ಪದವೀಧರ ಶಿಕ್ಷಕರ ಬೇಡಿಕೆ ಈಡೇರಿಸಿ
ಪದವಿ, ವಿದ್ಯಾರ್ಹತೆ, ಸೇವಾನುಭವ ಹೊಂದಿದ್ದರೂ ಪದೋನ್ನತಿ ನೀಡಿಲ್ಲ: ಆರೋಪ
Team Udayavani, Jun 28, 2019, 2:56 PM IST
ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ಬೇಲೂರು ತಾಲೂಕು ಘಟಕದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
ಬೇಲೂರು: ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದಿಂದ ಈಗಾಗಲೇ ಪದವೀಧರರಿಗೆ ಬೋಧನಾ ಕ್ರಮದಲ್ಲಿ ಅನ್ಯಾಯವಾಗುತ್ತಿದೆ ಎಂದು ಹತ್ತಾರು ಬಾರಿ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ಬೇಲೂರು ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಕೀರ್ ಆಲಿ ಖಾನ್ ಮನವಿ ಸಲ್ಲಿಸಿದ ನಂತರ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ಮಂಜೇಗೌಡ, 1ರಿಂದ 7ನೇ ತರಗತಿಗೆ ನೇಮಕವಾದ ನಾವು 2005 ರಿಂದ 8ನೇ ತರಗತಿ ಪ್ರಾರಂಭಿಸಿದಾಗಿನಿಂದಲೂ 6ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೂ ಬೋಧಿಸುತ್ತಿದ್ದೇವೆ ಎಂದರು.
ಸೇವಾ ಹಿರಿತನ ಕಡೆಗಣನೆ: ಪದವಿ ಹಾಗೂ ವಿದ್ಯಾರ್ಹತೆ ಸೇವಾನುಭವ ಹೊಂದಿದ್ದರೂ ನಮ್ಮನ್ನು ಪರಿಗಣಿದೇ ಉಲ್ಲೇಖ (1) ರ ಆದೇಶದನ್ವಯ ಪ್ರಾಥಮಿಕ ಶಾಲಾ ಶಿಕ್ಷಕರು (1-5 ಪಿಎಸ್ ಟಿ) ವೃಂದಕ್ಕೆ ಸೇರ್ಪಡೆ ಮಾಡಿ ಅನ್ಯಾಯವಾಗಿರುತ್ತದೆ. ಆದ್ದರಿಂದ ನಮಗೆ ನ್ಯಾಯ ದೊರೆಯುವವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರು(1-5) ಆದೇಶದಂತೆ 1 ರಿಂದ 5 ನೇ ತರಗತಿಗಳ ವಿಷಯಗಳನ್ನು ಮಾತ್ರ ಬೋಧಿಸುತ್ತಿದ್ದೇವೆ. 2019 ರ ಜುಲೈ 1 ರಿಂದ 6 ರಿಂದ 8ನೇ ತರಗತಿ ಬೋಧನಾ ಕಾರ್ಯ ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.
ತರಬೇತಿ ಬಹಿಷ್ಕರಿಸಲು ನಿರ್ಧಾರ: ಇನ್ನು ಮುಂದೆ ಇಲಾಖೆ ಆಯೋಜಿಸುವ 6 ರಿಂದ 8 ನೇ ತರಗತಿಗಳಿಗೆ ಸಂಬಂಧಿಸಿದ ಎಲ್ಲಾ ತರಬೇತಿಗಳನ್ನು ನಾವೂ ಸಂಪೂರ್ಣವಾಗಿ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಸ್.ಬಿ.ಫಾಲಾಕ್ಷ, ಪ್ರಧಾನ ಕಾರ್ಯದರ್ಶಿ ಶಶಿಧರ್, ಕೋಶಾಧ್ಯಕ್ಷ ರವಿನಾಯ್ಕ, ನಿರ್ದೇಶಕರಾದ ಗಂಗಾಧರ್ ಶಂಕರಪ್ಪ. ಜಯಣ್ಣ. ಈರಯ್ಯ, ಮೋಹನ್‌ಕುಮಾರ್, ಮಾರುತಿ, ಸುಧಾ, ಆನಂದ್ ಮೊದ ಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.