ಗರಿಷ್ಠ ಪರಿಹಾರ ಕೋರಲು ಜಿಲ್ಲಾ ಪಂಚಾಯತ್ ನಿರ್ಧಾರ
Team Udayavani, Aug 28, 2019, 1:05 PM IST
ಹಾಸನ ಜಿಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷೆ ಬಿ.ಎಸ್.ಶ್ವೇತಾ ಮಾತ ನಾಡಿದರು. ಉಪಾಧ್ಯಕ್ಷ ಎಚ್.ಪಿ. ಸ್ವರೂಪ್, ಉಪ ಕಾರ್ಯದರ್ಶಿ ಮಹೇಶ್ ಉಪಸ್ಥಿತರಿದ್ದರು.
ಹಾಸನ: ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿರುವ ಹಾನಿಯ ಬಗ್ಗೆ ಜಿಲ್ಲಾಡಳಿ ತವು ಸಲ್ಲಿಸಿರುವ ವರದಿಯನ್ವಯ ಗರಿಷ್ಠ ಪರಿಹಾರದ ಮೊತ್ತವನ್ನು ಜಿಲ್ಲೆಗೆ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ವನ್ನು ಜಿಲ್ಲಾ ಪಂಚಾಯಿತಿ ಕೈಗೊಂಡಿದೆ.
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್.ಶ್ವೇತಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಕೆ.ಎಸ್.ಲಿಂಗೇಶ್ ಅವರು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಭ ವಿಸಿರುವ ಹಾನಿಯ ಬಗ್ಗೆ ಜಿಲ್ಲಾಧಿಕಾರಿಯವರು ವರದಿ ಸಲ್ಲಿಸುತ್ತಾರೆ. ಆದರೆ ಜಿಲ್ಲಾ ಪಂಚಾಯಿತಿ ಯಿಂದಲೂ ಪ್ರತ್ಯೇಕ ಪ್ರಸ್ತಾವನೆಯನ್ನು ಮುಖ್ಯ ಮಂತ್ರಿಯವರು, ಕಂದಾಯ ಸಚಿವರಿಗೆ ಸಲ್ಲಿಸಿದರೆ ಹೆಚ್ಚು ಪರಿಹಾರದ ಮೊತ್ತ ಪಡೆಯಲು ಸಾಧ್ಯ ವಾಗುತ್ತದೆ. ನಾವೂ ಸರ್ಕಾರದ ಮಟ್ಟದಲ್ಲಿ ಒತ್ತಡ ತರುತ್ತೇವೆ ಎಂದು ನೀಡಿದ ಸಲಹೆಗೆ ಸಮ್ಮತಿಸಿದ ಸಭೆಯು ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಭೆಯು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿತು.
6 ತಾಲೂಕುಗಳಲ್ಲಿ ಅಪಾರ ಹಾನಿ: ಜಿಲ್ಲೆಯ 6 ತಾಲೂಕುಗಳಲ್ಲಿ ಅಪಾರ ಹಾನಿ ಸಂಭವಿಸಿದ್ದು ರಸ್ತೆಗಳು, ಸೇತುವೆಗಳು, ವಿದ್ಯುತ್ ಮಾರ್ಗಗಳು, ಶಾಲಾ ಕಟ್ಟಡಗಳು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ಶಾಸಕರು ಮತ್ತು ಸದಸ್ಯರು ಸಭೆಯಲ್ಲಿ ವಿವರ ನೀಡಿದರು.
ಪರಿಹಾರಕ್ಕಾಗಿ ಮನವಿ: ಈ ಸಂದರ್ಭದಲ್ಲಿ ಮಾತ ನಾಡಿದ ಅಧ್ಯಕ್ಷೆ ಶ್ವೇತಾ, ತಾವು ಈಗಾಗಲೇ ಒಂದು ಸುತ್ತು ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಶೀಘ್ರದಲ್ಲೇ ಸದಸ್ಯರೊಂದಿಗೆ ತೆರಳಿ ಅಧಿ ಕಾರಿಗಳಿಂದಲೂ ಮಾಹಿತಿ ಪಡೆದು ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಹೇಳಿದರು.
ಶಾಲಾ ಕಟ್ಟಡ ದುರಸ್ತಿಗೆ ಕ್ರಮ: ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಮಾತನಾಡಿ ಜಿಲ್ಲೆಯಲ್ಲಿ ತೀವ್ರ ಹಾನಿಯಾಗಿರುವ ಶಾಲೆಗಳನ್ನು ಗುರುತಿಸಿ ಪಟ್ಟಿಮಾಡಿ ವರದಿ ಸಲ್ಲಿ ಸಿದ್ದು, ಶಾಲಾ ಕಟ್ಟಡಗಳ ದುರಸ್ತಿಗೆ ಅಧಿ ಕಾರಿಗಳು ಎಲ್ಲಾ ಸದಸ್ಯರ ಭೇಟಿಯಾಗಿ ಮಾಹಿತಿ ಪಡೆಯಲಿದ್ದಾರೆ. ಈ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದರು.
ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಹಾಗೂ ಆರೋಗ್ಯ, ಹಣಕಾಸು ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗಳ ನಿರ್ಣಯಗಳನ್ನು ಸಭೆಯು ಚರ್ಚೆ ಇಲ್ಲದೇ ಅನುಮೋದಿಸಿತು.
ಉಪಾಧ್ಯಕ್ಷ ಎಚ್.ಪಿ. ಸ್ವರೂಪ್, ಉಪ ಕಾರ್ಯ ದರ್ಶಿಗಳಾದ ಮಹೇಶ್, ಅರುಣ್ ಕುಮಾರ್, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್‌ಗೌಡ ಮತ್ತಿತರು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.