ಗುಣಮಟ್ಟದ ಉತ್ಪನ್ನ ರಫ್ತು ಮಾಡಿ
Team Udayavani, Feb 27, 2020, 3:00 AM IST
ಹಾಸನ: ಉದ್ಯಮಗಳು ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ರಫ್ತು ಮಾಡುವ ಮೂಲಕ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಲಾಭಗಳಿಸಬಹುದಾಗಿದೆ.ಈ ನಿಟ್ಟಿನಲ್ಲಿ ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸಲಹೆ ನೀಡಿದರು.
ನಗರದ ಹೋಟೆಲ್ ಜ್ಯುವೆಲ್ ರಾಕ್‌ನಲ್ಲಿ ಬೆಂಗಳೂರು ಹಾಗೂ ಮೈಸೂರು ಶಾಖೆಯ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಕರ್ನಾಟಕ ಸರ್ಕಾರ ರಫ್ತು ಉತ್ತೇಜನಾ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಭಾವಿ ರಫ್ತುದಾರರಿಗೆ ಬುಧವಾರ ಹಮ್ಮಿಕೊಂಡಿದ್ದ ಒಂದು ದಿನದ ರಫ್ತು ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ರಫ್ತು ಮಾಡುವುದಕ್ಕಿಂತ ಆಮದು ಮಾಡಿಕೊಳ್ಳುವ ಪ್ರಮಾಣವೇ ಹೆಚ್ಚಾಗಿದೆ. ಕೇವಲ ದೊಡ್ಡ ಉದ್ಯಮಗಳೇ ಉತ್ಪನ್ನಗಳನ್ನು ರಫ್ತು ಮಾಡಬೇಕೆನ್ನುವ ನಿಯಮವಿಲ್ಲ, ಸಣ್ಣ ಉದ್ದಿಮೆದಾರರೂ ಕೂಡ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ರಫ್ತು ಮಾಡಬಹುದಾಗಿದೆ ಎಂದರು.
ಕಾರ್ಯಾಗಾರ ಸದ್ಬಳಕೆಯಾಗಲಿ: ಉದ್ದಿಮೆದಾರರು ತಮ್ಮ ಉತ್ಪನ್ನಗಳನ್ನು ಯಾವ ರೀತಿ ರಫ್ತು ಮಾಡಬೇಕು? ಎಲ್ಲಿ ರಫ್ತು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡುವ ಸಲುವಾಗಿ ಈ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನೇರವಾಗಿ ಮಾರಾಟ ಮಾಡಿ: ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಉತ್ಪನ್ನಗಳು ಸಹ ಉತ್ಪಾದಕರಿಂದ ನೇರವಾಗಿ ಮಾರಾಟವಾಗುತ್ತಿಲ್ಲ. ಬದಲಾಗಿ ಮೂರನೇ ವ್ಯಕ್ತಿಯಿಂದ ಮಾರಾಟವಾಗುತ್ತಿವೆ. ಹಾಗಾಗಿ ಉತ್ಪಾದಕರು ಹೆಚ್ಚು ಲಾಭಗಳಿಸಲು ಸಾಧ್ಯವಾಗುತ್ತಿಲ್ಲ ಎಂದೂ ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎನ್. ವಿಶ್ವನಾಥ್, ಕೆಎಸ್‌ಎಫ್ಸಿ ಮುಖ್ಯ ವ್ಯವಸ್ಥಾಪಕ ಕೆ.ಎಸ್.ಪರಮಶಿವಮೂರ್ತಿ, ವಿ.ಟಿ.ಪಿ.ಸಿ ಜಂಟಿ ನಿರ್ದೇಶಕ ಪ್ರವೀಣ್ ರಾಮದುರ್ಗ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಶಂಕರನಾರಾಯಣ್, ಸಿಡಾಕ್ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಾಲ ಸೌಲಭ್ಯ ಸದ್ಬಳಕೆಯಾಗಲಿ: ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಎಂ ಧನಪಾಲ್ ಮಾತನಾಡಿ, ಹಿಂದೆ ಕೈಗಾರಿಕೆಗಳಿಗೆ ಸಾಲ ದೊರೆಯುವುದು ಕಷ್ಟವಾಗಿತ್ತು. ಆದರೆ ಪ್ರಸ್ತುತ ಕೈಗಾರಿಕೆಗಳನ್ನು ಸ್ಥಾಪಿಸಲು ಸರ್ಕಾರದಿಂದ ಹಾಗೂ ವಿವಿಧ ಹಣಕಾಸು ಸಂಸ್ಥೆಗಳಿಂದ ಹೆಚ್ಚು ನೆರವು ದೊರೆಯುತ್ತಿದ್ದರೂ ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಅಧಿಕ ಲಾಭಗಳಿಸಬಹುದು: ನಮ್ಮ ದೇಶದಲ್ಲಿ ಉತ್ತಮ ಗುಣಮಟ್ಟದ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಮಾನವ ಸಂಪನ್ಮೂಲ ದೊರೆಯುವುದರಿಂದ ಹೆಚ್ಚು ಉತ್ಪಾದನೆ ಮಾಡಿ ಅಧಿಕ ಲಾಭ ಗಳಿಸಬಹುದು. ಈ ನಿಟ್ಟಿನಲ್ಲಿ ಯುವ ಉದ್ಯಮಿಗಳು ಉತ್ಪನ್ನವನ್ನು ರಫ್ತು ಮಾಡಲು ಸರಿಯಾದ ಮಾಹಿತಿ ಪಡೆದು ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.