ್ಲಾಧಿಕಾರಿ ಅಕ್ರಂಪಾಷಾ ತಮ್ಮ ಕಚೇರಿಯ ವಿವಿಧ ವಿಭಾಗಗಳಿಗೆ ಶುಕ್ರವಾರ ಬೆಳಗ್ಗೆ ದಿಢೀರ್‌ ಭೇಟಿ ನೀಡಿ ಅಧಿಕಾರಿಗಳು-ನೌಕರರ ಹಾಜರಾತಿ ಪರಿವೀಕ್ಷಣೆ ನಡೆಸಿದಾಗ ಖಾಲಿ ಕುರ್ಚಿಗಳು ಕಂಡು ಬಂದವು.

ಹಾಸನ: ಜಿಲ್ಲಾಧಿಕಾರಿ ಅಕ್ರಂಪಾಷಾ ತಮ್ಮ ಕಚೇರಿಯ ವಿವಿಧ ವಿಭಾಗಗಳಿಗೆ ಶುಕ್ರವಾರ ದಿಢೀರ್‌ ಭೇಟಿ ನೀಡಿ ಸಕಾಲಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳು ಮತ್ತು ನೌಕರರನ್ನು ತರಾಟೆಗೆ ತೆಗೆದುಕೊಂಡರು.

ಓಡೋಡಿ ಬಂದರು: ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾದ ಅಕ್ರಂಪಾಷಾ, ತಮ್ಮ ಕಚೇರಿ ಸಂಕೀರ್ಣದ ವಿವಿಧ ಕೊಠಡಿಗಳಿಗೆ ಭೇಟಿ ನೀಡಿದಾಗ ಬಹುಪಾಲು ಅಧಿಕಾರಿ ಗಳು ಮತ್ತು ನೌಕರರು ಕಚೇರಿಗೆ ಬಾರದಿ ದ್ದರಿಂದ ಕುರ್ಚಿಗಳು ಖಾಲಿ ಇದ್ದವು. ಕೆಲವು ಕೊಠಡಿಗಳಲ್ಲಿ ಒಬ್ಬ ನೌಕರನೂ ಇಲ್ಲದಿದ್ದನ್ನು ಕಂಡು ಆಕ್ರೋಶಗೊಂಡ ಜಿಲ್ಲಾಧಿಕಾರಿ, ಕಚೇರಿಗೆ ನಿಗದಿತ ಸಮಯಕ್ಕೆ ಬಾರದ ಅಧಿ ಕಾರಿಗಳು ಮತ್ತು ನೌಕರರ ಮಾಹಿತಿ ಸಂಗ್ರಹಿಸಿದರು. ಜಿಲ್ಲಾಧಿಕಾರಿ ಅವರು ಪರಿವೀಕ್ಷಣೆ ಮಾಡುತ್ತಿರುವ ವಿಷಯ ತಿಳಿದು ಓಡೋಡಿ ಬಂದ ಕೆಲವು ಅಧಿಕಾರಿ ಗಳು ಹಾಗೂ ನೌಕ ರರ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ಶನಿವಾರದಿಂದ ನಿಗದಿತ ಸಮಯ ದೊಳಗೆ ಕಚೇರಿಯಲ್ಲಿ ಹಾಜರಿರದಿದ್ದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ನಿಗಾವಹಿಸಿ: ನೌಕರರು ಸಕಾಲದಲ್ಲಿ ಕಚೇರಿಗೆ ಆಗಮಿಸದಿದ್ದರಿಂದ ಸಾರ್ವಜನಿ ಕರು ಸ್ಪಂದನ ಕೇಂದ್ರ, ಆಧಾರ್‌ ಕೇಂದ್ರದಲ್ಲಿ ಕಾಯುತ್ತಿದ್ದಾರೆ ಎಂದು ಹೇಳಿದ ಜಿಲ್ಲಾಧಿ ಕಾರಿ ಅಕ್ರಂಪಾಷಾ, ಸಾರ್ವಜನಿಕರಿಗೆ ತೊಂದರೆ ಆಗದಂತೆ ನೌಕರರು ನಿಗಾವಹಿಸ ಬೇಕು ಎಂದು ತಾಕೀತು ಮಾಡಿದರು.

ಸ್ವಚ್ಛತೆ ಬಗ್ಗೆ ನಿಗಾ ಇರಲಿ: ಕಚೇರಿ ಸಂಕೀರ್ಣದ ಸ್ವಚ್ಛತೆ ಬಗ್ಗೆಯೂ ಪರಿಶೀಲನೆ ನಡೆಸಿ ಕಚೇರಿಯ ಆವರಣವನ್ನು ಸ್ವಚ್ಛವಾಗಿ ಸಿಕೊಳ್ಳಬೇಕು ಎಂದು ನೌಕರರಿಗೆ ಸೂಚನೆ ನೀಡಿದರು. ತಾವು ಕಾರ್ಯಭಾರ ವಹಿಸಿ ಕೊಂಡಾಗಿನಿಂದಲೂ ಆಡಳಿತದಲ್ಲಿ ಸುಧಾ ರಣೆ ತರುವ ನಿಟ್ಟಿನಲ್ಲಿ ಸಾಕಷ್ಟು ಕ್ರಮ ಕೈಗೊಳ್ಳುತ್ತಿದ್ದೇನೆ. ಗ್ರಾಮ ವಾಸ್ತವ್ಯ, ರೈತರ ಪೌತಿ ಖಾತೆ, ನಿರಾಶ್ರಿತ ಕೇಂದ್ರಕ್ಕೆ ಭೇಟಿ, ನಗರ ಸಂಚಾರ ಸೇರಿದಂತೆ ಹಲವು ಕ್ರಮ ಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಕಚೇರಿಗಳಿಗೆ ದಿಢೀರ್‌ ಭೇಟಿ ನೀಡಿ ಪರಿವೀಕ್ಷಣೆ ಮಾಡುವುದನ್ನು ಮುಂದುವರಿಸಲಾಗುವುದು ಎಂದರು.

ಕೆಲಸ ಮುಗಿದ ಬಳಿಕ ವಾಹನ ಕೊಂಡೊಯ್ಯಿರಿ: ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಕೆಲಸಕ್ಕೆ ಬರುವ ಸಾರ್ವಜನಿಕರು ಕಚೇರಿ ಆವರಣದಲ್ಲಿ ಕೆಲಕಾಲ ತಮ್ಮ ವಾಹನಗಳನ್ನು ನಿಲ್ಲಿಸಿ, ಕೆಲಸ ಮುಗಿದ ತಕ್ಷಣ ತೆಗೆದುಕೊಂಡು ಹೋಗಬೇಕು. ಕೆಲವು ಸಾರ್ವಜನಿಕರು, ವಿವಿಧ ಇಲಾಖೆ ನೌಕರರು ತಮ್ಮ ವಾಹನಗಳನ್ನು ಜಿಲ್ಲಾಧಿ ಕಾರಿ ಕಚೇರಿ ಆವರಣದಲ್ಲಿ ಬೆಳಗ್ಗೆ ನಿಲ್ಲಿಸಿ ಸಂಜೆ ತೆಗೆದುಕೊಂಡು ಹೋಗುವ ಪರಿಪಾಠ ಬೆಳೆಸಿಕೊಂಡಿದ್ದಾರೆ.

ಇನ್ನು ಮುಂದೆ ವಾಹನ ನಿಲುಗಡೆ ಉಸ್ತುವಾರಿಗೆ ಡಿ.ಗ್ರೂಪ್‌ ನೌಕರನನ್ನು ನೇಮಿಸಲಾಗುವುದು. ಯಾರು ಎಷ್ಟು ಸಮಯ ವಾಹನ ನಿಲುಗಡೆ ಮಾಡುತ್ತಾರೆ ಎಂಬುದನ್ನು ಆ ನೌಕರ ಮಾಹಿತಿ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗುವುದು ಎಂದೂ ಹೇಳಿದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.