ಕಾಡಾನೆ ದಾಳಿ: ಕೃಷಿ ಕಾರ್ಮಿಕ ಬಲಿ
Team Udayavani, Dec 24, 2017, 3:27 PM IST
ಹಾಸನ: ಅರಣ್ಯ ಇಲಾಖೆಯು ಎರಡು ಪುಂಡಾನೆಗಳನ್ನು ಹಿಡಿದು ಸಾಗಿಸಿದ ಬೆನ್ನಲ್ಲೇ ಕಾಡಾನೆ ದಾಳಿಗೆ ಕೃಷಿ ಫಾರಂವೊಂದರ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಆಲೂರು ತಾಲೂಕಿನ ಅಬ್ಬನಕೊಪ್ಪಲು ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ತಿಂಗಳೊಳಗೆ ಜಿಲ್ಲೆಯಲ್ಲಿ ಇಬ್ಬರನ್ನು ಕಾಡಾನೆಗಳು ಬಲಿ ತೆಗೆದುಕೊಂಡಿವೆ.
ಡಿ.6ರಂದು ಸಕಲೇಶಪುರ ತಾಲೂಕಿನ ರಾಜೇಂದ್ರಪುರದ ಬಳಿ ಕಾಫಿ ತೋಟದ ರೈಟರ್ ಯೋಗೀಶ್ ಎಂಬುವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರೆ, ರೈತರ ದಿನಾಚರಣೆಯ ದಿನವಾದ ಶನಿವಾರವೇ ಕೃಷಿ ಕಾರ್ಮಿಕ ಶಿವಪ್ಪ (65) ಎಂಬುವರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
40 ವರ್ಷಗಳಿಂದ ಕುದುರೆ ಸಾಕುವ ಮತ್ತು ಕಾಫಿ ತೋಟವೂ ಇರುವ ಫಾರಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿವಪ್ಪ, ಶುಕ್ರವಾರ ರಾತ್ರಿ ಪಾಳಿ ಮುಗಿಸಿ ಶನಿವಾರ ಮುಂಜಾನೆ ನಡೆದುಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾಗ, ದಿಢೀರ್ ದಾಳಿ ಮಾಡಿದ ಸಲಗ ಶಿವಪ್ಪ ಅವರ ತಲೆ ಮೇಲೆ ಕಾಲಿಟ್ಟು ಸಾಯಿಸಿದೆ.
ಪ್ರತಿಭಟನೆ: ವಿಷಯ ತಿಳಿಯುತ್ತಿದ್ದಂತೆಯೇ ಅಬ್ಬನಕೊಪ್ಪಲು ಸುತ್ತಮುತ್ತಲಿನ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿ
ಕಾಡಾನೆ ಉಪಟಳ ತಡೆಯದ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಾಡಾನೆಗಳಿಂದ ಸಾವು ಸಂಭವಿಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಅಷ್ಟಿಷ್ಟು ಪರಿಹಾರ ಕೊಟ್ಟು ಹೋಗುತ್ತಾರೆ.
ನಂತರ ಇತ್ತ ಮುಖ ಹಾಕುವುದಿಲ್ಲ ಎಂದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಎಚ್.ಕೆ.ಕುಮಾರಸ್ವಾಮಿ ಹಾಗೂ ಡಿಎಫ್ಒ ಮಂಜುನಾಥ್‌ರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೃತರ
ಕುಟುಂಬಕ್ಕೆ ಉದ್ಯೋಗ ನೀಡ ಬೇಕು ಹಾಗೂ ಈ ಭಾಗದಲ್ಲಿರುವ ಎಲ್ಲಾ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡುವ ನಿರ್ಧಾರ
ಪ್ರಕಟಿಸಬೇಕು. ಅಲ್ಲಿಯವರೆಗೂ ಶವ ಎತ್ತುವುದಿಲ್ಲ ಎಂದು ಪಟ್ಟುಹಿಡಿದರು. ನಂತರ ಶಾಸಕ ಎಚ್.ಕೆ. ಕುಮಾರಸ್ವಾಮಿ ಪ್ರತಿಭಟನಾಕಾರರ ಮನವೊಲಿಸಿ, ಮೃತದೇಹ ಸ್ಥಳಾಂತರ ಮಾಡಿಸಿದರು.
ಡಿಸೆಂಬರ್ 6ರಂದು ರಾಜೇಂದ್ರಪುರ ಬಳಿ ಕಾಫಿ ತೋಟದಲ್ಲಿ ರೈಟರ್ ಆಗಿದ್ದ ರಾಜೇಶ್ ಎಂಬಾತ ಸಲಗನ ದಾಳಿಗೆ ಬಲಿಯಾಗಿದ್ದರು.
ಅದಾದ ನಂತರ ಸ್ಥಳೀಯರು ಪ್ರತಿಭಟನೆ ತೀವ್ರಗೊಳಿಸಿದ್ದರಿಂದ ನಂತರ ಎರಡು ಪುಂಡಾನೆ ಹಿಡಿದು ಸ್ಥಳಾಂತರಿಸಲಾಗಿತ್ತು.
ಆದರೂ ಕಾಡಾನೆಗಳ ದಾಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.