ಪಾಳು ಬಿದ್ದ ಭವನದಲ್ಲೇ ಸರ್ಕಾರಿ ಶಾಲೆ
ಶಾಲಾ ಕೊಠಡಿ ಕುಸಿದರೂ ಭೇಟಿ ನೀಡಿದ ಬಿಇಒ • ರಾಸು ಕಟ್ಟುವ ಕೊಟ್ಟಿಗೆಯಲ್ಲಿ 3 ವರ್ಷದಿಂದ ಪಾಠ
Team Udayavani, Aug 17, 2019, 12:17 PM IST
ಚನ್ನರಾಯಪಟ್ಟಣ ತಾಲೂಕು ಮರುವನಹಳ್ಳಿ ಗ್ರಾಮದಲ್ಲಿ ಪಾಳು ಬಿದ್ದ ಸಮುದಾಯ ಭವನದಲ್ಲಿ ಸರ್ಕಾರಿ ಶಾಲೆ ನಡೆಯುತ್ತಿರುವುದು.
ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ಮರುವನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಶಾಲೆಗೆ ಕೊಠಡಿ ಕೊರತೆಯಿಂದ ಸುಮಾರು 3 ವರ್ಷದಿಂದ ಪಾಳುಬಿದ್ದ ಸಮುದಾಯ ಭವನದಲ್ಲೇ ಶಾಲೆ ನಡೆಯುತ್ತಿದ್ದು ತಾಲೂಕು ಆಡಳಿತ ಮಾತ್ರ ಕಣ್ಣು ಮುಚ್ಚಿ ಕೂತಿದೆ.
ಮರುವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 52 ಮಂದಿ ವಿದ್ಯಾರ್ಥಿಗಳಿದ್ದಾರೆ. ಬಾಗೂರು ಹೋಬಳಿಯಲ್ಲಿ ಅತಿ ಹೆಚ್ಚು ಮಕ್ಕಳು ದಾಖಲಾತಿ ಪಡೆದಿರುವ ಹೆಗ್ಗಳಿಕೆಗೂ ಪಾತ್ರವಾಗಿದೆ. ಇನ್ನು ಗ್ರಾಮದ ಜನತೆ ಖಾಸಗಿ ಶಾಲೆಯಿಂದ ಮಕ್ಕಳನ್ನು ಬಿಡಿಸಿ ತಮ್ಮೂರಿನ ಸರ್ಕಾರಿ ಶಾಲೆಗೆ ದಾಖಲು ಮಾಡಿದ್ದಾರೆ. ಮರುವನಹಳ್ಳಿ ಗ್ರಾಮವಲ್ಲದೆ, ಕುರುವಂತ, ಬ್ಯಾಲದಕೆರೆ, ಚಿಕ್ಕನಾಯಕನಹಳ್ಳಿ, ಕೃಷ್ಣಾಪುರ ಗ್ರಾಮದ ಮಕ್ಕಳೂ ಈ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
ಸಹಕಾರ ನೀಡುತ್ತಿದ್ದೇವೆ: ಶಾಲೆ ಮುಖ್ಯ ಶಿಕ್ಷಕಿ ಹಾಗೂ ಗ್ರಾಮಸ್ಥರು ಈವರೆಗೆ ಎಂಟು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಪತ್ರ ಬರೆದಿದ್ದಾರೆ. ಬಿಇಒ ಮಾತ್ರ ಒಮ್ಮೆಯೂ ಶಾಲೆಗೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ದೂರುತ್ತಾರೆ. ನಮ್ಮೂರ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲು ಮಾಡುವ ಬದಲಾಗಿ ಸರ್ಕಾರಿ ಶಾಲೆಗೆ ದಾಖಲಿಸಿ ಅಗತ್ಯ ಸಹಕಾರ ನೀಡುತ್ತಿದ್ದೇವೆಂದು ಗ್ರಾಮಸ್ಥರು ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ. ಗ್ರಾಮದ ಪ್ರತಿ ಮನೆಯವರು ಕೈಲಾದಷ್ಟು ಸಹಾಯ ಮಾಡಿ ಎರಡು ಶೌಚಗೃಹವನ್ನು ನಿರ್ಮಾಣ ಮಾಡಿಕೊಟ್ಟಿದ್ದಾರೆ. ಇದಲ್ಲದೆ ಗುಣಮಟ್ಟದ ಗ್ರಾನೈಟ್ ಬಳಕೆ ಮಾಡಿ ಧ್ವಜದ ಕಂಬ ನಿರ್ಮಿಸಿದ್ದಾರೆ. ಇನ್ನು ಶಾಲೆಗೆ ಅಗತ್ಯ ಇರುವ ಜೆರಾಕ್ಸ್ ಯಂತ್ರ, ಗಣಕಯಂತ್ರ ಹಾಗೂ ಕಲ್ಲರ್ ಪ್ರಿಂಟಿಂಗ್ ತೆಗೆಯಲು ಪ್ರಿಂಟರ್ ಸೇರಿದಂತೆ ಶಿಕ್ಷಣಕ್ಕೆ ಅಗತ್ಯ ಇರುವ ವಸ್ತುಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಯನ್ನು ಮೇಲೆತ್ತಲು ಶ್ರಮಿಸುತ್ತಿದ್ದಾರೆ.
ಶಾಲಾ ಒತ್ತುವರಿ ತೆರವು: ಉತ್ತಮವಾಗಿ ಇರುವ ಎರಡು ಕೊಠಡಿಗೆ ಪ್ರತಿ ವರ್ಷ ಗ್ರಾಮಸ್ಥರು ಸುಣ್ಣ ಬಣ್ಣ ಬಳಿಯುತ್ತಾರೆ. ವಿದ್ಯಾರ್ಥಿಗಳ ಕ್ರೀಡೆಗೆ ಅಗತ್ಯ ಇರುವ ಸಾಮಗ್ರಿಯನ್ನು ಗ್ರಾಮಸ್ಥರೇ ದಾನ ಮಾಡಿದ್ದಾರೆ.
ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಹಾಗೂ ಇತರ ವಸ್ತು ನೀಡಿದ್ದಾರೆ. ಶಾಲೆಗೆ ಸೇರಿದ್ದ ಎರಡು ಎಕರೆ ಭೂಮಿ ಒತ್ತುವರಿಯಾಗಿತ್ತು. ಈಗ ಅದನ್ನು ಬಿಡಿಸಿ ಶಾಲೆ ಹೆಸರಿಗೆ ಖಾತೆ ಮಾಡಿಸಿದ್ದಾರೆ. ಶಾಲಾ ಆವಣದಲ್ಲಿ ಸಸಿ ನಾಟಿ ಮಾಡಿ ಉತ್ತಮ ಪರಿಸರವನ್ನೂ ಗ್ರಾಮಸ್ಥರು ಕಲ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.