ಕೃಷಿ ತ್ಯಾಜ್ಯ ಬಳಸಿ ಪರಿಸರ ಸ್ನೇಹಿ ಬ್ಯಾಗ್


Team Udayavani, Jan 24, 2020, 1:00 PM IST

hasan-tdy-2

ಚನ್ನರಾಯಪಟ್ಟಣ/ಶ್ರವಣಬೆಳಗೊಳ: ದೇಶದಲ್ಲಿ ಪ್ಲಾಸ್ಟಿಕ್‌ ಬಳಕೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಸರ್ಕಾರ ಕಾನೂನು ಮಾಡಿದ್ದರೂ ಪರ್ಯಾಯ ವಸ್ತುಗಳನ್ನು ಸಾರ್ವಜನಿಕರಿಗೆ ನೀಡುತ್ತಿಲ್ಲ. ಆದರೆ ತಾಲೂಕಿನ ಶ್ರವಣಬೆಳಗೊಳ ಬಾಹುಬಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಕಾಳಜಿಯಿಂದ ತ್ಯಾಜ್ಯವಸ್ತುಗಳನ್ನು ಬಳಕೆ ಮಾಡಿಕೊಂಡು ಪರಿಸರ ಸ್ನೇಹಿ ಬ್ಯಾಗ್‌ ತಯಾರಿಕೆಗೆ ಮುಂದಾಗಿದ್ದಾರೆ. ಪ್ಲಾಸ್ಟಿಕ್‌ ಬ್ಯಾಗ್‌ ಬದಲಾಗಿ ಬಟ್ಟೆ ಬ್ಯಾಗ್‌ ಬಳಕೆ ಮಾಡಬಹುದು. ಆದರೆ ಇದು ದುಬಾರಿಯಾಗಲಿದೆ, ವರ್ತಕರಿಗೂ ಹೊರೆ ಆಗುವುದಲ್ಲದೇ ಗ್ರಾಹಕರು ಹೆಚ್ಚು ಹಣ ಕೊಡಬೇಕಾಗುತ್ತದೆ. ಹಾಗಾಗಿ ಕಡಿಮೆ ಬೆಲೆಯ ಕೈ ಚೀಲ ಮಾರುಕಟ್ಟೆಯಲ್ಲಿ ದೊರೆತರೆ ವರ್ತಕರು ಕೊಂಡು ಗ್ರಾಹಕರಿಗೆ ಅದರಿಂದ ಸಾಮಗ್ರಿಯನ್ನು ಹಾಕಿಕೊಡಲು ಅನುಕೂಲವಾಗುತ್ತದೆ. ಇದನ್ನು ಮನಗಂಡ ಬಾಹುಬಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಪೇಪರ್‌ ಬ್ಯಾಗ್‌ ತಯಾರಿಕೆಯಲ್ಲಿ ಮುಂದಾಗಿದ್ದಾರೆ.

ಕ್ಷಣಾರ್ಧದಲ್ಲಿ ಬ್ಯಾಗ್‌ ಸಿದ್ಧ: ಪರಿಸರ ಸ್ನೇಹಿ ಬ್ಯಾಗ್‌ ತಯಾರಿಕೆಗೆ ನೈಸರ್ಗಿಕ ಹಾಗೂ ಕೃಷಿ ತ್ಯಾಜ್ಯಗಳನ್ನು ಬಳಕೆ ಮಾಡಿಕೊಂಡು ಎರಡರಿಂದ ಮೂರು ಕೇಜಿ ತೂಕದ ಸಾಮಗ್ರಿಯನ್ನು ಬ್ಯಾಗಿನಲ್ಲಿ ತೆಗೆದುಕೊಂಡು ಹೋಗಲು ಅನುಕೂಲವಾಗುಂತೆ ಬ್ಯಾಗ್‌ ತಯಾರಿಕೆ ಮಾಡಲಾಗುತ್ತಿದೆ. ಇದಕ್ಕೆ ಕೇವಲ 40 ಪೈಸೆಯಿಂದ 3 ರೂ. ವೆಚ್ಚ ತಗುಲಲಿದ್ದು ಕ್ಷಣಾರ್ಧದಲ್ಲಿ ಪರಿಸರ ಸ್ನೇಹಿ ಬ್ಯಾಗ್‌ ಸಿದ್ಧಗೊಳ್ಳುತ್ತಿದೆ.

ಪ್ಲಾಸ್ಟಿಕ್‌ ಮುಕ್ತ ಭಾರತ: ದೇಶದ ಪ್ರತಿ ನಗರ ಸಭೆ, ನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮುಖ್ಯ ಕೇಂದ್ರದಲ್ಲಿನ ನೈಸರ್ಗಿಕ ಹಾಗೂ ಕೃಷಿ ತ್ಯಾಜ್ಯವನ್ನು ಬಳಸಿ ಪರಿಸರ ಸ್ನೇಹಿ ಬ್ಯಾಗ್‌ ತಯಾರಿಕೆಗೆ ಮುಂದಾದರೆ ಪ್ಲಾಸ್ಟಿಕ್‌ ಮುಕ್ತ ಭಾರತ ಆಗುವುದರಲ್ಲಿ ಸಂದೇಹವಿಲ್ಲ, ಇನ್ನು ಇದರಿಂದ ಅನೇಕ ಮಂದಿಗೂ ಉದ್ಯೋಗ ದೊರೆಯಲಿದ್ದು ಹಲಾವು ಕುಟುಂಬಗಳು ನೆಮ್ಮದಿಯಾಗಿ ಬದುಕಬಹುದಾಗಿದೆ.

ಮೋದಿ ಕನಸು ಇಲ್ಲಿ ನನಸು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯಂದು ದೇಶವನ್ನು ಪ್ಲಾಸ್ಟಿಕ್‌ ಮುಕ್ತ ಮಾಡಬೇಕು ಎಂದು ಕರೆ ನೀಡಿದಲ್ಲದೆ ಸ್ವತ್ಛ ಸರ್ವೇಕ್ಷಣ ಅಭಿಯಾನ ಪ್ರಾರಂಭಿಸಿ ದೇಶ ಎಲ್ಲಾ ಸ್ಥಳೀಯ ಸಂಸ್ಥೆಗಳಿಂದ ಇದನ್ನು ಮಾಡಿಸುತ್ತಿದ್ದಾರೆ. ಆದರೆ ಶ್ರವಣಬೆಳಗೊಳದ ಬಾಹುಬಲಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳು ಸರ್ಕಾರದ ಸಹಾಯ ಪಡೆಯದೇ ಪ್ರಧಾಮಿ ಮೋದಿ ಅವರ ಕನಸು ನನಸು ಮಾಡಲು ಮುಂದಾಗಿದ್ದಾರೆ.

ಪ್ಲಾಸ್ಟಿಕ್‌ ಕೈಚೀಲ ಎಲ್ಲೆಲ್ಲಿ ಹೆಚ್ಚು ಬಳಕೆ: ಹೋಟೆಲ್‌, ಬೇಕರಿ, ಮದ್ಯ ಹಾಗೂ ಮಾಂಸದ ಅಂಗಡಿ ಸೇರಿದಂತೆ ತರಕಾರಿ ಮಾರಾಟ ಮಾಡುವವರು ಪ್ಲಾಸಿಕ್‌ ಕೈ ಚೀಲವನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಪ್ಲಾಸ್ಟಿಕ್‌ ನಿಷೇಧಿಸಬೇಕಾಗಿರುವ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಒಮ್ಮೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ದಂಡ ಹಾಕಲು ಮುಂದಾಗುತ್ತಿಲ್ಲ. ಈ ಬಗ್ಗೆ ಅರಿವು ಮೂಡಿಸಲು ಮುಂದಾಗುತ್ತಿಲ್ಲ ವಿದ್ಯಾರ್ಥಿಗಳ ಶ್ರಮದಿಂದ ಸ್ವಲ್ಪ ಮಟ್ಟಿಗೆ ನಿಯಂತ್ರಣ ಮಾಡಬಹುದಾಗಿದೆ.

ಹೇಳುವ ಬದಲು ಮಾಡಿ ತೋರಿಸಿದ್ದಾರೆ: ವಿಶ್ವಕ್ಕೆ ಅಹಿಂಸಾ ಸಂದೇಶ ಸಾರಿದ ಏಕಶಿಲಾ ಮೂರ್ತಿ ಜೈನರ ಕಾಶಿ ಎಂದು ಪ್ರಖ್ಯಾತಿ ಪಡೆದಿರುವ ಶ್ರವಣಬೆಳಗೊಳದಲ್ಲಿಯೂ ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯಿತಿ ವಿಫ‌ಲವಾಗಿದೆ. ರಸ್ತೆ ಬದಿಯದೇ ಚಂದ್ರಗಿರಿ ಹಾಗೂ ವಿಂದ್ಯಗಿರಿ ಬೆಟ್ಟದ ಮೇಲಿಯೂ ಪ್ಲಾಸ್ಟಿಕ್‌ ಕೈ ಚೀಲ, ಪ್ಲಾಸ್ಟಿಕ್‌ ನೀರಿನ ಬಾಟಲಿ, ಲೋಟಗಳು ಕಂಡು ಬರುತ್ತಿವೆ. ಇನ್ನು ಮದ್ಯದ ಅಂಗಡಿಯವರು ಪ್ಲಾಸ್ಟಿಕ್‌ ತ್ಯಾಜ್ಯವನ್ನು ಬೆಟ್ಟದ ತಪ್ಪಲಿನಲ್ಲಿ ಸುರಿಯುತ್ತಾರೆ. ಕೃಷಿ ತ್ಯಾಜ್ಯದಿಂದ ಪೇಪರ್‌ ಬ್ಯಾಗ್‌ ತಯಾರಿಸಿದ ಬಾಹುಬಲಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ಮುಕ್ತ ಭಾರತಕ್ಕಾಗಿ ಶ್ರಮಿಸುತ್ತಿದ್ದಾರೆ.

 

-ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

saavu

ಮಂಜನಾಡಿ ಗ್ಯಾಸ್‌ ಸ್ಫೋ*ಟ ಪ್ರಕರಣ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

1-tallur

ತಲ್ಲೂರು: ಪಿಕಪ್‌- ಕಾರು ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.