ರೈತರು ಅರಣ್ಯ ಕೃಷಿಗೆ ಮುಂದಾಗಬೇಕು
Team Udayavani, Jun 6, 2020, 6:22 AM IST
ಚನ್ನರಾಯಪಟ್ಟಣ: ಸರ್ಕಾರ ಲಕ್ಷಾಂತರ ರೂ. ವೆಚ್ಚ ಮಾಡಿ ಅರಣ್ಯ ಇಲಾಖೆಯಲ್ಲಿ ಸಸಿಗಳನ್ನು ಬೆಳೆಸಿದೆ. ಇವುಗಳನ್ನು ಪಡೆದು ರೈತರು ಅರಣ್ಯ ಕೃಷಿಗೆ ಮುಂದಾಗಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಸಲಹೆ ನೀಡಿದರು. ಪಟ್ಟಣದ ಬೆಲಸಿಂದ ಸಸ್ಯ ಕ್ಷೇತ್ರದಲ್ಲಿ ಅರಣ್ಯ ಕೃಷಿ ಯೋಜನೆಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಸಸಿ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಅರಣ್ಯ ಇಲಾಖೆ ಸುಮಾರು 26 ಜಾತಿಯ ಸಸಿಗಳನ್ನು ಬೆಳೆಸಿದ್ದು, 1ರೂ.ಗೆ ಸಸಿ ನೀಡಲಾಗುತ್ತಿದೆ. ಇವುಗಳನ್ನು ಪಡೆದು ಕೃಷಿ ಮಾಡಿದರೆ ಪ್ರತಿ ಸಸಿಗೆ ಮೊದಲ ವರ್ಷ 35 ರೂ. ದ್ವಿತೀಯ ವರ್ಷ 45 ರೂ. ತೃತೀಯ ವರ್ಷ 50 ರೂ. ಸಹಾಯಧನವನ್ನು ಸರ್ಕಾರ ರೈತರ ನೇರವಾಗಿ ಖಾತೆಗೆ ಜಮಾ ಮಾಡಲಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ಇಲಾಖೆ ಅಧಿಕಾರಿಗಳು ರೈತರಿಗೆ ಸಸಿ ನೀಡಿದರೆ ಸಾಲದು ಅವುಗಳ ಪೋಷಣೆಯ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದರು. ಸರ್ಕಾರಿ ಅರಣ್ಯ ಕೃಷಿ ಯೋಜನೆಯಲ್ಲಿ 1.81 ಲಕ್ಷ ಸಸಿಗಳನ್ನು ಬೆಳೆಸಿದ್ದು, ರೈತರಿಗೆ ಕೇವಲ ಒಂದು ರೂ.ಗೆ ಸಸಿ ನೀಡಲಾಗುತ್ತಿದೆ ಸಸಿ ಪಡೆಯಲು ಕೃಷಿ ಭೂಮಿ ಪಹಣಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲನ್ನು ನೀಡಬೇಕು ಎಂದು ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿದರು.
ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ್, ಪುರಸಭೆ ಸಿಒ ಕುಮಾರ, ಪರಿಸರ ಅಭಿಯಂತ ವೆಂಕಟೇಶ್, ಅರಣ್ಯ ಇಲಾಖೆ ಆರ್‌ಎಫ್ ಹೇಮಂತಕುಮಾರ, ಹಿರಿಯ ತೋಟಗಾರಿಕೆ ಇಲಾಖೆ ನಿದೇಶಕ ಸತೀಶ್, ಕೃಷಿ ಇಲಾಖೆ ಅಧಿಕಾರಿ ರಶ್ಮಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.