ಬೇಸಿಗೆ ಶಿಬಿರದಿಂದ ಮಕ್ಕಳ ವ್ಯಕ್ತಿತ್ವ ವಿಕಸನ
Team Udayavani, May 5, 2019, 3:00 AM IST
ಹೊಳೆನರಸೀಪುರ: ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿನ ಬುದ್ದಿ ಶಕ್ತಿ ಚುರುಕಾಗುವುದರ ಜೊತೆಗೆ ಬೌ ಕ್ಕ ಮಟ್ಟ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ತಹಶೀಲ್ದಾರ್ ಕೆ.ಆರ್. ಶ್ರೀನಿವಾಸ್ ನುಡಿದರು.
ಪಟ್ಟಣದ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿದರು.
ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರಹೊಮ್ಮಲು ಹಾಗೂ ಮಕ್ಕಳು ವೇದಿಕೆಯ ಮೇಲೆ ನಿಂತು ಸುಲಲಿತವಾಗಿ ಮಾತನಾಡುವುದನ್ನು ಕಲಿಯಲು ಇಂತಹ ವೇದಿಕೆಗಳಿಂದ ಅವಕಾಶವನ್ನು ಪಡೆದುಕೊಳ್ಳಿ ಎಂದರು.
ಈ ವಯಸ್ಸಿನ ಮಕ್ಕಳು ಹಿಂದೆ ಕಲಿತಿರುವ ಚಟುವಟಿಕೆಗಳ ಬಗ್ಗೆ ತಿಳಿಸಿ ಮುಂದಿನ ಭಾವಿ ಪ್ರಜೆಗಳಾಗಿ ನಿರ್ಮಿಸುವ ಶಕ್ತಿ ಬೇಸಿಗೆ ಶಿಬಿರದಲ್ಲಿ ಕಲಿಯುವುದು ಬಹಳಷ್ಟು ಇದೆ ಎಂದು ತಿಳಿಸಿದರು.
ಟೀವಿ, ಮೊಬೈಲ್‌ನಿಂದ ದೂರವಿರಿ: ಸ್ವಾಮಿ ವಿವೇಕಾನಂದ ಯುವವೇದಿಕೆಯ ಅಧ್ಯಕ್ಷ ರೆಹಮಾನ್ ಮುಖ್ಯ ಅತಿಥಿಯಾಗಿ ಮಾತನಾಡಿ ಇಂದಿನ ಯುವಪೀಳಿಗೆ ಟೀವಿ ಹಾಗೂ ಮೊಬೈಲ್‌ಗಳಿಗೆ ಮಾರುಹೋಗಿರುವುದು ಅಂತಕದ ವಿಚಾರ. ಇದರಲ್ಲಿ ಒಳ್ಳೆಯದು ಕೆಟ್ಟದು ರಡೂ ಇದೆ. ಳ್ಳೆಯದನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸೈನಿಕರಾಗಿ ದೇಶ ಸೇವೆ ಮಾಡಿ: ನಿವೃತ್ತ ಯೋಧ ವಸಂತಕುಮಾರ್ ಮಾತನಾಡಿ, ಬೇಸಿಗೆ ಶಿಬಿರದಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಇಂದಿನ ಯುವಕರು ದೇಶ ಸೇವೆ ಮಾಡಲು ಹಿಂಜರಿಯುತ್ತಿದ್ದು ಸೈನಿಕರಾಗಿ ದೇಶಸೇವೆ ಮುಂದಾಗಿ ಎಂದು ತಿಳಿಸಿದರು.
ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರೇಮಮಂಜುನಾಥ ನಿವೃತ್ತ ಯೋಧ ಮಂಜುನಾಥ್ ಅವರು ನೀತಿಕಥೆಯನ್ನು ಹೇಳಿದರು. ವೇದಿಕೆಯಲ್ಲಿ ನಿವೃತ್ತ ಯೋಧರಾದ ಮಂಜುನಾಥ್,ಶಂಕರನಾರಾಯಣ್ ಐತಾಳ್ , ಮಂಜುನಾಥ್ ಗುಪ್ತ ಅವರು ಉಪಸ್ಥಿತರಿದ್ದರು.
ಸ್ಕೌಟ್ ಮತು ಗೈಡ್ಸ್ ಕಾರ್ಯದರ್ಶಿ ನಾರಾಯಣ್ ಶೆಟ್ಟರು ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿಗಳಾದ ಕುಮುದಾ ರಂಗನಾಥ್ ಅವರು ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಜಿ.ಜೆ. ನಾಗವೇಣಿ ಅವರು ಸ್ಕೌಟ್ ಮತ್ತು ಗೈಡ್ಸ್‌ನ ವಾರ್ಷಿಕ ವರದಿಯನ್ನು ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.