ಶಿರಾಡಿಘಾಟಿಯಲ್ಲಿ ಮುಂದುವರಿದ ಸಲಗ ಕಾಟ
ರಾ.ಹೆ.75ರಲ್ಲಿ ನಿತ್ಯ ಸವಾರರಿಗೆ ಸಂಕಷ್ಟ , ಅರಣ್ಯ ಸಿಬ್ಬಂದಿ ಹೈರಾಣ: ಸ್ಥಳಾಂತರಿಸಲು ಸ್ಥಳೀಯರ ಆಗ್ರಹ
Team Udayavani, Apr 5, 2021, 3:53 PM IST
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟಿನಲ್ಲಿ ಒಂಟಿಸಲಗದ ಕಾಟ ಮುಂದುವರಿದಿದ್ದು ಹೆದ್ದಾರಿ ವಾಹನ ಸವಾರರಲ್ಲಿ ಆತಂಕ ಉಂಟಾಗಿದೆ.
ಭಾನುವಾರ ಮಧ್ಯಾಹ್ನದ ವೇಳೆಯಲ್ಲಿ ಒಂಟಿ ಸಲಗ ಮಧ್ಯೆ ರಸ್ತೆಯಲ್ಲಿ ಸಂಚರಿಸಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ವೊಂದರ ಹತ್ತಿರ ಹೋಗಿ ಅಲ್ಪ ಪ್ರಮಾಣದಲ್ಲಿ ಜಖಂಗೊಳಿಸಿ ಕಾಡಿಗೆ ಸಾಗಿದೆ. ಇದನ್ನು ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುವ ಬಸ್ ಪ್ರಯಾಣಿಕರು ವಿಡಿಯೋ ಮಾಡಿರುವುದು ವೈರಲ್ ಆಗಿದೆ.
ಮಲೆನಾಡು ಭಾಗದಲ್ಲಿ ದಿನೇ ದಿನೆ ಕಾಡಾನೆಗಳ ಉಪಟಳ ಹೆಚ್ಚುತ್ತಲೇ ಇದೆ. ಕಾಡಾನೆಗಳ ಹಾವಳಿನಿಯಂತ್ರಿಸಲು ಅರಣ್ಯ ಇಲಾಖೆ ಸಿಬ್ಬಂದಿಹೈರಾಣಾಗಿದ್ದಾರೆ. ಕಳೆದ ತಿಂಗಳ ಹಿಂದಷ್ಟೇ ರಾಜಸ್ಥಾನಮೂಲದ ಚಾಲಕ ಕಾಡಾನೆ ದಾಳಿಗೆ ಬಲಿಯಾಗಿದ್ದ.ಕಳೆದ 3ದಿನಗಳ ಹಿಂದೆ ರೈಲು ಸುರಂಗಮಾರ್ಗದೊಳಗೆ ಇದೇ ಆನೆ ಕಾಣಿಸಿಕೊಂಡಿತ್ತು.
ತಾಲೂಕಿನಲ್ಲಿ 2 ದಶಕಗಳಿಂದಲೂ ಗಜಪಡೆ ಹಾವಳಿಯಿಂದ ಸಕಲೇಶಪುರ-ಆಲೂರು ಭಾಗದಜನತೆ ಅಕ್ಷರಶಃ ನಲುಗಿ ಹೋಗಿದ್ದಾರೆ. 80 ಕ್ಕೂ ಹೆಚ್ಚು ಅಮಾಯಕರು ಕಾಡಾನೆ ದಾಳಿಗೆ ಪ್ರಾಣ ಕಳೆದುಕೊಂಡಿದ್ದರೆ, ಅಪಾರ ಪ್ರಮಾಣದ ಬೆಳೆ ನಷ್ಟವಾಗಿವೆ. ಇದಕ್ಕೆ ಸೂಕ್ತ ಪರಿಹಾರವೂ ಸಿಗದೆಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಹೋರಾಟ, ಪ್ರತಿಭಟನೆ ನಡೆಸಿದರೂ ಪರಿಹಾರ ಕಂಡುಹಿಡಿಯುವಲ್ಲಿ ಎಲ್ಲಾ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ.
ಕಾಡಾನೆ ಪ್ರತಿನಿತ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿಕಾಣಿಸಿಕೊಳ್ಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರಮೌನವಹಿಸಿದೆ. ಒಂಟಿಸಲಗ ಇರುವ ಬಗ್ಗೆ ವಾಹನಸವಾರರಿಗೆ ತಿಳಿಸಲು ಒಂದು ಸೂಚನಾಫಲಕಹಾಕಿಲ್ಲ. ಅಲ್ಲದೇ ಪ್ರಯಾಣಿಕರಿಗೆ ಕಾಡಾನೆ ಇರುವಬಗ್ಗೆ ಮಾಹಿತಿಯನ್ನೂ ನೀಡುತ್ತಿಲ್ಲ. ಕಳೆದ ತಿಂಗಳಹಿಂದೆ ಟ್ಯಾಂಕರ್ ನಿಲ್ಲಿಸಿ ಬಹಿರ್ದೆಸೆಗೆ ತೆರಳಿದ್ದರಾಜಸ್ಥಾನ ಮೂಲದ ವಕೀಲ್ ಎಂಬ ಯುವಕಇದೇ ಕಾಡಾನೆಗೆ ಬಲಿಯಾಗಿದ್ದ. ಮೀಸಲುಅರಣ್ಯದೊಳಗೆ ಪ್ರವೇಶ ಮಾಡಿದ್ದ ಎಂದು ಅರಣ್ಯಇಲಾಖೆ ಆತನ ಕುಟುಂಬಕ್ಕೆ ನಯಾಪೈಸೆ ಪರಿಹಾರ ನೀಡಿಲ್ಲ. ಬಡ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಲವು ಸಂಘಟನೆಗಳು ಹೋರಾಟ ಆರಂಭಿಸಿದ್ದಾರೆ. ಮತ್ತೂಂದು ಅನಾಹುತ ಸಂಭವಿಸುವ ಮುನ್ನ ಒಂಟಿಸಲಗ ಕಾಡಿಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮದವೇರಿದ ಕಾಡಾನೆ ಗುಂಪಿನಿಂದ ಬೇರ್ಪಟ್ಟು ಮತ್ತೆ ಕಾಡಿಗೆ ತೆರಳಲು ಸಾಧ್ಯವಾಗದೆ ಹೆದ್ದಾರಿ ಪಕ್ಕದಲ್ಲೇ ಬೀಡುಬಿಟ್ಟಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಾವಿರಾರು ವಾಹನ ಸಂಚರಿಸುತ್ತಿದ್ದು ಯಾವ ಸಮಯದಲ್ಲಾದರೂ ದಾಳಿ ಮಾಡುವ ಸಾಧ್ಯತೆ ಇದೆ. ಇನ್ನಾದರೂ ಅರಣ್ಯಇಲಾಖೆ ಎಚ್ಚೆತ್ತು ಕಾಡಾನೆ ಇರುವ ಬಗ್ಗೆ ವಾಹನ ಸವಾರರಿಗೆ ಮಾಹಿತಿ ನೀಡುವುದರ ಜತೆಗೆ ಒಂಟಿಸಲಗಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕಿದೆ. ಇಲ್ಲವಾದಲ್ಲಿ ಅನಾಹುತ ಗ್ಯಾರಂಟಿ
ಎರಡು ತಿಂಗಳಿಂದಲೂ ಸಲಗ ಸಮಸ್ಯೆ :
ಕಳೆದ 2 ತಿಂಗಳಿನಿಂದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಒಂಟಿಸಲಗವೊಂದು ಬೀಡುಬಿಟ್ಟಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಇದೇ ರಸ್ತೆ ಮೂಲಕ ಧರ್ಮಸ್ಥಳ, ಮಂಗಳೂರು, ಬೆಂಗಳೂರಿಗೆ ಸಂಚರಿಸುತ್ತವೆ. ಕಾಡಾನೆ ಹೆದ್ದಾರಿಯಲ್ಲಿ ಓಡಾಡುತ್ತಿರುವುದರಿಂದ ವಾಹನ ಸವಾರರ ಮೇಲೆ
ದಾಳಿ ಮಾಡುವ ಆತಂಕ ಎದುರಾಗಿದೆ. ಕೆಲ ದಿನಗಳ ಹಿಂದೆ ಕಾರು, ಲಾರಿ ಮೇಲೆ ಇದೇಒಂಟಿಸಲಗ ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದರು. ಹೊರ ಜೆಲ್ಲೆಗಳಿಂದ ಈ ಮಾರ್ಗದ ಮೂಲಕ ಪ್ರವಾಸಿ ತಾಣಗಳಿಗೆ ತೆರಳುವವರು ಮಾರ್ಗ ಮಧ್ಯೆ ಪ್ರಕೃತಿಸೌಂದರ್ಯ ಸವಿಯಲು ವಾಹನಗಳನ್ನು ನಿಲ್ಲಿಸುತ್ತಾರೆ. ಈ ವೇಳೆ ಕಾಡಾನೆ ದಾಳಿ ಮಾಡುವ ಸಾಧ್ಯತೆಯಿದ್ದು ಈಗಲಾದರೂ ಅರಣ್ಯ ಇಲಾಖೆ ಎಚ್ಚೆತ್ತು ಕಾಡಾನೆ ಸ್ಥಳಾಂತರಿಸುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.