ಸೌಲಭ್ಯ ವಂಚಿತ ಗ್ರಾಮೀಣ ಗ್ರಂಥಾಲಯ


Team Udayavani, Dec 13, 2019, 1:29 PM IST

hasan-tdy-2

ಚನ್ನರಾಯಪಟ್ಟಣ: ಸಾರ್ವಜನಿಕರ ಜ್ಞಾನಾರ್ಜನೆಗೆ ಅನುಕೂಲ ಕಲ್ಪಿಸಲು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ನಿರ್ಮಾಣವಾಗಿರುವ ಗ್ರಾಮೀಣ ಗ್ರಂಥಾಲಯಗಳು ಸ್ವಂತ ಕಟ್ಟಡವಿಲ್ಲದೇ ಶಿಥಿಲ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ತಾಲೂಕಿನಲ್ಲಿ 41 ಗ್ರಾಮ ಪಂಚಾಯಿತಿಗಳಿದ್ದು ಎಲ್ಲಾ ಕಡೆಯಲ್ಲಿಯೂ ಗ್ರಂಥಾಲಯಗಳು ಇವೆ.1988ರಲ್ಲಿ ಮೊದಲ ಬಾರಿಗೆ ತಾಲೂಕಿನ ಅಣತಿ ಗ್ರಾಮದಲ್ಲಿ ಗ್ರಂಥಾಲಯ ಸ್ಥಾಪನೆಯಾಯಿತು.

ಇದಾದ ಬಳಿಕ ಪ್ರತಿ ವರ್ಷವೂ ಒಂದೊಂದು ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಗ್ರಂಥಾಲಯವನ್ನು ಸರ್ಕಾರ ತೆರೆದಿದ್ದು , 2007ರಲ್ಲಿ ತಾಲೂಕಿನಲ್ಲಿ 41 ಗ್ರಾಮ ಪಂಚಾಯಿತಿ ಕೇಂದ್ರ ಹೊಂದಿರುವ ಎಲ್ಲಾ ಗ್ರಾಮದಲ್ಲಿ ಗ್ರಂಥಾಲಯ ತೆರೆಯಲಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸರ್ಕಾರವಾಗಲಿ ಇಲ್ಲ ಜನಪ್ರತಿನಿಧಿಗಳಾಗಲಿ ಆಸಕ್ತಿ ವಹಿಸಿಲ್ಲ.

40 ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲ: 41 ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಅಣತಿ ಗ್ರಾಮದಲ್ಲಿನ ಗ್ರಂಥಾಲಯ ಮಾತ್ರ ಸ್ವಂತ ಕಟ್ಟಡದಲ್ಲಿದೆ. ಇದನ್ನು ಹೊರತು ಪಡಿಸಿದರೆ ತಾಲೂಕು ಕೇಂದ್ರದಲ್ಲಿನ ಜಿಲ್ಲಾ ಕೇಂದ್ರ ಗ್ರಂಥಾಲಯ ಚನ್ನರಾಯಪಟ್ಟಣ ಶಾಖೆ ಮಾತ್ರ ಸ್ವಂತ ಕಟ್ಟಡದಲ್ಲಿ ನಡೆಯುತ್ತಿದೆ. ಆದರೆ ಇದು ಸುಣ್ಣ ಬಣ್ಣ ಕಂಡು ದಶಕಗಳೇ ಕಳೆದಿವೆ. ಜಿಲ್ಲಾಡಳಿತವು ತಾಲೂಕು ಕೇಂದ್ರದಲ್ಲಿನ ಗ್ರಂಥಾಲಯ ಕಟ್ಟಡಕ್ಕೆ ಸುಣ್ಣ ಬಳಿಯುವುದು ಹಾಗೂ ಹೆಚ್ಚುವರಿಯಾಗಿ ಕಟ್ಟಡದ ಮೇಲಂತಸ್ತು ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂದು ವಾಚಕರು ಆಗ್ರಹಿಸಿದ್ದಾರೆ.

ರಾಸು ಕಟ್ಟುವ ಕೊಟ್ಟಿಗೆಯಂತಿವೆ: ಗ್ರಾಮೀಣ ಭಾಗದಲ್ಲಿ ಇರುವ ಗ್ರಂಥಾಲಯಗಳು ರಾಸುಗಳನ್ನು ಕಟ್ಟುವ ಕೊಟ್ಟಿಗೆಯಂತಿವೆ, ಗ್ರಾಮ ಪಂಚಾಯಿತಿ ಕೇಂದ್ರದಲ್ಲಿನ ಗ್ರಾಮದಲ್ಲಿ ಪಾಳು ಬಿದ್ದಿರುವ ಮನೆಯಲ್ಲಿ ಗ್ರಂಥಾಲಯ ನಡೆಯುತ್ತಿದೆ. ಮಳೆಯಿಂದ ಸೋರುತ್ತಿದ್ದು ಪುಸ್ತಕಗಳು ಹಾಳಾಗುತ್ತಿವೆ. ಇನ್ನು ಕೆಲವು ಗ್ರಂಥಾಲಯಗಳಲ್ಲಿ ಇಬ್ಬರು ಕುಳಿತು ಪತ್ರಿಕೆ ಹಾಗೂ ಪುಸ್ತಕ ಓದಲು ಮಾತ್ರ ಸ್ಥಳಾವಕಾಶವಿದೆ. ಉತ್ತಮ ವಾತಾವರಣವಿಲ್ಲದೇ ಇರುವುದರಿಂದ ಓದುಗರು ವಾಚನಾಲಯದ ಬಳಿ ಸುಳಿಯುತ್ತಿಲ್ಲ.

ಸಾವಿರಾರು ಪುಸ್ತಕ ಇವೆ: ಸರ್ಕಾರ ಪ್ರತಿ ವರ್ಷವೂ ಗ್ರಂಥಾಲಯಗಳಿಗೆ ಪುಸ್ತಕವನ್ನು ನೀಡುತ್ತಿವೆ. ಕೆಲ ಗ್ರಂಥಾಲಯಕ್ಕೆ ದಾನಿಗಳು ಪುಸ್ತಕವನ್ನು ನೀಡಿದ್ದಾರೆ. ಹಾಗಾಗಿ ಎಲ್ಲಾ ಗ್ರಂಥಾಲಯಗಳಲ್ಲಿ ಸಾವಿರಕ್ಕೂ ಹೆಚ್ಚು ಪುಸ್ತಕವಿದೆ. ತಾಲೂಕು ಕೇಂದ್ರದಲ್ಲಿನ ಗ್ರಂಥಾಲಯದಲ್ಲಿ 22 ಸಾವಿರ ಪುಸ್ತಕಗಳು ಓದುಗರಿಗೆ ಲಭ್ಯವಿದೆ. ನಿತ್ಯವೂ 200ಕ್ಕೂ ಹೆಚ್ಚು ಮಂದಿ ಆಗಮಿಸಿ ಪುಸ್ತಕ ಹಾಗೂ ದಿನಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಂಡಿದ್ದಾರೆ.

ನಿರ್ವಹಣೆ ಕೊರತೆ: ಜ್ಞಾನ ದೇಗುಲವಾಗಿರುವ ವಾಚನಾಲಯಗಳು ನಿರ್ವಹಣೆ ಕೊರತೆಯಿಂದ ಬಳಲುತ್ತಿವೆ. ಇರುವ ಕೊಠಡಿಯನ್ನು ರಿಪೇರಿ ಮಾಡಿ ಓದುಗರಿಗೆ ಉತ್ತಮ ವಾತಾವರಣ ಸೃಷ್ಟಿಸಲು ಇಲಾಖೆಯಾಗಲಿ, ಅಧಿಕಾರಿಗಳಾಗಲಿ, ಜನಪ್ರತಿನಿಧಿ ಗಳಾಗಲಿ ಮುಂದಾಗಿಲ್ಲ. ಸ್ವತ್ಛತೆ ಮರೀಚಿಕೆಯಾಗಿದ್ದು, ಗ್ರಂಥಾಲಯದ ಸುತ್ತ ಗಿಡ ಗಂಟೆಗಳು ಬೆಳೆದು ಹಾವು ಹಲ್ಲಿಯ ವಾಸ ಸ್ಥಾನವಾಗಿವೆ. ಗ್ರಂಥಾಲಯದ ಸಮೀಪದಲ್ಲಿ ತಿಪ್ಪೆ ಇರುವುದರಿಂದ ವಾಸನೆ ವಿಪರೀತವಾಗಿದ್ದು, ಮೂಗು ಮುಚ್ಚಿಕೊಂಡು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾವಿರಾರು ಮಂದಿ ಸದಸ್ಯರು: ತಾಲೂಕು ಕೇಂದ್ರದ ಗ್ರಂಥಾಲಯದಲ್ಲಿ 2,846 ಸದಸ್ಯರಿದ್ದರೆ ಗ್ರಾಮೀಣ ಭಾಗದಲ್ಲಿರುವ 41 ಗ್ರಂಥಾಲಯಗಳಲ್ಲಿ ಪ್ರತಿ ವಾಚನಾಲಯದಲ್ಲಿ 100 ರಿಂದ 300ರ ವರೆಗೆ ಸದಸ್ಯರಿದ್ದು, ತಾಲೂಕಿನಲ್ಲಿ ಒಟ್ಟಾರೆ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಗ್ರಂಥಾಲಯದಲ್ಲಿ ಸದಸ್ಯತ್ವ ಪಡೆಯುವ ಮೂಲಕ ಓದುಗರ ದೊಡ್ಡ ಬಳಗ ತಾಲೂಕಿನಲ್ಲಿ ಇದೆ ಎನ್ನುವುದನ್ನು ಒತ್ತಿ ಹೇಳುತ್ತಿದ್ದಾರೆ.

ಆಸಕ್ತಿ ವಹಿಸಬೇಕು: ಪ್ರತಿ ಗ್ರಂಥಾಲಯವನ್ನು ನೋಡಿಕೊಳ್ಳಲು ಸರ್ಕಾರ ಗ್ರಂಥಾಲಯ ಮೇಲ್ವಿಚಾರಕರನ್ನು ನೇಮಿಸಿದ್ದು, ಪ್ರತಿ ತಿಂಗಳು 7 ಸಾವಿರ ರೂ. ಗೌರವ ಧನ ನೀಡುತ್ತಿದೆ. ಇವರು ಆಸಕ್ತಿ ವಹಿಸಿ ಗ್ರಂಥಾಲಯವನ್ನು ಶುಚಿಯಾಗಿ ಇಟ್ಟು ಕೊಳ್ಳುವುದರೊಂದಿಗೆ ಗ್ರಂಥಾಲಯ ಸುತ್ತ ಸ್ವತ್ಛತೆ ಕಾಪಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿ, ತಾವೇ ಮುಂದೆ ನಿಂತು ಸ್ವತ್ಛಗೊಳಿಸಲು ಆಸಕ್ತಿ ವಹಿಸಬೇಕಿದೆ.

ಗ್ರಾಮ ಪಂಚಾಯಿತಿಗೆ ಹಸ್ತಾಂತರ: ಹಾಸನ ಜಿಲ್ಲೆಯ ಏಳು ತಾಲೂಕಿನಲ್ಲಿ ಇರುವ ಎಲ್ಲಾ ಗ್ರಾಮೀಣ ಗ್ರಂಥಾಲಯವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಲಾಗಿದೆ. ಆದರೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ಇರುವ 41 ಗ್ರಂಥಾಲಯಗಳನ್ನು ಈ ವರೆಗೆ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿಲ್ಲ. ಹಸ್ತಾಂತರ ಮಾಡಲು ಈಗಾಗಲೇ ತಾಲೂಕು ಗ್ರಂಥಾಲಯದ ಅಧಿಕಾರಿಗಳು ಕಡತವನ್ನು ಸಿದ್ಧಗೊಳಿಸಿದ್ದಾರೆ.

ಪಟ್ಟಣದ ಗ್ರಂಥಾಲಯಕ್ಕೆ ಪುಸ್ತಕ ಅಗತ್ಯವಿದೆ: ಪಟ್ಟಣದಲ್ಲಿ ಇರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಚನ್ನರಾಯಪಟ್ಟಣ ಶಾಖೆಗೆ ಸ್ಪರ್ಧಾತ್ಮಕ ಪುಸ್ತಕಗಳ ಅಗತ್ಯವಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯವನ್ನು ಉಪಯೋಗಿಸುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಾಗಿ ಓದುವ ಪುಸ್ತಕಗಳ ಕೊರತೆ ಇದೆ. ಇವುಗಳನ್ನು ದಾನ ನೀಡಲು ಯಾರಾದರೂ ಮುಂದೆ ಬರಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಾಗಿ ಕೊಂಡು ಓದಿ ವೃತ್ತಿಗೆ ತೆರಳಿದ ಮೇಲೆ ಆ ಪುಸ್ತಕವನ್ನಾದರೂ ಗ್ರಂಥಾಲಯಕ್ಕೆ ನೀಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕಿದೆ.

ಸಮ್ಮೇಳನ ವೆಚ್ಚಕ್ಕೆ ಕಡಿವಾಣ ಹಾಕಿ: ಸರ್ಕಾರಗಳು ರಾಜ್ಯ ಸಾಹಿತ್ಯ ಸಮ್ಮೇಳನ, ಜಿಲ್ಲಾ ಸಮ್ಮೇಳನ ಹಾಗೂ ತಾಲೂಕು ಸಮ್ಮೇಳನಕ್ಕೆ ಕೋಟ್ಯಂತರ ರೂ. ವೆಚ್ಚ ಮಾಡುತ್ತವೆ. ಆದರೆ ಗ್ರಂಥಾಲಯ ಅಭಿವೃದ್ಧಿಗೆ ಮುಂದಾಗುತ್ತಿಲ್ಲ. ಸಮ್ಮೇಳನಕ್ಕೆ ನೀಡುವ ಅನುದಾನದಲ್ಲಿ ಸ್ವಲ್ಪ ಭಾಗವನ್ನು ಕಡಿತಗೊಳಿಸಿ ಆ ಹಣವನ್ನು ಗ್ರಾಮೀಣ ಗ್ರಂಥಾಲಯಗಳಿಗೆ ನೀಡಬೇಕು ಎಂದು ಓದುಗರು ಸಲಹೆ ನೀಡಿದ್ದಾರೆ.

 

-ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.