ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಿ


Team Udayavani, Jun 16, 2020, 7:02 AM IST

slc-sajjugolisi

ಹಾಸನ: ಎಸ್ಸೆಸ್ಸೆಲ್ಸಿ ಪರೀಕ್ಷೆ ಮಳೆಗಾಲದಲ್ಲಿ ನಡೆಸುತ್ತಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ ಗಳಿಗೆ ಬರುವುದಕ್ಕೆ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚಿಸಿದರು. ನಗರದ ಸಂತ ಜೋಸೆಫ‌ರ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂಜಾಗ್ರತಾ ಕ್ರಮಗಳ ಕುರಿತು ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಮಳೆಗಾಲದಲ್ಲಿ ಕೆಲವು ಪ್ರದೇಶಗಳಲ್ಲಿ ಭೂಕುಸಿತ  ಉಂಟಾಗ ಬಹುದು ಅಥವಾ ಪರೀಕ್ಷಾ ಕೇಂದ್ರಗಳಲ್ಲಿ ನೀರು ಸೋರಿಕೆ ಮೊದಲಾದ ಸಮಸ್ಯೆಗಳಾಗ ದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರು ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಇದಕ್ಕೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಮಾಸ್ಕ್,ಸ್ಯಾನಿಟೈಸರ್‌ ಕಡ್ಡಾಯ: ಕೋವಿಡ್‌ 19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದ ರಿಂದ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸಿಂಗ್‌, ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು. ರೋಗಲಕ್ಷಣ ಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಗಳಲ್ಲಿ ಪರೀಕ್ಷೆ ಬರೆಯ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಾಗೂ ಇತರೆ ಸ್ವಯಂ ಸೇವಕರು ಕೈಜೋಡಿಸಲಿದ್ದಾರೆ ಎಂದು  ಜಿಲ್ಲಾಧಿಕಾರಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಅಂತರದಲ್ಲಿ ಜೆರಾಕ್ಸ್‌ ಅಂಗಡಿಗಳು ಹಾಗೂ ಸಾರ್ವಜನಿಕರ ಓಡಾಟವನ್ನು ನಿಯಂತ್ರಿಸುವ ಸಲುವಾಗಿ ಸೆಕ್ಷನ್‌ 144 ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳಿಗೆ  ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡ ಲಾಗುವುದು. ಆಯಾ ಶಾಲೆಗಳ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಪ್ರಯಾಣದ ದರವನ್ನು ಕೆಎಸ್‌ಆರ್‌ಟಿಸಿ ಗೆ ನೀಡಬೇಕು ಎಂದರು. ಜಿಪಂ ಸಿಇಒ ಬಿ.ಎ ಪರಮೇಶ್‌ ಮಾತನಾಡಿ, ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆಗೂ ಮುನ್ನ ಸಂಪೂರ್ಣವಾಗಿ ಸ್ವತ್ಛಗೊಳಿಸಬೇಕು.

ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಅವಶ್ಯಕತೆಗಳು ಅಥವಾ ಕೊರತೆಗಳಿದ್ದಲ್ಲಿ ಎಸ್‌ಡಿಎಂಸಿ ಅನುದಾನ ವನ್ನು ಬಳಸಿ ಕೊಳ್ಳಬಹುದು  ಎಂದು ಹೇಳಿದರು. ಡಿವೈಎಸ್ಪಿ ಪುಟ್ಟಸ್ವಾಮಿಗೌಡ ಮಾತನಾಡಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್‌ ಸಿಬ್ಬಂದಿ ಗಳನ್ನು ನೇಮಿಸಲಾಗುತ್ತಿದ್ದು, ಶಿಕ್ಷಕರು ಸ್ಥಳೀಯ ಪೊಲೀಸ್‌ ಠಾಣೆಯ ಅಧಿಕಾರಿ ಗಳನ್ನು ಸಂಪರ್ಕಿಸಬಹುದು ಎಂದರು. ಡಿಡಿಪಿಐ ಪ್ರಕಾಶ್‌ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜಶೆಟ್ಟಿ ಸಭೆಯಲ್ಲಿ ಹಾಜರಿದ್ದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂ.25ರಿಂದ ಜು.4ರವರೆಗೆ ನಡೆಸಲಿದ್ದು, ಈ ಸಂಬಂಧ ಡಿಡಿಪಿಐ ಕಚೇರಿ ಮತ್ತು ಬಿಇಒ ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾರಿಗೆ, ಪರೀಕ್ಷಾ ಸಂಬಂಧ ವಿದ್ಯಾರ್ಥಿಗಳು ಮತ್ತು ಪೋಷಕರು ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದೆಂದು ಡಿಡಿಪಿಐ ಪ್ರಕಾಶ್‌ ತಿಳಿಸಿದ್ದಾರೆ.

ಡಿಡಿಪಿಐ ಕಚೇರಿಯ ಜಿಲ್ಲಾ ನೋಡಲ್‌ ಅಧಿಕಾರಿಗಳು ದೂ. 08172- 268234. ಮೊ. 9448957182, ಬಿಒಒ ಕಚೇರಿ ಆಲೂರು: ದೂ. 08170-218226. ಮೊ. 9448885370, 8660914823, ಅರಕಲಗೂಡು: 08175-220216. ಮೊ. 9740053988, 89512 61053, ಅರಸೀಕೆರೆ: ದೂ. 08174-232339. ಮೊ. 9449630351,  8618198944, ಬೇಲೂರು: ದೂ. 08177-222278. ಮೊ. 9740521331. ಚನ್ನರಾಯಪಟ್ಟಣ : ದೂ. 08176-252305. ಮೊ. 9535203063, ಹಾಸನ: ದೂ. 08172-267134. ಮೊ. 8217572879, ಹೊಳೆನರಸೀಪುರ : ದೂ. 08175-273257.  ಮೊ. 7019580623, ಸಕಲೇಶಪುರ: ದೂ.08173-244302. ಮೊ. 8970635857ಗೆ ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.