Government jeep: ಭೂ ಪರಿಹಾರ ಬಾಕಿ ನೀಡಿದ್ದಕ್ಕೆ ಸರ್ಕಾರಿ ಜೀಪು ಜಪ್ತಿ
Team Udayavani, Oct 28, 2023, 5:24 PM IST
ಹಾಸನ: ಯಗಚಿ ಜಲಾಶಯ ಯೋಜನೆಯ ನಾಲೆ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಂಡ ಭೂಮಿಗೆ ಭೂ ಮಾಲಿಕರಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸೇರಿದ ಕಾರೊಂದನ್ನು ಕೋರ್ಟ್ ಆದೇಶದಂತೆ ಜಪ್ತಿ ಮಾಡಲಾಯಿತು.
ಹಾಸನ ತಾಲೂಕು, ಕಟ್ಟಾಯ ಹೋಬಳಿ ದೋರನಹೊಸಳ್ಳಿ ಗ್ರಾಮದ ಕೆ.ಎಸ್.ಯೋಗೇಶ್ ಎಂಬುವರಿಗೆ ಸೇರಿದ ಸರ್ವೆ ನಂಬರ್ 1/10, 1/09/ 32/13 ನಲ್ಲಿ 13 ಗುಂಟೆ ಜಮೀನನ್ನು 2006 ರಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದರೆ, ಅದಕ್ಕೆ ಸೂಕ್ತ ಪರಿಹಾರ ನೀಡಿರಲಿಲ್ಲವಾದ್ದರಿಂದ ಭೂ ಮಾಲಿಕರು ಕಾನೂನು ಹೋರಾಟ ಆರಂಭಿಸಿದ್ದರು. 2010 ಪರಿಹಾರ ಘೋಷಣೆ ಮಾಡಿದ ಮೊತ್ತವನ್ನು ಒಪ್ಪದೆ ಹೆಚ್ಚಿನ ಪರಿಹಾರ ಕೊಡಿಸಬೇಕು ಎಂದು ಯೋಗೇಶ್ ಹಾಸನದ ಕೋರ್ಟ್ ಮೊರೆ ಹೋಗಿದ್ದರು. ಒಂದು ಗುಂಟೆಗೆ ಒಂದು ಲಕ್ಷ ರೂ. ಪರಿಹಾರ ಕೊಡಬೇಕು ಎಂದು 2015ರಲ್ಲಿ ಆದೇಶ ಆಗಿತ್ತು. ಆದರೆ, ಈವರೆಗೂ ಸಂಬಂಧಪಟ್ಟವರು ಪರಿಹಾರ ನೀಡಿರಲಿಲ್ಲ.
ಮತ್ತೂಮ್ಮೆ ಕೋರ್ಟ್‌ಗೆ ಹೋದ ಮಾಲಿಕ: ವಸೂಲಿಗೆ ಹಾಕಿದರೂ, ವಿಶೇಷ ಭೂ ಸ್ವಾಧೀನ ಅಧಿಕಾರಿ ಹಣ ಕಟ್ಟಲಿಲ್ಲ. ಇದನ್ನು ಮತ್ತೂಮ್ಮೆ ಕೋರ್ಟ್‌ಗೆ ಮನವರಿಕೆ ಮಾಡಿದಾಗ, ಕಚೇರಿ ಜಪ್ತಿಗೆ ಕೋರ್ಟ್ ಆದೇಶ ಮಾಡಿತ್ತು. ಅದರಂತೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಿಲ್ಲಾಡಳಿತಕ್ಕೆ ಸೇರಿದ ಕೆಎ-54-ಜಿ-0024 ಜೀಪನ್ನು ವಕೀಲರ ಸಮ್ಮುಖದಲ್ಲಿ ಕೋರ್ಟ್ ಸಿಬ್ಬಂದಿ ಶುಕ್ರವಾರ ಜಪ್ತಿ ಮಾಡಿದರು. ಜಪ್ತಿ ಮಾಡಿದ ಕಾರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.
ಬಡ್ಡಿ ಸಮೇತ ಪರಿಹಾರ ನೀಡಿ: ನ್ಯಾಯಾಲಯವು ಒಂದು ಎಕರೆಗೆ ಒಂದು ಲಕ್ಷ ರೂ. ಪರಿಹಾರ ಕೊಡಬೇಕು ಎಂದು 2015 ರಲ್ಲಿ ತೀರ್ಪು ನೀಡಿತ್ತು. ಆದರೆ, ಈಗ ಬಡ್ಡಿ ಸೇರಿ ಜಿಲ್ಲಾಡಳಿತ 40 ಲಕ್ಷ ರೂ. ಅನ್ನು ಭೂ ಮಾಲಿಕರಿಗೆ ಪಾವತಿ ಮಾಡಬೇಕಿದೆ ಎಂದು ಭೂಮಿಯ ಮಾಲಿಕ ಯೋಗೇಶ್ ಪರ ವಕೀಲ ಮಾವಿನಕೆರೆ ಮಂಜುನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.