ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು: ತಹಶೀಲ್ದಾರ್
Team Udayavani, Jan 27, 2019, 9:43 AM IST
ಹೊಳೆನರಸೀಪುರ: ಸಮಾನತೆ, ಸ್ವಾತಂತ್ರ್ಯ, ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿರುವ ದೇಶದ ಸಂವಿ ಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕೆಂದು ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್ ಹೇಳಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಸಾವಿರಾರು ಮಂದಿ ತ್ಯಾಗ ಬಲಿದಾನದ ಫಲವಾಗಿ 1947 ರಲ್ಲಿ ಸ್ವಾತಂತ್ರ್ಯ ಬಂದಿತಾದರೂ ದೇಶಕ್ಕೆ ಅವಶ್ಯವಾಗಿದ್ದ ಸಂವಿಧಾನ ರಚನೆಯ ನಂತರ 1951 ರ ಜನವರಿ 26 ರಂದು ಭಾರತ ಗಣರಾಜ್ಯವಾಗಿ ಹೊರಹೊಮ್ಮಿತೆಂದರು.
ಸ್ವಾವಲಂಬನೆ: ಸ್ವಾತಂತ್ರ್ಯ ಬಂದ ವೇಳೆದ ದೇಶದ ಜನಸಂಖ್ಯೆ ಕೇವಲ 33 ಕೋಟಿ ಇತ್ತು. ಆಹಾರಕ್ಕಾಗಿ ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಆದರೆ ಇಂದು ದೇಶದಲ್ಲಿ 136 ಕೋಟಿ ಮಂದಿಗೂ ಅವಶ್ಯವಾಗಿ ಬೇಕಾದ ಆಹಾರವನ್ನು ಬೆಳೆಯಲು ಸಾಧ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವ ಬಗ್ಗೆ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುನೀತಾ ಅವರು ಪ್ರಮುಖ ಭಾಷಣ ಮಾಡಿದರು.
ವೇದಿಕೆ ಕಾರ್ಯಕ್ರಮ ಆರಂಭಕ್ಕೆ ಮೊದಲು ಭಾರತಾಂಭೆಯ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಚನ್ನಾಂಬಿಕಾ ವೃತ್ತದಿಂದ ಪಟ್ಟಣದ ಪೇಟೆ ಬೀದಿ, ಸುಭಾಷ್ ವೃತ್ತ, ಅಂಬೇಡ್ಕರ್ ವೃತ್ತ, ಜಯಚಾಮರಾಜೇಂದ್ರ ವೃತ್ತ, ಅರಕಲಗೂಡು ರಸ್ತೆ ಮೂಲಕ ಮೆರವಣಿಗೆ ತೆರಳಿ ಬಯಲು ರಂಗ ಮಂದಿರದ ವೇದಿಕೆಗೆ ತರಲಾಯಿತು.
ಧ್ವಜಾರೋಹಣದ ನಂತರ ವಂದೇ ಮಾತರಂ, ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ, ಪಥಸಂಚಲನ, ಕವಾಯಿತು ನಂತರ ಶಾಲಾ ಮಕ್ಕಳಿಗೆಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು,
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಕೆ.ಯೋಗೇಶ್, ಡಿವೈಎಸ್‌ಪಿ ಬಿ.ಬಿ.ಲಕ್ಷ್ಮೇಗೌಡ, ಅರಕ್ಷಕ ವೃತ್ತ ನಿರಿಕ್ಷಕ ಅಶೋಕ್, ಪುರಸಭೆ ಮುಖ್ಯಾಧಿಕಾರಿ ಬಿ.ಸಿ.ಬಸವರಾಜು, ತಾಲೂಕು ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ವಿರೂಪಾಕ್ಷ, ತಾಲೂಕು ಕಸಾಪ ಅಧ್ಯಕ್ಷ ಡಿ.ಕೆ.ಕುಮಾರಯ್ಯ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಡಿ.ಗುರುಪ್ರಸಾದ್, ಗ್ರೇಡ್ 2 ತಹಶೀಲ್ದಾರ್ ವಸಂತಕುಮಾರಿ, ತಾಲೂಕು ಸ್ವಾಮಿ ವಿವೇಕಾ ನಂದಯುವ ವೇದಿಕೆ ಅಧ್ಯಕ್ಷ ಎಂ.ಎಂ.ಎ ರಹೆಮಾನ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಪುಷ್ಪಲತ, ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರೇಮಾ ಇದ್ದರು.
ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ ಮಂಜುನಾಥ್ ವಹಿಸಿದ್ದರು. ಲೊಕೇಶ್ ಸ್ವಾಗತಿಸಿದರು. ಟಿ.ಎಸ್.ಕುಮಾರಸ್ವಾಮಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.