ಕೃಷಿ ಚಟುವಟಿಕೆಗಳಿಗೆ ಮುಕ್ತ ಅವಕಾಶ: ಎಸ್‌ಟಿಎಸ್
Team Udayavani, Apr 28, 2020, 5:58 PM IST
ಸಾಂದರ್ಭಿಕ ಚಿತ್ರ
ಹಾಸನ: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಯಲ್ಲಿದ್ದರೂ ಕೃಷಿ ಚಟುವಟಿಕೆ ಹಾಗೂ ಕೃಷಿ ಉತ್ಪನ್ನಗಳ ಸಾಗಣೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು. ಹಾಸನ ಎಪಿಎಂಸಿಗೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತ ನಾಡಿ, ಹಾಸನದಲ್ಲಿ ಶೀತಲಗೃಹ ಕೊರತೆ ಇದೆ. ಜಿಲ್ಲಾಡಳಿತವು ಸೂಕ್ತ ಜಾಗ ಗುರುತಿಸಿದರೆ ಶೀತಲಗೃಹಗಳ ನಿರ್ಮಾಣ ಹಾಗೂ ಎಪಿಎಂಸಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲು ಅರ್ಥಿಕ ನೆರವು ನೀಡಲಾಗುವುದು ಎಂದರು.
ಕೃಷಿ ಚಟುವಟಿಕೆಗಳಿಗೆ ಬೇಕಾದ ಸಲಕರಣೆ ಗಳು ಹಾಗೂ ದಿನಸಿ ಮತ್ತು ತರಕಾರಿಗಳನ್ನು ವರ್ತಕರು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಅಂತಹವರ
ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಪ್ರಸಕ್ತ ಮುಂಗಾರಿನಲ್ಲಿ ಬಿತ್ತನೆಗೆ ಆಲೂಗಡ್ಡೆ ಬಿತ್ತನೆ ಬೀಜ ಅಗತ್ಯ ಪ್ರಮಾಣದಷ್ಟು ದಾಸ್ತಾನು ಮಾಡಲಾಗಿದೆ. ಜೊತೆಗೆ ಕೃಷಿಗೆ ಬೇಕಾಗಿರುವ ರಸಗೊಬ್ಬರ ಶೇ.90 ರಷ್ಟು ದಾಸ್ತಾನಿದೆ ಎಂದು ಹೇಳಿದರು.
ಎಪಿಎಂಸಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಹಾಸನದಲ್ಲಿ ಹೆಚ್ಚುವರಿಯಾಗಿ ಬೆಳೆಯು ತ್ತಿರುವ ಹಸಿ ಮೆಣಸಿನಕಾಯಿ, ಕೋಸು, ಸಿಹಿ ಕುಂಬಳ ಮತ್ತಿತ್ತರ ತರಕಾರಿಗಳಿಗೆ ಬೇರೆ ಸ್ಥಳಗಳಲ್ಲಿ ಇರುವ ಬೇಡಿಕೆ ಗುರುತಿಸಿ ರೈತರನ್ನು ಸಂಪರ್ಕ ಮಾಡಿ ಮಾರಾಟಕ್ಕೆ ಸಹಕರಿಸಬೇಕು ಎಂದು ತೋಟಗಾರಿಕಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶಾಸಕ ಪ್ರೀತಂ ಜೆ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಎಪಿಎಂಸಿ ಅಧ್ಯಕ್ಷ ಮಂಜೇಗೌಡ, ಜಿಲ್ಲಾಧಿಕಾರಿ ಗಿರೀಶ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಕುಮಾರ್, ಹಾಸನ ಎಪಿಎಂಸಿ ಉಪ ನಿರ್ದೇಶಕ ಶ್ರೀಹರಿ, ಎಸ್ಪಿ ಶ್ರೀನಿವಾಸಗೌಡ, ಉಪವಿಭಾಗಾಧಿಕಾರಿ ಡಾ.ನವೀನ್ ಭಟ್, ಜಂಟಿ ಕೃಷಿ ನಿರ್ದೇಶಕ ಮಧುಸೂದನ್, ತೋಟಗಾರಿಕೆ
ಇಲಾಖೆ ಉಪನಿರ್ದೇಶಕ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.