ಆನ್‌ಲೈನ್‌ನಲ್ಲಿ ತುರ್ತು ಸಂಚಾರಿ ಪಾಸ್ ವಿತರಣೆ
Team Udayavani, Apr 12, 2020, 2:51 PM IST
ಸಾಂದರ್ಭಿಕ ಚಿತ್ರ
ಹಾಸನ: ಲಾಕ್‌ಡೌನ್ ಅವಧಿಯಲ್ಲಿ ಸಾರ್ವಜನಿಕರಿಗೆ ತುರ್ತು ಸಂಚಾರಕ್ಕೆ ಪಾಸ್ ವಿತರಣೆ ಸುಗಮಗೊಳಿಸಲು ಪೊಲೀಸ್ ಇಲಾಖೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಆರ್. ಶ್ರೀನಿವಾಸಗೌಡ ಅವರು, ತುರ್ತು
ಸಂದರ್ಭಗಳಲ್ಲಿ ಜನರು ಸಂಚರಿಸಲು ಪಾಸ್ ಪಡೆಯುವುದು ಕಡ್ಡಾಯ ಮಾಡಲಾಗಿದ್ದು, ಡೀಸಿ, ಎಸ್ಪಿ, ತಹಶೀಲ್ದಾರ್ ಕಚೇರಿ ಬಳಿ ಸಾಲುಗಟ್ಟಿ ನಿಲ್ಲುವುದನ್ನು ತಪ್ಪಿಸಲು ಹಾಸನ್ ಪೊಲೀಸ್‌ಡಾಟ್ ಕಾಂ ಮೂಲಕ ಸಾರ್ವಜನಿಕರು ಅರ್ಜಿ ಸಲ್ಲಿಸಿದರೆ 2 ಗಂಟೆಯೊಳಗೆ ಅವರ ಅರ್ಜಿ ಇತ್ಯರ್ಥಪಡಿಸಲಾಗುತ್ತದೆ. ಅರ್ಜಿ ಅಂಗೀಕಾರವಾದರೆ ಅವರ ಸಮೀಪದ ಪೊಲೀಸ್ ಠಾಣೆಯಲ್ಲಿ ಪಾಸ್ ಪಡೆದುಕೊಳ್ಳಬಹುದು. ಸ್ಮಾರ್ಟ್ ಫೋನ್ ಇಲ್ಲದವರು, ಇಂಟರ್‌ನೆಟ್ ಸೌಲಭ್ಯ ಇಲ್ಲದ, ಬಳಸಲು ಗೊತ್ತಿಲ್ಲದವರು ಸಮೀಪದ ಪೊಲೀಸ್ ಇನ್‌ಸ್ಪೆಕ್ಟರ್ ಕಚೇರಿ ಅಥವಾ ಡಿವೈಎಸ್ಪಿ ಕಚೇರಿಗೆ ಹೋದರೆ ಅಲ್ಲಿಯೇ ಆನ್ ಲೈನ್‌ನಲ್ಲಿ ಅರ್ಜಿ ಅಪ್‌ಲೋಡ್ ಮಾಡಿಕೊಡಲಾಗುತ್ತದೆ ಎಂದರು.
ಪಾಸ್‌ಪಡೆದು ಬೆಂಗಳೂರು, ಮೈಸೂರು ಮತ್ತಿತರ ಕಡೆ ಹೋದವರು ಅಲ್ಲಿಯೇ ಇರಬೇಕು. ಇಲ್ಲವೇ ವಾಪಸ್ ಬಂದರೆ ಅವರಿಗೆ ಕ್ವಾರಂಟೈನ್ ಸೀಲ್ ಹಾಕಿ 15 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಲಾಗುತ್ತದೆ. ಆದ್ದರಿಂದ ಅನಿವಾರ್ಯವಿದ್ದವರು ಮಾತ್ರ ಪಾಸ್ ಪಡೆಯಬೇಕು ಎಂದರು.
ತೋಟದ ಮಾಲೀಕನ ವಿರುದ್ಧ ಕೇಸ್:
ಬೇಲೂರು ತಾಲೂಕು ಪುರ ಎಸ್ಟೇಟ್‌ನ ಮಾಲೀಕ 23 ಕಾರ್ಮಿಕರನ್ನು ಅಕ್ಕಿ ಚೀಲ ತುಂಬಿದ ಲಾರಿಯಲ್ಲಿ ಟಾರ್ಪಲ್ ಹೊದಿಸಿ ಚಿಕ್ಕಮಗಳೂರು ಜಿಲ್ಲೆಗೆ ಕಳುಹಿಸುತ್ತಿದ್ದ ಪ್ರಕರಣ ಬಯಲಿಗೆ ಬಂದಿದ್ದು ಮಾಲೀಕ ಮತ್ತು ತೋಟದ ಮ್ಯಾನೇಜರ್ ವಿರುದ್ಧ ಪ್ರರಕಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಸಾಮಾಜಿಕ ಅಂತರ ಕಾಪಾಡಿ:
ಜಿಲ್ಲೆಯಲ್ಲಿ ಈಗ ದಿನಸಿ, ತರಕಾರಿ ಖರೀದಿ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರು ಸಹಕರಿಸುತ್ತಿದ್ದಾರೆ. ಅಂತರ ಕಾಯ್ದುಕೊಳ್ಳದ 2 ಅಂಗಡಿಗಳ ಬಂದ್ ಮಾಡಿಸಿ ಲೈಸೆನ್ಸ್ ರದ್ದುಪಡಿಸಿದ ನಂತರ ವರ್ತಕರೇ ಎಚ್ಚೆತ್ತುಕೊಂಡು ಗ್ರಾಹಕರಿಗೆ ತಿಳಿ ಹೇಳಿ ಸಹಕರಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುತ್ತಿದ್ದ 1,150 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.