ಬರಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ನಿರ್ದೇಶನ
ನೀರು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಿ : ನವೀನ್‌ರಾಜ್‌ಸಿಂಗ್ ಸೂಚನೆ
Team Udayavani, May 7, 2019, 2:21 PM IST
ಹಾಸನ ಡೀಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬರ ನಿರ್ವಹಣೆಯ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಪಸ್ಥಿತದಿದ್ದರು.
ಹಾಸನ: ಜಿಲ್ಲೆಯಲ್ಲಿ ಬರಪರಿಸ್ಥಿತಿಯನ್ನು ಸಮರ್ಪಕ ವಾಗಿ ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿ ಸಿಬ್ಬಂದಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೆಶಿಪ್‌ನ ಮುಖ್ಯ ಯೋಜನಾಧಿಕಾರಿ ನವೀನ್‌ರಾಜ್ ಸಿಂಗ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮ ವಾರ ಬರ ನಿರ್ವಹಣೆಯ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯ ಎಲ್ಲಾ 8 ತಾಲೂಕುಗಳೂ ಬರ ಪೀಡಿತ ಎಂದು ಘೋಷಿಸಲಾಗಿದೆ. ಎಲ್ಲಿಯೂ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ವಿಶೇಷ ನಿಗಾವಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅನುದಾನಕ್ಕೆ ಕೊರತೆ ಇಲ್ಲ:ಯಾವುದೇ ಗ್ರಾಮವೂ ಕುಡಿಯುವ ನೀರಿನ ಪೂರೈಕೆಯಿಂದ ವಂಚಿತವಾಗಬಾರದು. ಕೊಳವೆ ಬಾವಿ, ಟ್ಯಾಂಕರ್ ಯಾವ ರೂಪದಲ್ಲಿಯಾದರೂ ಸರಿ ಕುಡಿಯುವ ನೀರು ಒದಗಿಸಿ ಎಂದು ತಾಕೀತು ಮಾಡಿದ ಅವರು, ಈಗಾಗಲೇ ಯೋಜಿಸಲಾಗಿರುವ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ ಬಾಕಿ ಬಿಲ್ಗಳನ್ನು ಶೀಘ್ರವಾಗಿ ಪಾವತಿಗಾಗಿ ಸಲ್ಲಿಸಿ ಎಂದರು.
ಗ್ರಾಮೀಣ ಪ್ರದೇಶಗಳು ಕುಡಿಯವ ನೀರಿನ ಪೂರೈಕೆ ಮೇಲ್ವಿಚಾರಣೆಯನ್ನು ಜಿಲ್ಲಾ ಪಂಚಾಯತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲೂಕು ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಕೋಶ, ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಮುಖ್ಯಸ್ಥರು ಜವಾಬ್ದಾರಿ ವಹಿಸಿ ಜನರಿಗೆ ತೊಂದರೆಯಾಗದಂತೆ ಗಮನ ಹರಿಸಬೇಕು ಎಂದು ಹೇಳಿದರು.
ನೀರು, ಮೇವಿನ ವ್ಯವಸ್ಥೆ ಮಾಡಿ: ದನಕರುಗಳಿಗೆ ಗೂ ಕುಡಿಯುವ ನೀರು, ಮೇವಿನ ಕೊರತೆಯಾಗ ದಂತೆ ನೋಡಿಕೊಳ್ಳಬೇಕು. ಪಶುಪಾಲನಾ ಇಲಾಖೆ ಜಿಲ್ಲೆಯಲ್ಲಿನ ಮೇವಿನ ಲಭ್ಯತೆ ಬಗ್ಗೆ ಸಮೀಕ್ಷೆ ನಡೆಸಿ ಸಮಸ್ಯಾತ್ಮಕವೆನಿಸುವ ಪ್ರದೇಶಗಳಲ್ಲಿ ಮೇವಿನ ಬ್ಯಾಂಕ್ ಹಾಗೂ ಗೋಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಅಂತರ್ಜಲ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಿ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಯಾವುದೇ ಗ್ರಾಮದಲ್ಲಿಯಾಗಲಿ ಉದ್ಯೋಗವ ಕಾಶಗಳ ಕೊರತೆ ಎದುರಾಗಬಾರದು. ಉದ್ದೇಶಿತ 50 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಸಿ ಕಿಂಡಿ ಅಣೆಕಟ್ಟೆಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಅಂತರ್ಜಲ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಳ್ಳಿ ಎಂದರು.
ಶೀಘ್ರದಲ್ಲೇ ಮುಂಗಾರು ಪ್ರಾರಂಭವಾಗಲಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂ ಕಿನ ಹವಾಗುಣಕ್ಕೆ ಅನುಗುಣವಾಗಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ, ರಸಗೊಬ್ಬರಗಳನ್ನು ದಾಸ್ತಾನು ಇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ರೈತರಿಗೆ ಬೇಸಾ ಯದ ಬಗ್ಗೆ ಪೂರಕ ಮಾಹಿತಿ, ಸಹಕಾರ ನೀಡಬೇಕು ಎಂದು ನವೀನ್‌ರಾಜ್ ಸಿಂಗ್ ಹೇಳಿದರು.
20 ಸಾವಿರ ಟನ್ ಆಲೂಗಡ್ಡೆ ದಾಸ್ತಾನು: ಈಗಾಗಲೇ ದಾಸ್ತಾನು 20ಸಾವಿರ ಟನ್ ಬಿತ್ತನೆ ಆಲೂಗಡ್ಡೆ ದಾಸ್ತಾನು ಆಗಿರುವುದರಿಂದ ರೈತರ ಅಗತ್ಯಕ್ಕೆ ತಕ್ಕಂತೆ ಅದನ್ನು ವಿತರಣೆ ಮಾಡಿ ಸಬ್ಸಿಡಿ ಹಣ ಬಿಡುಗಡೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತ ವಾಗಿ ಸ್ಪಂದಿಸಿ ನೆರವು ನೀಡಿ ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಜಿಲ್ಲೆಯಲ್ಲಿ ಈವರೆಗೆ ಕುಡಿಯುವ ನೀರು ಪೂರೈಕೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪುಟ್ಟ ಸ್ವಾಮಿ ಅವರು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳ ಬಗ್ಗೆ ವಿವರಿಸಿದರು. ಉಪವಿಭಾಗಾಧಿ ಕಾರಿಗಳಾದ ಎಚ್.ಎಲ್. ನಾಗರಾಜು, ಕವಿತಾ ರಾಜಾರಾಂ, ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.