ಹೆಚ್.ಕೆ.ಕುಮಾರಸ್ವಾಮಿ ರಾಜ್ಯದಲ್ಲಿಯೇ ಅತ್ಯಂತ ಸೋಮಾರಿ ಶಾಸಕ: ಹೆಚ್.ಎಂ.ವಿಶ್ವನಾಥ್ ವಾಗ್ದಾಳಿ
Team Udayavani, Mar 9, 2022, 7:00 PM IST
ಆಲೂರು : ಹೆಚ್.ಕೆ.ಕುಮಾರಸ್ವಾಮಿ ರಾಜ್ಯದಲ್ಲಿಯೇ ಅತ್ಯಂತ ಸೋಮಾರಿ ಶಾಸಕ ಈತನಿಂದ ಅಭಿವೃದ್ಧಿ ಅಸಾಧ್ಯ ಎಂದು ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.
ಅವರು ಆಲೂರು ಪಟ್ಟಣದಲ್ಲಿ ಉದಯವಾಣಿ ಪತ್ರಿಕೆಯೊಂದಿಗೆ ಮಾತನಾಡಿ ಹೆಚ್.ಕೆ.ಕುಮಾರಸ್ವಾಮಿ ಸುಮಾರು 14 ವರ್ಷಗಳಿಂದ ಶಾಸಕರಾಗಿದ್ದಾರೆ ಕ್ಷೇತ್ರಾದ್ಯಂತ ಸುತ್ತಾಡಿದ್ರು ಒಂದು ಅಭಿವೃದ್ಧಿ ಕೆಲಸಗಳಾಗಿಲ್ಲ ನಾನು ಶಾಸಕನಾದ ಸಂದರ್ಭದಲ್ಲಿ ಮಾಡಿದ ಅಭಿವೃದ್ಧಿಗಳು ಮಾತ್ರ ಕಣ್ಣಿಗೆ ಕಾಣಿಸುತ್ತಿವೆ ನಾನು ಶಾಸಕನಾದ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ 17 ಹೈಸ್ಕೂಲ್ ಹಾಗೂ ಮೂರು ಮೊರಾರ್ಜಿ ವಸತಿ ಶಾಲೆ,ಆಲೂರು ಪಟ್ಟಣದಲ್ಲಿ ನ್ಯಾಯಾಲಯ ಕಟ್ಟಡ,ಮಿನಿ ವಿಧಾನಸೌಧ,ಸೇರಿದಂತೆ ನೂರಾರು ಅಭಿವೃದ್ಧಿ ಕೆಲಸ ಮಾಡಲಾಗಿದೆ ಈಗಿನ ಶಾಸಕ ಅವುಗಳಿಗೆ ಸುಣ್ಣ ಬಣ್ಣ ಹೊಡೆಸಿ ಹಣ ಮಾಡಿಕೊಳ್ಳುತ್ತಿದ್ದಾರೆ ಇಂತಹ ವಲಸಿಗ ಶಾಸಕರಿಂದ ಅಭಿವೃದ್ಧಿ ಸಾದ್ಯನಾ ಎಂದರಲ್ಲದೇ ಅದ್ದರಿಂದ ಮುಂಬರುವ ದಿನಗಳಲ್ಲಿ ಪಕ್ಷದ ವತಿಯಿಂದ ಸ್ಥಳಿಯ ಅಭ್ಯರ್ಥಿಗೆ ಟಿಕೆಟ್ ಕೊಡಿಸುವ ಮೂಲಕ ಅಭ್ಯರ್ಥಿ ಗೆಲುವಿಗೆ ಟೊಂಕ ಕಟ್ಟಿ ನಿಲ್ಲಬೇಕಾಗಿದೆ ಸದ್ಯದಲ್ಲಿ ಹಂಚೂರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಮುಖಂಡರ ಜೊತೆ ಸಭೆ ನಡೆಸಿ ಪಕ್ಷ ಸಂಘಟನೆಗೆ ಒತ್ತು ನೊಡೋಣ ಎಂದರು.
ಪಶ್ಚಿಮ ಘಟ್ಟದಲ್ಲಿ ಕಾಡಾನೆ ಉಪಟಳ ಜನಸಾಮಾನ್ಯರು ಹೈರಾಣ : ಪಶ್ಚಿಮ ಘಟ್ಟದ ಭಾಗದಲ್ಲಿ ಕಾಡಾನೆ ಉಪಟಳ ಮಿತಿಮೀರಿದ್ದು ಜನಸಾಮಾನ್ಯರು ಹೈರಾಣಾಗಿದ್ದಾರೆ ಜನಸಾಮಾನ್ಯರ ಹಿತದೃಷ್ಟಿಯಿಂದ ಕಳೆದ ವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಬಜೆಟ್ ನಲ್ಲಿ ಸುಮಾರು ನೂರು ಕೋಟಿ ಹಣ ಮೀಸಲಿಟ್ಟಿದ್ದು ಇದು ಅಭಿವೃದ್ಧಿ ದ್ಯೂತಕ,ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಕ್ಷೇತ್ರಕ್ಕೆ ಕರೆಸಿ ಅವರಿಗೆ ಸನ್ಮಾನ ಮಾಡುವ ಮೂಲಕ ಅವರಿಗೆ ಕ್ಷೇತ್ರದ ಸಮಸ್ಯೆ ಬಗ್ಗೆ ಗಮನ ಸೆಳೆಯಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಎ.ಹೆಚ್.ರಮೇಶ್, ಮಂಜುನಾಥ್, ರಾಜಕುಮಾರ್, ಪೂವಯ್ಯ,ಲೋಕೇಶ್ ದೊಡ್ಡಕಣಗಾಲ್,ಅಜಿತ್ ಚಿಕ್ಕಕಣಗಾಲ್,ಗಣೇಶ್,ರುದ್ರೇಗೌಡ,ರವಿ,ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.