ಕ್ವಾರಂಟೈನ್ ಕೇಂದ್ರ, ಸರ್ಕಾರಿ ಆಸ್ಪತ್ರೆಗೆ ಗೋಪಾಲಯ್ಯ ಭೇಟಿ
Team Udayavani, Jun 10, 2020, 6:43 AM IST
ಚನ್ನರಾಯಪಟ್ಟಣ: ತಾಲೂಕು ಕ್ರೀಡಾಂಗಣದ ಸಮೀಪದ ವಸತಿ ನಿಲಯದಲ್ಲಿ ಜಿಲ್ಲಾಡಳಿತದಿಂದ ತೆರೆಯಲಾಗಿರುವ ಕ್ವಾರಂಟೈನ್ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಮಂತ್ರಿ ಕೆ.ಗೋಪಾಲಯ್ಯ ಮಂಗಳವಾರ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಣೆ ಮಾಡಿದರು. ಲಾಕ್ಡೌನ್ ಸಡಿಲ ವಾಗಿದೆ ಎಂದು ಹೊರ ರಾಜ್ಯದಿಂದ ಬಂದವರ ಕ್ವಾರಂಟೈನ್ ಮಾಡು ವುದು ನಿಲ್ಲಬಾರದು.
ಅವರಿಗೆ ಗುಣಮಟ್ಟದ ಆಹಾರ ನೀಡಬೇಕು ಎಂದರು. ಜಿಲ್ಲಾಧಿಕಾರಿ ಗಿರೀಶ್ ಮಾತನಾಡಿ, ಕ್ವಾರಂಟೈನ್ ಮುಗಿಸಿದವರು ಅವರ ಊರುಗಳಿಗೆ ತೆರಳಲು ಕೆಎಸ್ಆರ್ ಟಿಸಿಯಿಂದ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗಿದೆ. ಎರಡು ಮೊಬೈಲ್ ಆ್ಯಂಬುಲೆನ್ಸ್ ಮಾಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದರು. ಶಾಸಕ ಸಿ.ಎನ್.ಬಾಲಕೃಷ್ಣ ಮಾತ ನಾಡಿ, ಹಿರೀಸಾವೆಗೆ ಆ್ಯಂಬುಲೆನ್ಸ್ ಅಗತ್ಯ ವಿದೆ,
ತಾಲೂಕಿನ ಎರಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯರ ಸಮಸ್ಯೆ ಇದೆ, ಚಾಮಡಿಹಳ್ಳಿ ಗೇಟ್ನಲ್ಲಿ ಆಯುರ್ವೇದ ಆಸ್ಪತ್ರೆ ಇದೆ. ಇಲ್ಲಿಗೆ ಹೆಚ್ಚು ಮಂದಿ ತೆರಳಲು ಸಾಧ್ಯವಾಗುತ್ತಿಲ್ಲ. ಪಟ್ಟಣಕ್ಕೆ ಆಯುರ್ವೇದ ಆಸ್ಪತ್ರೆ ನೀಡಬೇಕು ಎಂದು ಮನವಿ ಮಾಡಿದರು. ಪೊಲೀಸರು ಸಂಚಾರ ಮಾಡುವ ವಾಹನಗಳು ಹಳೆಯದಾಗಿವೆ ಅವು ಗಳನ್ನು ಬದಲಾಯಿಸಬೇಕು ಎಂದು ಹೇಳಿದರು.
ಸಚಿವ ಗೋಪಾಲಯ್ಯ ಮಾತ ನಾಡಿ ಶಾಸಕರೇ ನಿಮ್ಮ ಸರ್ಕಾರ ಇದ್ದಾಗ ಏಕೆ ಪೊಲೀಸ್ ಇಲಾಖೆಗೆ ವಾಹನ ನೀಡಲಿಲ್ಲ ಎಂದು ಪ್ರಶ್ನಿಸಿದರು. ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದರು. ಡಯಾಲಿಸಿಸ್ ಕೇಂದ್ರ, ತೀವ್ರನಿಗಾಘಟಕವನ್ನು ಸಚಿವರು ಪರಿಶೀಲಿಸಿದರು. ಜಿಪಂ ಸಿಇಒ ಪರಮೇಶ್, ಎಸಿ ನವೀನ್ಭಟ್, ತಹಶೀಲ್ದಾರ್ ಜೆ.ಬಿ. ಮಾರುತಿ, ಡಿಎಚ್ಒ ಸತೀಶ್, ಡಾ. ಮಹೇಶ, ಮುಖಂಡ ಅಣತಿ ಆನಂದ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.