ರಾಸಾಯನಿಕ ಬಳಸಿ ಮಾವಿನಹಣ್ಣು ಮಾಡದಿರಿ
Team Udayavani, May 15, 2019, 2:47 PM IST
ಅರಸೀಕೆರೆ: ಬೇಸಿಗೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಹಾಗೂ ರಾಸಾಯನಿಕ ವಸ್ತುಗಳನ್ನು ಬಳಕೆ ಮಾಡಿ ಮಾವಿನಕಾಯಿಗಳನ್ನು ಕೃತಕವಾಗಿ ಹಣ್ಣು ಮಾಡಿ ಮಾರಾಟ ಮಾಡುವ ಹಣ್ಣುಗಳಿಂದ ಮನುಷ್ಯನ ರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ದೂರಿನ ಹಿನ್ನಲೆಯಲ್ಲಿ ತಹಶೀಲ್ದಾರ್ ಹಾಗೂ ತಾಲೂಕು ಆಹಾರ ಸುರಕ್ಷತಾಧಿಕಾರಿ ಡಾ.ಜಿ.ಎಸ್ ನಾಗಪ್ಪ ಜಂಟಿ ಕಾರ್ಯಚರಣೆ ನಡೆಸುವ ಮೂಲಕ ನಗರದಲ್ಲಿನ ಮಾವಿನಕಾಯಿ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ಪರಿಶೀಲನೆ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.
ನಗರದ ಹುಳಿಯಾರ್ ರಸ್ತೆ ಹಾಗೂ ಮಟನ್ ಮಾರ್ಕೆಟ್ ರಸ್ತೆಯಲ್ಲಿರುವ ಮಾವಿನಹಣ್ಣುಗಳ ಸಗಟು ಮಾರಾಟ ಮಳಿಗೆಗಳಿಗೆ ತಹಶೀಲ್ದಾರ್ ಸಂತೋಷಕುಮಾರ್ ಮತ್ತು ತಾಲೂಕು ಆಹಾರ ಸುರಕ್ಷತಾಧಿಕಾರಿಗಳಾದ ಡಾ.ಜಿ.ಎಸ್ ನಾಗಪ್ಪ ಮತ್ತು ತಂಡದೊಂದಿಗೆ ದಿಢೀರ್ ಭೇಟಿ ನೀಡಿ ಕೃತಕವಾಗಿ ವಿಷಕಾರಿ ರಾಸಾಯನಿಕ ವಸ್ತುಗಳನ್ನು ಬಳಕೆ ಮಾಡಿ ಮಾವಿನ ಕಾಯಿಗಳನ್ನು ಕೃತಕವಾಗಿ ಹಣ್ಣುಗಳನ್ನು ಮಾಡಲಾಗುತ್ತಿದೆಯೇ ಎಂದು ಪರಿಶೀಲನೆ ನಡೆಸಿದರು.
ಮಾಲೀಕರಿಗೆ ಎಚ್ಚರಿಕೆ: ಮಾವಿನ ಕಾಯಿಗಳಿಗೆ ವಿಷಕಾರಿ ರಾಸಾಯನಿಕ ವಸ್ತುಗಳನ್ನು ಸಿಂಪಡಿಸಿ ಅವುಗಳನ್ನು ಕೃತಕ ರೀತಿಯಲ್ಲಿ ಹಣ್ಣು ಮಾಡದಂತೆ ಮಾಲಿಕರಿಗೆ ಎಚ್ಚರಿಕೆ ನೀಡಿದರು.
ಈ ರೀತಿಯ ಪ್ರಕರಣಗಳಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಗಳ ಬಗ್ಗೆ ತಿಳಿಸಿದ ಅವರು ಕೊಳೆತ ಹಣ್ಣುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿವಂತೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತೆ ಕಾಪಾಡಲು ಸೂಚಿಸಿದರು.
ಪರವಾನಗಿ ಅಗತ್ಯ: ಈಗಾಗಲೇ ಅಂಗಡಿ ಮಾಲೀಕರು ನಗರ ಸಭೆಯವತಿಯಿಂದ ಪರವಾನಗಿ ಪಡೆದಿದ್ದರೂ ಸಹ ಕಡ್ಡಾಯವಾಗಿ ಆಹಾರ ಸುರಕ್ಷತೆಗೆ ಸಂಬಂಧಿಸಿದ ಇಲಾಖೆವತಿಯಿಂದ ಅಧಿಕೃತ ಪರವಾನಗಿ ಪಡೆಯದೇ ವ್ಯಾಪಾರ ನಡೆಸಿದರೆ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಂಡು ದಂಡ ಮತ್ತು ಶಿಸ್ತು ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚು ಹರಡುವ ಸಾಧ್ಯತೆ ಇದ್ದು, ವಿಷಪೂರಿತ ರಾಸಾಯನಿಕ ಬಳಸಿ ಮಾವಿನ ಹಣ್ಣು ಮಾಡುವುದು ಅಪರಾದವಾಗಿದ್ದು, ವ್ಯಕ್ತಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುವ ಕೃತಕ ಹಣ್ಣುಗಳ ತಯಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ತಾಲೂಕು ಆಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸುತ್ತಿದೆ. ಮಾವಿನ ಹಣ್ಣುಗಳ ಸಾಂಪಲ್ ಪಡೆದಿದ್ದು, ಇದನ್ನು ರಾಸಾಯನಿಕ ಪರೀಕ್ಷೆಗೆ ಕಳುಹಿಸಲಾಗುತ್ತದೆ. ರಾಸಾಯನಿಕ ವಸ್ತುಗಳನ್ನು ಬಳಸಿ ಕೃತಕವಾಗಿ ಹಣ್ಣುಗಳನ್ನು ಮಾಡಿದ್ದರೆ ಅಂತಹವರ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು. ಪರಿಶೀಲನಾ ತಂಡದಲ್ಲಿ ಕಂದಾಯ ಇಲಾಖೆಯ ಅಧಿಕಾರಿ ಮಂಜುನಾಥ್ , ಆರೋಗ್ಯ ಇಲಾಖೆ ನಿರೀಕ್ಷಕರಾದ ಜಬ್ಬೀರ್ ಪಾಷಾ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.