ಸರ್ಕಾರಿ ಭೂಮಿ ಒತ್ತುವರಿ ತೆರವು ಅನಿವಾರ್ಯ

ಗಂಗೂರು ವಿದ್ಯುತ್‌ ವಿತರಣಾ ಕೇಂದ್ರಕ್ಕೆ ಗುದ್ದಲಿ ಪೂಜೆ ನೇರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಹೇಳಿಕೆ •

Team Udayavani, Jun 24, 2019, 11:07 AM IST

hasan-tdy-3..

ಹೊಳೆನರಸೀಪುರ ಸಮೀಪ ಉದ್ದೂರು ಗ್ರಾಮದಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ವಿತರಣಾ ನಿಗಮ ಏರ್ಪಡಿಸಿದ್ದ 11/66 ಉಪಕೇಂದ್ರಕ್ಕೆ ಲೋಕೊಪಯೋಗಿ ಸಚಿವ ಎಚ್.ಡಿ.ರೇವಣ್ಣ ಗುದ್ದಲಿಪೂಜೆ ನೆರವೇರಿಸಿದರು.

ಹೊಳೆನರಸೀಪುರ: ಕ್ಷೇತ್ರದ ಅಭಿವೃದ್ಧ್ದಿಗಾಗಿ ಮೀಸಲಿರುವ ಭೂಮಿಯನ್ನು ಅತಿಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರೆ ಅದನ್ನು ಖಡಾಖಂಡಿತವಾಗಿ ಸರ್ಕಾರದ ವಶಕ್ಕೆ ಪಡೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್. ಡಿ.ರೇವಣ್ಣ ನುಡಿದರು.

ತಾಲೂಕಿನ ಗಂಗೂರು ಸಮೀಪ 11/66 ಕೆವಿ ವಿದ್ಯುತ್‌ ವಿತರಣಾ ಕೇಂದ್ರಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, 2006ರಲ್ಲಿ ಈ ವಿದ್ಯುತ್‌ ವಿತರಣಾ ಕೇಂದ್ರ ಆರಂಭಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಈ ಕೇಂದ್ರ ಸ್ಥಾಪನೆ ಆಗಿರಲಿಲ್ಲ, ಇದೀಗ 13 ವರ್ಷಗಳ ನಂತರ ಕಾಲಕೂಡಿ ಬಂದಿದೆ ಎಂದರು.

ಮನೆ ನಿರ್ಮಿಸಿಕೊಂಡವರಿಗೆ ಹಕ್ಕು ಪತ್ರ ನೀಡಿ: ಕಾರ್ಯಕ್ರಮದಲ್ಲಿ ಹಾಜರಿದ್ದ ಗಂಗೂರು ಸುತ್ತಮುತ್ತಲ ಜನತೆ ಸಚಿವರಿಗೆ ಮನವಿ ಮಾಡಿ ಈಗಾಗಲೇ ಸರ್ಕಾರಿ ಭೂಮಿಯಲ್ಲಿ ಹಲವು ಮನೆಗಳನ್ನು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದೇವೆ. ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ನಮಗೆ ಹಕ್ಕು ಪತ್ರ ನೀಡಿ ಎಂದು ಮನವಿ ಮಾಡಿದರು. ಮನವಿಯನ್ನುಆಲಿಸಿದ ಸಚಿವ ರೇವಣ್ಣ ಸ್ಥಳದಲ್ಲಿ ಹಾಜರಿದ್ದ ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಅವರಿಗೆ ಮನೆಗಳನ್ನು ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡುವಂತೆ ಸೂಚಿಸಿದರು.

ಒತ್ತುವರಿ ತೆರವಿಗೆ ಕ್ರಮ: ಸಭೆಯಲ್ಲಿ ಮತ್ತೆ ಕೆಲವರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವವರಿಗೆ ಭೂಮಿಯನ್ನು ಅಧಿಕೃತಗೊಳಿಸಕೊಡುವಂತೆ ಮಾಡಿಕೊಂಡ ಮನವಿಗೆ ಒಪ್ಪದ ಸಚಿವ ರೇವಣ್ಣ ಯಾವುದೇ ಕಾರಣಕ್ಕೂ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದರೆ ಅದನ್ನು ಕಾನೂನು ರೀತಿ ಮಾಡಿಕೊಡಲು ಸಾಧ್ಯವಿಲ್ಲ. ಏಕೆಂದರೆ ಪ್ರತಿ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ಇಂತಿಷ್ಟು ಭೂಮಿಯನ್ನು ಜಾನುವಾರುಗಳ ಮೇವಿಗಾಗಿ ಮೀಸಲಿಡಬೇಕೆಂಬ ಸುಪ್ರೀಂಕೋರ್ಟ್‌ ತೀರ್ಪುನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸುವುದು ತರವಲ್ಲ. ಜೊತೆಗೆ ಜನ ಜಾನುವಾರುಗಳಿಗೆ ಅವಶ್ಯವಾಗಿ ಬೇಕಾಗಿರುವ ಭೂಮಿಯನ್ನು ಸಾಗುವಳಿ ನಡೆಸುವುದು ತರವಲ್ಲ ಎಂದು ಪ್ರತಿಕ್ರಿಯಿಸಿದರು.

ಒತ್ತುವರಿ ಮಾಡಿಕೊಂಡಿರುವ ಭೂಮಯಲ್ಲಿ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಆದ್ದರಿಂದ ರೈತರು ಅತಿಕ್ರಮವಾಗಿ ಒತ್ತುವರಿ ಮಾಡಿಕೊಳ್ಳಬಾರದು ಹಾಗೊಮ್ಮೆ ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುವುದು ಕಾನೂನು ಬಾಹಿರವೆಂದು ತಿಳಿಸಿದರು.

6 ತಿಂಗಳಲ್ಲಿ ಕಾಮಗಾರಿ ಪೂರ್ಣ: ಈ ವಿದ್ಯುತ್‌ ವಿತರಣಾ ಕೇಂದ್ರವನ್ನು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಇನ್ನು 6ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಮನೆಗಳು ರೈತರ ಕೃಷಿ ಚಟುವಟಿಕೆಗೆ ವಿದ್ಯುತ್‌ ಸಮರ್ಪಕವಾಗಿ ದೊರಕಲಿದೆ ಎಂದರು.

ಜೊತೆಗೆ ಈ ಭಾಗದಲ್ಲಿ ರೈತರು ಬೆಳೆಯುವ ಕಬ್ಬು ಸುಲಲಿತವಾಗಿ ಮಾರಾಟ ಮಾಡಲು ಅನುಕೂಲವಾಗುವಂತೆ ಬೃಹತ್‌ ಸಕ್ಕರೆ ಕಾರ್ಖಾನೆ ಬರುವುದ ರಿಂದ ಕೃಷಿಕರಿಗೆ ಒಳಿತಾಗಲಿದೆ. ಇದಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ರಾಜ್ಯ ಸರ್ಕಾರದಿಂದ ಒದಗಿಸಲಾಗುವುದು ಎಂದು ಹೇಳಿದರು.

ಪಾಲಿಟೆಕ್ನಿಕ್‌ ಜಾಗ ತ್ತುವರಿ ತೆರವು ಮಾಡಿ: ತಾಲೂ ಕಿನ ಚನ್ನರಾಯಪಟ್ಟಣ ರಸ್ತೆಯ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಸಮೀಪ ಮೀಸಲಿರುವ 30 ಭೂಮಿಯನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ದೂರು ಇದ್ದು ಅದನ್ನು ತಹಶೀಲ್ದಾರ್‌ ಮತ್ತು ತಾಲೂಕು ಆಡಳಿತ ಸ್ಥಳಕ್ಕೆ ತೆರಳಿ ಒತ್ತುವರಿ ಆಗದಂತೆ ಕ್ರಮಕೈಗೊಳ್ಳಬೇಕು. ಏಕೆಂದರೆ ಮುಂದಿನ ದಿನಗಳಲ್ಲಿ ಈ ಮೀಸಲು ಭೂಮಿಯಲ್ಲಿ ಸರ್ಕಾರಿ ಎಂಜಿನಿಯ ರಿಂಗ್‌ ಕಾಲೇಜು ಆರಂಭಸಬೇಕೆಂಬ ಬಹುದಿನದ ಕನಸು ನೆನಸಾಗುವ ಸಾದ್ಯತೆ ಹತ್ತಿರವಿದೆ. ಆದ್ದರಿಂದ ತಾಲೂಕು ಆಡಳಿತ ಭೂಮಿಯ ಒತ್ತುವರಿ ಆಗದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ನಿಗಮದ ಎಂಜಿನಿಯರ್‌ಗಳಾದ ಲೋಕೇಶ್‌, ಕೊಟ್ರೇಶ್‌, ಶಿವಕುಮಾರ್‌, ಉಮೇಶ್‌, ಮಂಜುನಾಥಾಚಾರ್‌ , ತಹಶೀಲ್ದಾರ್‌, ಶ್ರೀನಿವಾಸ್‌, ಡಿವೈಎಸ್‌ಪಿ ಲಕ್ಷ್ಮೇಗೌಡ, ವೃತ್ತ ನಿರೀಕ್ಷಕ ಅಶೋಕ್‌, ನಗರಠಾಣಾ ಪಿಎಸ್‌ಐ ಕುಮಾರ್‌, ಗ್ರಾಮಾಂತರ ಠಾಣಾ ಪಿಎಸ್‌ಐ ಮೋಹನ್‌ಕೃಷ್ಣ, ತಾಲೂಕಿನ ಕಂದಾಯ ಇಲಾ ಖೆಯ ಸಿಬ್ಬಂದಿ, ಚಾಮುಂಡೇಶ್ವರಿ ವಿದ್ಯುತ್‌ ನಿಗಮದ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.