ಬೇಡಿಕೆ ಈಡೇರಿಕೆಗೆ ಗ್ರಾಪಂ ನೌಕರರ ಪ್ರತಿಭಟನೆ


Team Udayavani, Dec 28, 2017, 3:27 PM IST

has-1.jpg

ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸ ಬೇಕೆಂದು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಪಂಚಾಯ್ತಿಯ ಉಪಕಾರ್ಯದರ್ಶಿ ಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿದರು.

ನಗರದ ಟೌನ್‌ಹಾಲ್‌ ವೃತ್ತದಲ್ಲಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಗ್ರಾಮಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫ‌ಲವಾಗಿದೆ ಎಂದು ಆರೋಪಿಸಿ ಘೋಷಣೆ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿ ನಂತರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದರು.

ಹುಸಿಯಾದ ಭರವಸೆ: ಈ ವೇಳೆ ಪ್ರತಿಭಟನಾ ಕಾರರನ್ನು ಕುರಿತು ಮಾತನಾಡಿದ ಗ್ರಾಮ ಪಂಚಾಯ್ತಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್‌.ಡಿ. ನಾಗೇಶ್‌ ಗ್ರಾಮೀಣ ಪ್ರದೇಶಗಳಲ್ಲಿ ಹಗಲು ರಾತ್ರಿ ಎನ್ನದೆ ಕೆಲಸಮಾಡುವ ಗ್ರಾಮಪಂಚಾಯ್ತಿ ನೌಕರರಿಗೆ ತಿಂಗಳಿಗೆ ಸರಿಯಾಗಿ ವೇತನ ಸಿಗದೆ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದ್ದು ನೌಕರರ ಸತತ ಹೋರಾಟದ ಫ‌ಲವಾಗಿ ಸರ್ಕಾರ ಇಎಫ್ಎಂಎಸ್‌ ಮೂಲಕ ನೌಕರರಿಗೆ ವೇತನ ಪಾವತಿಸುವುದಾಗಿ ತಿಳಿಸಿದ್ದರು ಇದುವರೆಗೂ ಅದು ಜಾರಿಯಾಗದೆ ಇದ್ದು ಈ ಕೂಡಲೇ ಸರ್ಕಾರ ತನ್ನ ಮಾತಿನಂತೆ ನೌಕರರಿಗೆ ಇಎಫ್ಎಂಎಸ್‌ ಮೂಲಕ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು. 

ಗ್ರಾಮ ಪಂಚಾಯ್ತಿಗಳಲ್ಲಿ ಕೆಲಸ ಮಾಡುತ್ತಿದ್ದರೂ ಸಹ ಕಾಲಕ್ಕೆ ಸರಿಯಾಗಿ ವೇತನಗಳು ಸಿಗದೆ ಸಂಕಷ್ಟದ ಬದುಕು ನಡೆಸುತ್ತಿದ್ದ ನೌಕರರಿಗೆ ನೌಕರರ ಹೋರಾಟದ ಫ‌ಲವಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆದು ನೇರವಾಗಿ ನೌಕರರ ಬ್ಯಾಂಕ್‌ ಖಾತೆಗೆ ಕನಿಷ್ಠ ವೇತನವನ್ನು ನೀಡುವುದಾಗಿ ಭರವಸೆ ನೀಡಿದ್ದರು. 

ಆದರೆ ಇದಕ್ಕೆ ಸಂಬಂಧಪಟ್ಟ ಗ್ರಾಪಂ ಸಿ 74ರ ಕಡತ ಹಣಕಾಸು ಇಲಾಖೆಯಿಂದ ಅನುಮೋದನೆ ಗೊಂಡಿಲ್ಲ ಹಾಗಾಗಿ ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯಿಂದ ಮಂಜೂರಾತಿ ನೀಡುವ ಮೂಲಕ ನೌಕರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಅನುಮೋದನೆ ನೀಡಿ: ಸಂಘದ ಜಿಲ್ಲಾಧ್ಯಕ್ಷ ಎನ್‌.ಕೆ. ಸುಬ್ರಮಣ್ಯ ಮಾತನಾಡಿ, ನೌಕರರ ಅನುಮೋದನೆಗೆ ಸಂಬಂಧಿಸಿದಂತೆ ಸಂಘವು ನಿರಂತರವಾದ ಹೋರಾಟವನ್ನು ನಡೆಸಿಕೊಂಡು ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು ಕಡತಗಳು ತಾಲೂಕು ಮತ್ತು ಜಿಲ್ಲಾಪಂಚಾಯ್ತಿಗಳಲ್ಲಿ ಬಾಕಿ ಇದ್ದು ನೌಕರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಪಂಚಾಯತ್‌ ಅನುಮೋದನೆ ನೀಡಲು ಮುಂದಾಗಬೇಕು ಎಂದು ಹೇಳಿದರು.

ಮನವಿ ಸ್ವೀಕರಿಸಿದ ಜಿಲ್ಲಾಪಂಚಾಯ್ತಿಯ ಅಭಿವೃದ್ಧಿ ಉಪಕಾರ್ಯದರ್ಶಿ ಕೃಷ್ಣಪ್ಪ ಮಾತನಾಡಿ, ನೌಕರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯ್ತಿ ಹಂತದಲ್ಲಿ ಇತ್ಯರ್ಥಪಡಿಸಬಹುದಾದ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿದರು ಇದಕ್ಕೆ ಸಂಬಂಧಿಸಿದಂತೆ ಒಂದುವಾರದಲ್ಲಿ ಎಲ್ಲಾ ಅಧಿಕಾರಿಗಳ ಸಭೆಯನ್ನು ಕರೆದು ಸಮಸ್ಯೆಗಳ ಇತ್ಯಾರ್ಥಕ್ಕೆ ಕ್ರಮವವಹಿಸುವಂತೆ ತಿಳಿಸುವುದಾಗಿ ತಿಳಿಸಿದರು. ಈ ವೇಳೆ ತುಮಕೂರು ತಾಲೂಕು ಅಧ್ಯಕ್ಷ ಪಂಚಾಕ್ಷರಿ ಮಾತನಾಡಿದರು.

ಜಿಲ್ಲಾಪಂಚಾಯ್ತಿ ಉಪಕಾರ್ಯದರ್ಶಿ ಎನ್‌.ಡಿ. ಪ್ರಕಾಶ್‌, ಯೋಜಾನಾದಿಕಾರಿ ಬಾಲ್‌ರಾಜ್‌, ತಿಪಟೂರು ರಾಜು, ಚಿಕ್ಕನಾಯಕನಹಳ್ಳಿ ಲೋಕೇಶ್‌, ಪಾವಗಡ ಸುಬ್ಬರಾಯಪ್ಪ, ಕುಣಿಗಲ್‌ ಶ್ರೀನಿವಾಸ್‌, ಗುಬ್ಬಿಯ ಬಷೀರ್‌ಅಹಮದ್‌, ತುರುವೇಕೆರೆ ನಟರಾಜು, ರಮೇಶ್‌, ಶಿರಾ ರಾಮಲಿಂಗಪ್ಪ, ಬಸವರಾಜು, ದಯಾನಂದ್‌, ರೇಖಾ, ಸೇರಿದಂತೆ ಮುಂತಾವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.