ಹಾವೇರಿ: ಕ್ವಾರಂಟೈನ್ ನಲ್ಲಿದ್ದ ಯುವತಿಗೆ ಕೋವಿಡ್ ಸೋಂಕು ದೃಢ
Team Udayavani, Jun 2, 2020, 6:11 PM IST
ಹಾವೇರಿ: ಜಿಲ್ಲೆಯಲ್ಲಿ ಕೋವಿಡ್-19 ಹಾವಳಿ ಮುಂದುವರಿದಿದ್ದು ಮುಂಬಯಿಯಿಂದ ಜಿಲ್ಲೆಗೆ ಬಂದು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಯುವತಿಗೆ ಮಂಗಳವಾರ ಸೋಂಕು ದೃಢಪಟ್ಟಿದೆ.
24 ವರ್ಷದ ಈ ಯುವತಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದಾಳೆ. ಈಕೆ ಜಿಲ್ಲೆಯ 16ನೇ ಸೋಂಕಿತಳಾಗಿದ್ದು ಇವಳನ್ನು ಪಿ-3730 ಎಂದು ಗುರುತಿಸಲಾಗಿದೆ. ಜೂನ್ ಒಂದರಂದು ಸೋಂಕು ದೃಢಪಟ್ಟ ಪಿ-3271 ವ್ಯಕ್ತಿಯ ಮಗಳಾಗಿದ್ದಾಳೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
ಮೂಲತಃ ಶಿಗ್ಗಾಂವಿ ಪಟ್ಟಣದ ನಿವಾಸಿಯಾದ ಯುವತಿ ಮುಂಬೈನಿಂದ ತಂದೆ-ತಾಯಿಯೊಂದಿಗೆ ಜಿಲ್ಲೆಗೆ ಆಗಮಿಸಿದ್ದಳು. ಮೇ 31ರಂದು ಯುವತಿಯ ತಂದೆಗೆ ಸೋಂಕು ದೃಢಪಟ್ಟಿತ್ತು.
ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು ಇವರಲ್ಲಿ ಆರು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 10 ಜನರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.