ಶಾಶ್ವತ ನೀರಾವರಿಗಾಗಿ ಹೋರಾಟ
Team Udayavani, Dec 2, 2019, 4:16 PM IST
ಬೇಲೂರು: ಬೇಲೂರು ವಿಧಾನಸಭಾ ಕ್ಷೇತ್ರದ ಬಯಲು ಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ನಾವು ನೀರಿಗಾಗಿ ಜೈಲಿಗೂ ಹೋಗಲು ಸಿದ್ಧರಿದ್ದೇವೆ ಎಂದು ಅರಸೀಕೆರೆ ತಾಲೂಕು ಕೊಳಗುಂದ ಕೇದಿಗೆ ಮಠದ ಶ್ರೀಜಯಚಂದ್ರ ಶೇಖರ ಸ್ವಾಮೀಜಿ ಹೇಳಿದರು.
ತಾಲೂಕಿನ ಹೆಬ್ಟಾಳು ಗ್ರಾಮದಲ್ಲಿನ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ತಾಲೂಕಿನ ಬರಗಾಲ ಪೀಡಿತ ಪ್ರದೇಶಗಳಿಗೆ ಶಾಶ್ವತ ನೀರಾವರಿ ಕಲ್ಪಿಸಬೇಕೆಂದು ಹತ್ತಾರು ಹೋರಾಟಗಳನ್ನು ಮಾಡಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಬೇಸರದ ಸಂಗತಿಯಾಗಿದೆ ಎಂದರು.
ಬೇಲೂರು ಕ್ಷೇತ್ರದ ಹಳೇಬೀಡು– ಮಾದೀಹಳ್ಳಿ ಮತ್ತು ಜಾವಗಲ್‌ಹೋಬಳಿ ವ್ಯಾಪ್ತಿಯಲ್ಲಿ ದಿನನಿತ್ಯ ಕುಡಿಯುವ ನೀರಿನ ಬವಣೆ ಹೇಳತೀರದಾಗಿದೆ. ವಿಶೇಷವಾಗಿ ಜಾವಗಲ್‌ಹೋಬಳಿ ತೀವ್ರ ಬರಗಾಲದಿಂದ ತತ್ತರಿಸಿಸುತ್ತಿದ್ದು, ಅಲ್ಲಿನ ಜನರು ಪಟ್ಟಣಗಳ ಕಡೆಗೆ ವಲಸೆ ಹೋಗುವಸ್ಥಿತಿ ನಿರ್ಮಾಣವಾಗಿದೆ ಈ ಹಿನ್ನೆಲೆಯಲ್ಲಿ ಬಯಲು ಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸಬೇಕೆಂದು ಐದಾರು ವರ್ಷಗಳಿಂದ ಹೋರಾಟದ ಸಂದರ್ಭ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ಗಳು ತೇಪೆ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜನಪ್ರತಿನಿಧಿಗಳು ನೀರಾವರಿಗಾಗಿ ತಮ್ಮ ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ ಎಂದ ಅವರು, ಬೇಲೂರಿನಲ್ಲಿ ಕಳೆದ ಎರಡು ವರ್ಷದ ಹಿಂದೆ ನಡೆದ ನೀರಾವರಿ ಹೋರಾಟದಲ್ಲಿ ಪುಷ್ಪಗಿರಿ ಶ್ರೀಗಳು ಸೇರಿದಂತೆ 83 ಜನರ ಮೇಲೆ ಕೇಸು ದಾಖಲಿಸಲಾಗಿದೆ. ಈ ಭಾಗಕ್ಕೆ ಶಾಶ್ವತ ವಾಗಿ ನೀರಾವರಿಯನ್ನು ಕಲ್ಪಿಸುವವರೆಗೂ ನಿರಂತರ ಹೋರಾಟ ನಡೆಯುತ್ತದೆ. ರಾಜೀ ಸಂಧಾನ ಸಾಧ್ಯವಿಲ್ಲ ಎಂದರು.
ಈ ಸಂದರ್ಭ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವಕುಮಾರ್, ತಾಪಂ ಮಾಜಿ ಅಧ್ಯಕ್ಷೆ ನಳಿನಾ, ಗ್ರಾಪಂ ಸದಸ್ಯೆ ಹೇಮಾ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.