26ರಿಂದ ಬಿಸಿಯೂಟ ನೌಕರರ ಮುಷ್ಕರ

Team Udayavani, Dec 21, 2019, 3:15 PM IST

hasan-tdy-2

ಹಾಸನ: ಅಕ್ಷರ ದಾಸೋಹ ಯೋಜನೆ ಖಾಸಗೀಕರಣಗೊಳಿಸುವ ಸರ್ಕಾರದ ಕ್ರಮ ವಿರೋಧಿಸಿ ಮತ್ತು ಬಿಸಿಯೂಟದ ನೌಕರರಿಗೆ ಕನಿಷ್ಠ ವೇತನ ನೀಡಬೇಕೆಂದು ಒತ್ತಾಯಿಸಿ ಡಿ.26 ರಿಂದ ಬಿಸಿಯೂಟ ನೌಕರರು ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಿದ್ದಾರೆ ಎಂದು ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಎಂ.ಬಿ.ಪುಷ್ಪಾತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 7ನೇ ವೇತನ ಆಯೋಗ ಮಾಸಿಕ 18 ಸಾವಿರ ರೂ.ಗಳಿಗಿಂತ ಕಡಿಮೆ ವೇತನಕ್ಕೆ ಯಾರಿಂದಲೂ ದುಡಿಸಬಾರದೆಂದು ಹೇಳಿದೆ. ಕಳೆದ 10 ವರ್ಷಗಳಿಂದ ದುಡಿಯುತ್ತಿರುವ ನೌಕರರ ವೇತನದಲ್ಲಿ ಹೆಚ್ಚಳ ಮಾಡಿಲ್ಲ. ಬಿಸಿಯೂಟ ನೌಕರರಿಗೆ ಮಾಸಿಕ 21 ಸಾವಿರ ರೂ. ವೇತನ ನೀಡಬೇಕೆಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿಲ್ಲ. ಈಗ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ಅನುದಾನ ಕಡಿತ ಮಾಡಿ ಈ ಯೋಜನೆಯನ್ನು ಕೇಂದ್ರೀಕೃತ ಅಡುಗೆ ಕೇಂದ್ರಗಳನ್ನಾಗಿ ಮಾಡುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಹುನ್ನಾರ ಬಿಡಿ: ಮಂಡ್ಯ-ಮೈಸೂರು ಜಿಲ್ಲೆಯಲ್ಲಿ ಅಕ್ಷಯಪಾತ್ರೆ ಫೌಂಡೇಷನ್‌ ಸಂಸ್ಥೆಯಿಂದ ಬಿಸಿಯೂಟ ನೀಡಲು ಚಿಂತನೆ ನಡೆಸಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಖಾಸಗಿಯವರಿಗೆ ಬಿಸಿಯೂಟ ಯೋಜನೆ ವಹಿಸುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ ಎಂದು ದೂರಿದರು. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪೂರಕವಾಗಿರುವ ಬಿಸಿಯೂಟ ಯೋಜನೆಯನ್ನು ಕೆಲ ಜಿಲ್ಲೆಗಳಲ್ಲಿ ಧಾರ್ಮಿಕ ಸಂಸ್ಥೆಗಳಿಗೆ ನೀಡಬಾರದು. ಸರ್ಕಾರವೇ ಈ ಯೋಜನೆ ನಡೆಸಬೇಕು. ಬಿಸಿಯೂಟ ನೌಕರರಿಗೆ ಕನಿಷ್ಟ ವೇತನ ಹೆಚ್ಚಳ ಮಾಡಿ, ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆ ತನಕ ಶಾಲೆಯಲ್ಲಿ ದಿನಕ್ಕೆ 6 ಗಂಟೆಗಿಂತಲೂ ಹೆಚ್ಚು ಕೆಲಸ ಮಾಡಿದರೂ ಆದೇಶದಲ್ಲಿ ಕೇವಲ 4 ಗಂಟೆ ಎಂದು ನಮೂದಿಸಲಾಗುತ್ತಿದೆ.

ಕೆಲಸದ ಅವಧಿಯನ್ನು 6 ಗಂಟೆ ಎಂದೇ ನಮೂದಿಸ ಬೇಕು. ಅಡುಗೆ ಕೆಲಸದ ಜೊತೆಗೆ ಶಾಲೆಗಳಲ್ಲಿ “ಡಿ’ ಗ್ರೂಪ್‌ ನೌಕರರು ಇಲ್ಲದಿರುವುದರಿಂದ ಆ ಕೆಲಸವನ್ನು ಪರೋಕ್ಷವಾಗಿ ಅಡುಗೆಯವರಿಂದಲೇ ಮಾಡಿಸಲಾಗುತ್ತದೆ. ಆದ್ದರಿಂದ “ಡಿ’ ಗ್ರೂಪ್‌ ಕೆಲಸಗಳನ್ನು ಅಧಿಕೃತವಾಗಿ ಬಿಸಿಯೂಟ ನೌಕರರಿಗೆ ಜವಾಬ್ದಾರಿ ವಸಬೇಕು ಎಂದು ಆಗ್ರಹಿಸಿದರು.

ಶೀಘ್ರ ತೀರ್ಮಾನ ಕೈಗೊಳ್ಳಲಿ: ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕೈದೋಟ ಮಾಡಲು ಅವಕಾಶವಿರುವುದರಿಂದ ಆ ಕೆಲಸವನ್ನು ಅಡುಗೆ ಸಿಬ್ಬಂದಿಯಿಂದಲೇ ಮಧ್ಯಾಹ್ನದ ನಂತರ ಮಾಡಿಸಿದರೆ ಉದ್ಯೊಗ ಖಾತ್ರಿಯಲ್ಲಿ ಕೊಡುವ 249 ರೂ. ಕನಿಷ್ಟ ಕೂಲಿ ಅಡುಗೆಯವರಿಗೆ ಕೊಡಲು ಸಾಧ್ಯ. ಈ ಅಂಶಗಳ ಕುರಿತು ಶಿಕ್ಷಣ ಇಲಾಖೆ ಮತ್ತು ರಾಜ್ಯ ಸರ್ಕಾರ ಕೂಡಲೇ ತೀರ್ಮಾನ ತೆಗೆದುಕೊಳ್ಳಬೇಕು. ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಡಿ.26 ರಿಂದ ಮುಷ್ಕರ ಆರಂಭಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ರಾಜ್ಯ ಅಕ್ಷರದಾಸೋಹ ನೌಕರರ ಸಂಘದ ಕಾರ್ಯಾಧ್ಯಕ್ಷೆ ಉಷಾ, ಪ್ರಧಾನ ಕಾರ್ಯದರ್ಶಿ ಅರವಿಂದ್‌, ಉಪಾಧ್ಯಕ್ಷರಾದ ಯೋಶೋಧಾ, ಮೀನಾಕ್ಷಿ, ಕಲಾವತಿ ಇದ್ದರು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.