ಮಂಜು ವಿರುದ್ಧ ಜಿಲ್ಲಾ ಮುಖಂಡರ ವಾಗ್ಧಾಳಿ
Team Udayavani, Mar 31, 2019, 1:08 PM IST
ಹಾಸನ: ಕಾಂಗ್ರೆಸ್ ಪಕ್ಷದಿಂದ 2 ಬಾರಿ ಶಾಸಕರಾಗಿ , ಎರಡೂವರೆ ವರ್ಷ ಮಂತ್ರಿಯಾಗಿ ಅಧಿಕಾರ ಅನುಭವಿಸಿ ಈಗ ಬಿಜೆಪಿ ಸೇರಿರುವ ಎ.ಮಂಜು ಅವಕಾಶವಾದಿ ರಾಜಕಾರಣಿ. ಎ.ಮಂಜು ವಿರೋಧಿ ಅಲೆಯಲ್ಲಿ ಬಿಜೆಪಿ ಜಿಲ್ಲೆಯಲ್ಲಿ ಕೊಚ್ಚಿ ಹೋಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ವಾಗ್ಧಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಮು, ಮಾಜಿ ಸಚಿವ ಎ.ಮಂಜು ಬಿಜೆಪಿಯನ್ನು ಮುಳುಗಿಸಿ ಕಾಂಗ್ರೆಸ್‌ಗೆ ಬಂದಿದ್ದ ಎ.ಮಂಜು, ಕಾಂಗ್ರೆಸ್‌ನಲ್ಲಿ ಶಾಸಕರಾಗಿ, ಮಂತ್ರಿಯಾಗಿ ಯಾವ ಸಾಧನೆ ಮಾಡಿದರು? ಇವರಿಂದ ಕಾಂಗ್ರೆಸ್ ಪಕ್ಷ ಸಂಘಟನೆಯಾಗಲಿಲ್ಲ. ಈಗ ಅವರು ಪಕ್ಷ ಬಿಟ್ಟಿರುವುದರಿಂದ ಕಾಂಗ್ರೆಸ್‌ಗೆ ಹಾನಿಯೇನೂ ಇಲ್ಲ. ಈಗ ಬಿಜೆಪಿ ಸೇರಿರುವ ಇಂಥ ಅವಕಾಶವಾದಿ ರಾಜಕಾರಣಿಗಳಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕೋಮುವಾದಿ ಶಕ್ತಿಗಳನ್ನು ಮಣಿಸಲು ಮತ್ತು ರಾಹುಲ್‌ಗಾಂಧಿ ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ಪ್ರಾದೇಶಿಕ ಪಕ್ಷಗಳೊದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ರಾಷ್ಟ್ರಮಟ್ಟದಲ್ಲಿ ಆಗಿದೆ. ಅದರ ಪರಿಣಾಮವಾಗಿ ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಕಾಂಗ್ರೆಸ್ ಮೆತ್ರಿ ಮಾಡಿಕೊಂಡಿದ್ದು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಮಾಡಲಿದ್ದಾರೆ. ಆ ನಿಟ್ಟಿನಲ್ಲಿ ಎಲ್ಲಾ ತಾಲೂಕುಗಳಲ್ಲೂ ಸಭೆ ನಡೆಸಿ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಳಾಯ್ತು: ಕೆಪಿಸಿಸಿ ಅಧ್ಯಕ್ಷ ಎಚ್.ಕೆ.ಮಹೇಶ್ ಮಾತನಾಡಿ, ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕನಾಗಿ, ಎರಡೂವರೆ ವರ್ಷ ಮಂತ್ರಿಯಾಗಿದ್ದ ಎ.ಮಂಜು ಅವರು ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ಪಕ್ಷವನ್ನೂ ಸಂಘಟಿಸಲಿಲ್ಲ. ಸಚಿವರಾಗಿದ್ದೂ ಗೆಲ್ಲಲಾಗದ ಮಟ್ಟಕ್ಕೆ ಕಾಂಗ್ರೆಸ್‌ನ್ನು ಹಾಳು ಮಾಡಿ ಈಗ ಬಿಜೆಪಿ ಸೇರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವರಾಗಿದ್ದಾಗ ಭ್ರಷ್ಟಾಚಾರದ ಆರೋಪಗಳು ಬಂದಾಗಲೆಲ್ಲಾ ಸೂಕ್ತ ಉತ್ತರ ಕೊಡಲಾಗದ ಎ.ಮಂಜು ಅವರು ದೇವೇಗೌಡರ ಕುಟುಂಬದವರನ್ನು ತೆಗಳಿದ್ದನ್ನು ಬಿಟ್ಟರೆ ಜಿಲ್ಲೆಗೆ ಏನೂ ಕೊಡುಗೆ ನೀಡಲಿಲ್ಲ. ಇವರನ್ನು ಮಂತ್ರಿ ಮಾಡಿ ಎಂದು ದೆಹಲಿಯ ವರಿಷ್ಠರ ಬಳಿಗೆ ನಿಯೋಗ ಹೋಗಿ ಹೋರಾಟ ಮಾಡಿದೆವು.
ಆದರೆ ಎ.ಮಂಜು ಮಂತ್ರಿಯಾಗಿ ವಸೂಲಿಗಿಳಿದಿದ್ದು ಬಿಟ್ಟರೆ ಏನನ್ನೂ ಮಾಡಲಿಲ್ಲ. ಅಧಿಕಾರ ಅನುಭವಿಸಿ ಪಕ್ಷವನ್ನು ಹಾಳು ಮಾಡುವ ಹುನ್ನಾರ ನಡೆಸಿದರು. ಅಧಿಕಾರದಲ್ಲಿದ್ದಾಗ ಸಾಧನೆ ಮಾಡದೆ ಈಗ ಮೋದಿ ನೋಡಿ ಮತಹಾಕಿ ಎಂದು ಜನರ ಮುಂದೆ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.
ಮೈತ್ರಿ ಅಭ್ಯರ್ಥಿ ಗೆಲುವು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್ ಮಾತನಾಡಿ, ಪಕ್ಷದ ವರಿಷ್ಠರು ತೆಗೆದುಕೊಂಡಿರುವ ತೀರ್ಮಾನದಂತೆ ಹಾಸನ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್ ಸಜ್ಜಾಗಿದ್ದು, ಪ್ರಜ್ವಲ್ ರೇವಣ್ಣ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಎ.ಮಂಜು ಕುಟುಂಬದಲ್ಲೂ ರಾಜಕಾರಣ: ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳುತ್ತಿರುವ ಎ.ಮಂಜು ಕುಟುಂಬ ರಾಜಕಾರಣ ಮಾಡಿದ್ದಾರೆ. ಎ.ಮಂಜು ಅವರ ಪತ್ನಿ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರು. ಅವರ ಪುತ್ರ ಡಾ.ಮಂತರ್‌ಗೌಡ ಈಗ ಜಿ.ಪಂ ಸದಸ್ಯ. ಹಾಗಾಗಿ ಕುಟುಂಬ ರಾಕಾರಣದ ಬಗ್ಗೆ ಮಾತನಾಡಲು ಎ.ಮಂಜು ಅವರಿಗೆ ನೈತಿಕತೆ ಇದೆಯೇ ಎಂದು ವಿಧಾನ ಪರಿಷತ್ ಸದಸ್ಯ, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಎಂ.ಎ.ಗೋಪಾಲಸ್ವಾಮಿ ಹೇಳಿದರು.
ಎಲ್ಲಾ ರಾಕಾರಣಿಗಳೂ ಕುಟುಂಬ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಕಟುಂಬ ರಾಜಕಾರಣದ ಆರೋಪ ಅಪ್ರಸ್ತುತ. ಹಿಂದಿನ ಸಿದ್ಧರಾಮಯ್ಯ ಅವರ ಸರ್ಕಾರದಲ್ಲಿ ಹಾಗೂ ಇಂದಿನ ಸಮ್ಮಿಶ್ರ ಸರ್ಕಾರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮೈತ್ರಿ ಆಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ತಂದು ಕೊಡಲಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.