ಧರ್ಮದ ಬಗ್ಗೆ ಮೂಗು ತೂರಿಸಬೇಡಿ: ಡಿಕೆಶಿಗೆ ಪಾಟೀಲ್‌ ಟಾಂಗ್‌

Team Udayavani, Apr 13, 2019, 4:55 PM IST

has-1
ಅರಸೀಕೆರೆ: ಪ್ರತ್ಯೇಕ ಲಿಂಗಾಯತ ಧರ್ಮ ನನ್ನ ಅಸ್ಮಿತೆ ಎನ್ನುವ ಮೂಲಕ ಗೃಹ ಸಚಿವ ಎಂ.ಬಿ. ಪಾಟೀಲ್‌ ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಮತ್ತೂಮ್ಮೆ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಮಲ್ಲೇನಹಳ್ಳಿ ಶಿವಶಂಕರ ಸ್ವಾಮಿ ನಿವಾಸದಲ್ಲಿ ತಾಲೂಕಿನ ಲಿಂಗಾಯತ ಸಮಾಜದ ಮುಖಂಡರಿಂದ ಗೌರವ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.
ಪ್ರತ್ಯೇಕ ಲಿಂಗಾಯತ ಧರ್ಮ ನನ್ನ ಅಸ್ಮಿತೆ ಎನ್ನುವ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಆದರೆ, ಈ ವಿಚಾರ ಪ್ರಸ್ತಾಪಿಸಲು ಜಲಸಂಪನ್ಮೂಲ ಸಚಿವರು ಯಾರು ಎಂಬುದೇ ತಿಳಿಯುತ್ತಿಲ್ಲ. ತನ್ನ ಮನೆ ಸರಿಪಡಿಸಿಕೊಳ್ಳಲಾಗ
ದವರು ಮತ್ತೂಂದು ಧರ್ಮದ ಬಗ್ಗೆ ಮಾತ ನಾಡುತ್ತಿದ್ದಾರೆ. ಹಳೇ ಮೈಸೂರು ಪ್ರಾಂತ್ಯದ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಇವರು ಕಾಂಗ್ರೆಸ್‌ನಿಂದ ಎಷ್ಟು ಶಾಸಕರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕೆಂದರು.
ಯಾರಿಗೂ ಒಳ್ಳೇದಲ್ಲ: ವಾಸ್ತವ ಸಂಗತಿ ಮರೆ ಮಾಚಲು ಪದೇ ಪದೇ ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಕ್ಷಮಾಪಣೆ ಕೇಳುವುದು ಸರಿಯಲ್ಲ. ಒಕ್ಕಲಿಗ ಸಮುದಾಯದ ವಿಚಾರ ದಲ್ಲಿ ತಾನು ಪ್ರವೇಶಿಸಬಾರದು, ಹಾಗೆಯೇ
ಜಲಸಂಪನ್ಮೂಲ ಸಚಿವರೂ ವೀರಶೈವ ಲಿಂಗಾಯಿತ ಧರ್ಮದ ಬಗ್ಗೆ ಮೂಗು ತೂರಿಸುವ ಕೆಲಸ ಮಾಡಬಾರದು. ಇಂತಹ ಚಟ ಯಾರಿಗೂ ಒಳ್ಳೆಯದಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್‌ರ ಕಾರ್ಯವೈಖರಿ ಕುರಿತು ನೇರ ತಿರುಗೇಟು ನೀಡಿದರು.
ಬದ್ಧ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ದೊಡ್ಡಮಟ್ಟದಲ್ಲಿ ಪ್ರಸ್ತಾಪವಾಗಿದ್ದು ನಿಜ. ತನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಆಕಸ್ಮಿಕವಾಗಿಯಾದರೂ ಈ ವಿಚಾರ ಪ್ರಸ್ತಾಪಿಸಿ ಮತಯಾಚನೆ ಮಾಡಿಲ್ಲ. ನಮ್ಮ ಸಮಸ್ಯೆ ಪರಿಹಾರಕ್ಕೆ ಮಠಾಧೀಶರು ಒಂದೆಡೆ ಸೇರಿ ವಿವಾದ ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದ್ದು ಮುಂದೆ ಎಲ್ಲವೂ ಸರಿಹೋಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಭರವಸೆ: ಹಳೇ ಮೈಸೂರು ಪ್ರಾಂತ್ಯದಲ್ಲಿ 25 ಲಕ್ಷಕ್ಕೂ ಹೆಚ್ಚಿನ ವೀರಶೈವ, ಲಿಂಗಾಯತ ಮತದಾರರಿದ್ದು ಕಾಂಗ್ರೆಸ್‌ನಿಂದ ಯಾವೊಬ್ಬ ಮುಖಂಡರಿಗೂ ಸೂಕ್ತ ಸ್ಥಾನಮಾನ ದೊರೆತಿಲ್ಲ ಎನ್ನುವ ದೂರು ಬಂದಿವೆ. ಚುನಾವಣೆ ಮುಗಿದ ಬಳಿಕ ವರಿಷ್ಠರೊಂದಿಗೆ ಚರ್ಚಿಸಿ ಸ್ಥಾನಮಾನ ಕೊಡಿಸುವ ಭರವಸೆ ನೀಡಿದರು.
ಮೇ 23ರ ನಂತರ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎನ್ನುವ ಬಿಜೆಪಿ ಮುಖಂಡರ ವಾದ ಅರ್ಥಹೀನ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಗೆಲುವು ಸಾಧಿಸಲಿದ್ದು ,ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಮೈತ್ರಿ ಕೂಟಕ್ಕೆ ಬರಲಿವೆ ಎಂದರು. ಶಾಸಕ ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಾವಗಲ್‌ ಮಂಜುನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಾಣಾವರ ಶ್ರೀನಿವಾಸ್‌, ಜಿ.ಬಿ.ಶಶಿಧರ್‌, ಹುಲ್ಲೇಕೆರೆ ಕುಮಾರ್‌ ಇದ್ದರು.
ಜಿಲ್ಲಾ ಉಪಾಧ್ಯಕ್ಷರಾದ ಎಂ.ಜಿ. ಶಿವಶಂಕರಸ್ವಾಮಿ, ಗಂಜಿಗೆರೆ ಚಂದ್ರ ಶೇಖರ್‌, ದಂದೂರು ರವಿ, ಬಿ.ಜಿ.ನಿರಂಜನ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಕೋಡಿಹಳ್ಳಿ ರಘು, ವಕೀಲ ಮೋಹನ್‌, ಸಂತೋಷ್‌, ಜಯಣ್ಣ ಸೇರಿ ಅನೇಕ ವೀರಶೈವ ಲಿಂಗಾಯತ ಮುಖಂಡರು ಗೃಹ ಸಚಿವರಿಗೆ ಮೈಸೂರು ಪೇಟ ತೊಡಿಸಿ ಗೌರವಿಸಿದರು.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.