ಕೋವಿಡ್‌ ತಡೆಗೆ ಹೆಚ್ಚುವರಿ 7 ಕೋಟಿ ರೂ.

ಒಂದೂವರೆ ವರ್ಷದಲ್ಲಿ ಕೋವಿಡ್‌ ನಿರ್ವಹಣೆಗಾಗಿ 15 ಕೋಟಿ ರೂ. ವೆಚ್ಚ ಡೀಸಿ ಗಿರೀಶ್‌ ಮಾಹಿತಿ

Team Udayavani, Sep 19, 2021, 3:42 PM IST

ಕೋವಿಡ್‌ ತಡೆಗೆ ಹೆಚ್ಚುವರಿ 7 ಕೋಟಿ ರೂ.

ಹಾಸನ: ಕೋವಿಡ್‌ ನಿರ್ವಹಣೆಗಾಗಿ ಕಳೆದ ಒಂದೂವರೆ ವರ್ಷದಲ್ಲಿ ಜಿಲ್ಲೆಯಲ್ಲಿ 15 ಕೋಟಿ ರೂ. ವೆಚ್ಚವಾಗಿದ್ದು, ಹೆಚ್ಚುವರಿಯಾಗಿ ನಿನ್ನೆಯಷ್ಟೇ 7 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು.

ಜಿಲ್ಲಾ ಪತ್ರಕರ್ತರ ಸಂಘವು ಶನಿವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ಕೊರೊನಾ 2ನೇ ಅಲೆ ಹೆಚ್ಚು ಬಾಧಿಸಿದ ಸಂದರ್ಭಲ್ಲಿ ಸರ್ಕಾರ ದಿಂದಲೇ 50 ವೆಂಟಿ ಲೇಟರ್‌ಗಳು ಜಿಲ್ಲೆಗೆ ಬಂದವು. ಜಿಲ್ಲಾಡ ಳತವು ಮುಖ್ಯವಾಗಿ ಔಷಧಿ ಹಾಗೂ ಕೊರೊನಾ ಕೇರ್‌ ಸೆಂಟರ್‌ಗಳ ನಿರ್ವಹಣೆ ಮಾಡಿತ್ತು. ಆಸ್ಪತ್ರೆ ಆಥವಾ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಾದ ಕೊರೊನಾ ಸೋಂಕಿತರಿಗೆ ಉಪಹಾರ, ಊಟಕ್ಕೆ ದಿನಕ್ಕೆ 230 ರೂ. ವೆಚ್ಚ ಮಾಡಲಾಯಿತು ಎಂದರು.

3ನೇ ಅಲೆ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಸಿದ್ಧತೆ ಮಾಡಿಕೊಂಡಿದ್ದು, ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಹೆಚ್ಚುವರಿ ಆಮ್ಲಜನಕ ಘಟಕ, ಎಲ್ಲ ತಾಲೂಕುಗಳಲ್ಲೂ ಆಮ್ಲಜನಕ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಈಗಾಲೇ 5 ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕಗಳು ಕಾರ್ಯಾರಂಭ ಮಾಡಿದ್ದು, ಇನ್ನು ಎರಡು ತಾಲೂಕುಗಳಲ್ಲಿ ಆಮ್ಲಜನಕ ಘಟಕಗಳ ನಿರ್ಮಾಣ ಪ್ರಗತಿಯಲ್ಲಿದೆ. ಜಿಲ್ಲೆಯ 15 ಸಮುದಾಯ ಆರೋಗ್ಯ ಕೇಂದ್ರಗಳ ವಾರ್ಡುಗಳಿಗೂ ಆಮ್ಲಜನಕ ಪೂರೈಕೆಯ ಪೈಪ್‌ಗ್ಳ ಅಳವಡಿಕೆ ಮಾಡಿದ್ದು, ಜಂಬೋ ಸಿಲಿಂಡರ್‌ ಗಳ ಬಳಸಿಕೊಂಡು ಸಮು ದಾಯ ಆರೋಗ್ಯ ಕೇಂದ್ರಗಳಲ್ಲೂ 30 ಕೊರೊನಾ ಸೋಂಕಿತರಿಗೆ ಆಮ್ಲಜನಕ ಸಹಿತ ಚಿಕಿತ್ಸೆ ನೀಡುವ ವ್ಯವಸ್ಥೆಯಾಗಿದೆ ಎಂದರು.

ತಾಲೂಕು ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನ್‌ ಯಂತ್ರಗಳ ಬೇಡಿಕೆಯೂ ಬಂದಿದ್ದು, ಮೊದಲ ಹಂತದಲ್ಲಿ ಹೊಳೆ ನರಸೀಪುರ ತಾಲೂಕು ಆಸ್ಪತ್ರೆಗೆ ಸಿಟಿ ಸ್ಕ್ಯಾನ್‌ ಒದಗಿಸುವ ಪ್ರಯತ್ನ ನಡೆದಿದೆ. 2,3 ಕೋಟಿ ರೂ. ವೆಚ್ಚವಾಗಲಿದೆ. ಟೆಂಡರ್‌ ಪ್ರಕ್ರಿಯೆ ನಡೆದಿದೆ. ಅರಸೀಕೆರೆ ಮತ್ತು ಸಕಲೇಶಪುರ ತಾಲೂಕು ಆಸ್ಪತ್ರೆಗೂ ಸಿಟಿ ಸ್ಕ್ಯಾನ್‌ ಬೇಡಿಕೆ ಬಂದಿದೆ ಎಂದರು.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿಯ ವಿರುದ್ಧ ಕರವೇ ಪ್ರತಿಭಟನೆ

520 ಜನರಿಗೆ ಲಕ್ಷ ರೂ. ಪರಿಹಾರ: ರಾಜ್ಯ ಸರ್ಕಾರ ಕೋವಿಡ್‌ ದಿಂದ ಮೃತಪಟ್ಟ ಬಿಪಿಎಲ್‌ ಕುಟುಂಬ ಗಳಿಗೆ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, 2020 ಡೆಸೆಂಬರ್‌ ವರೆಗೆ ಮೃತಪಟ್ಟವರ ಮಾಹಿತಿ ಕೇಳಿದೆ. ಈ ಸಂಬಂಧ ಜಿಲ್ಲೆಯ 520 ಕುಟುಂಬಗಳ ವಿವರವನ್ನು ನಿಗದಿತ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಕೋವಿಡ್‌ ಸೋಂಕಿತರಿಂದ ಹೆಚ್ಚು ಬಿಲ್‌ ವಸೂಲಿ ಮಾಡಿವೆ ಎಂಬ ಆರೋಪದ ಬಗ್ಗೆ ತನಿಖೆ ನಡೆದಿದ್ದು 160 ಪ್ರಕರಣಗಳಲ್ಲಿ 10 ರಿಂದ 12 ಲಕ್ಷ ರೂ. ಹೆಚ್ಚು ಬಿಲ್‌ ವಸೂಲಿ ಮಾಡಿದ್ದನ್ನು ಪತ್ತೆಹಚ್ಚಿ ಸಂಬಂಧಿಸಿದವರಿಗೆ ವಾಪಸ್‌ ಕೊಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಭೂ ಪರಿಹಾರ ನೀಡಲು ಕ್ರಮ: ಎತ್ತಿನಹೊಳೆ ಯೋಜನೆ 30 ಕಿ.ಮೀ. ನಾಲೆ ನಿರ್ಮಾಣಕ್ಕೆ ಭೂ ಸ್ವಾಧೀನದ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. 15 ರಿಂದ 20 ಗ್ರಾಮಗಳ ಭೂ ಮಾಲೀಕರಿಗೆ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಕೆಲವರು ಹೆಚ್ಚು ಪರಿಹಾರ ಕೋರಿ ನ್ಯಾಯಾಲಯಕ್ಕೆ ಹೋಗುವವರಿದ್ದರೆ ಅಂತಹವರಿಗೆ ಸಲ್ಲಿಸ ತಕ್ಕ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿಯೇ ಠೇವಣಿ ಇರಿಸಿ ಭೂ ಸ್ವಾಧೀನಕ್ಕೆ ಕ್ರಮಕೈಗೊಳ್ಳಲು ಜಲಸಂಪನ್ಮೂಲ ಸಚಿವರು ಸೂಚನೆ ನೀಡಿದ್ದಾರೆ. ಆದರೆ ನ್ಯಾಯಾಲಯಕ್ಕೆ ಠೇವಣಿ ಇರಿಸಿದ್ದರೆ ಆ ಮೊತ್ತವನ್ನು ಭೂ ಮಾಲೀಕರು ಪಡೆದು ಕೊಳ್ಳವ ಪ್ರಕ್ರಿಯೆ ವಿಳಂಬವಾಗಲಿದೆ. ಹಾಗಾಗಿ ಮತೊಮ್ಮೆ ನೊಟೀಸ್‌ ನೀಡಿ ಭೂ ಮಾಲೀಕರಿಗೆ ಮನವರಿಕೆ ಮಾಡಿಕೊಟ್ಟು ಪರಿಹಾರ ಪಡೆದುಕೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಯವರು ಹೇಳಿದರು. ಎತ್ತಿನಹೊಳೆ ಪೈಪ್‌ ಲೈನ್‌ ಹಾಗೂ ವಿದ್ಯುತ್‌ ವಿತರಣಾ ಕೇಂದ್ರ ನಿರ್ಮಾಣಕ್ಕೆ ಅರಣ್ಯ ಇಲಾಖೆಯವರಿಂದ ಅಡ್ಡಿಯಿದ್ದರೆ ಸಭೆ ನಡೆಸಿ ಅಡಚಣೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದೂ ಸ್ಪಷ್ಟಪಡಿಸಿದರು.

ಚತುಷ್ಪಥ ರಸ್ತೆಗೆ ನೆರವು
ಹಾಸನ- ಸಕಲೇಶಪುರ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮರಳು, ಜಲ್ಲಿ ಮತ್ತಿತರ ಸಾಮಗ್ರಿಗಳ ಪಡೆದುಕೊಳ್ಳಲು ಜಿಲ್ಲಾಡಳಿತ ದಿಂದ ಎಲ್ಲ ನೆರವು ನೀಡಲಾಗಿದೆ. ಆದರೆ ಗುತ್ತಿಗೆದಾರರು ಕಾಮಗಾರಿ ಯನ್ನು ಚುರುಕಾಗಿ ನಿರ್ವಹಿಸುತ್ತಿಲ್ಲ. ಸೇತುವೆಗಳ ನಿರ್ಮಾಣವನ್ನೂ ಇನ್ನೂ ಮಾಡಿಲ್ಲ. ಹಾಗೆಯೇ ಹಾಸನದ ರೈಲ್ವೆ ಮೇಲ್ಸೆತುವ ಕಾಮಗಾರಿಯೂ ವಿಳಂಬವಾಗಿದೆ. ರೈಲ್ವೆ ಇಲಾಖೆಯವರು ಸ್ಪಂದಿಸುತ್ತಿಲ್ಲ ಎಂಬ ದೂರಿದೆ. ವಿಧಾನಸಭಾ ಅಧಿವೇಶನ ಮುಗಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಹೇಳಿದರು.

ಲಸಿಕೆ ಅಭಿಯಾನ : ಜಿಲ್ಲೆಯಲ್ಲಿ ಶೇ.115 ಸಾಧನೆ
ಹಾಸನ: ಜಿಲ್ಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೋವಿಡ್‌ ಬೃಹತ್‌ ಲಸಿಕಾ ಮೇಳದಲ್ಲಿ ಶೇ.115 ರಷ್ಟು ಸಾಧನೆಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಲಸಿಕೆ ನೀಡಿದ ಜಿಲ್ಲೆಗಳ ಪೈಕಿ ಹಾಸನ ಜಿಲ್ಲೆಯ 5ನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ 80, 000 ಮಂದಿಗೆ ಕೊರೊನಾ ಲಸಿಕೆ ಹಾಕುವ ಗುರಿಯಿತ್ತು. ಆದರೆ 92, 000 ಹೆಚ್ಚು ಮಂದಿಗೆ ಲಸಿಕೆ ನೀಡುವ ಮೂಲಕ ಶೇ.115 ರಷ್ಟು ಗುರಿ ಸಾಧನೆಯಾಗಿದೆ. ರಾತ್ರಿ 8 ಗಂಟೆವರೆಗೂ ಲಸಿಕೆ ಹಾಕುವ ಅಭಿಯಾನ ನಡೆಯಿತು ಎಂದು ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಶೇ.135 ಗುರಿ ಸಾಧನೆಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ನಂತರ ಶಿವಮೊಗ್ಗ, ರಾಮನಗರ, ಧಾರವಾಡದ ನಂತರ ಹಾಸನ ಜಿಲ್ಲೆ ಸ್ಥಾನ ಪಡೆದಿದೆ ಎಂದು ಹೇಳಿದರು.

ಟಾಪ್ ನ್ಯೂಸ್

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.