![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 5, 2020, 5:42 PM IST
ಹಾಸನ: ಜಿಲ್ಲೆಗೆ ಮಂಜೂರಾದ ಅಭಿವೃದ್ಧಿ ಯೋಜನೆಗಳಿಗೆ ಕಳೆದ 10 ತಿಂಗಳನಿಂದ ಅನುದಾನ ನೀಡದೇ ರಾಜ್ಯ ಸರ್ಕಾರದ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆಪಾದಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಂತ್ರಿಕ, ಆಡಳಿತಾತ್ಮಕ ಮಂಜೂರಾತಿ ಪಡೆದು ಟೆಂಡರ್ ಪ್ರಕ್ರಿಯೆ ಪೂರ್ಣ ಗೊಳಿಸಿ ಕಾರ್ಯಾದೇಶ ನೀಡಿದ ಯೋಜನೆಗಳೂ ಕಳೆದ 10 ತಿಂಗಳಿನಿಂದ ಹಾಸನ ಜಿಲ್ಲೆಯಲ್ಲಿ ಆರಂಭವಾಗಿಲ್ಲ. ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಮಂಜೂರು ಮಾಡಿದ ಯೋಜನೆಗಳ ಕಾಮಗಾರಿಗಳು ಇದುವರೆಗೂ ಆರಂಭವಾಗಿಲ್ಲ. ಮುಖ್ಯ ಮಂತ್ರಿಯವರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಲವು ಬಾರಿ ಪತ್ರ ಬರೆದರೂ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿ ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗಳು ನಡೆಯುತ್ತಿವೆ. ಆದರೆ ಜೆಡಿಎಸ್, ಕಾಂಗ್ರೆಸ್ ಶಾಸಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳುತ್ತಾರೆ. ಕೊರೊನಾ ಲಾಕ್‌ಡೌನ್ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರಿಗೆ ಮಾತ್ರ ಇದೆಯೇ ? ಎಂದು ಪ್ರಶ್ನಿಸಿದರು. ಶಿವಮೊಗ್ಗದ ವಿಮಾನ ನಿಲ್ದಾಣ ಕಾಮಗಾರಿಯನ್ನು 5 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡುತ್ತಾರೆ. ಆದರೆ ಹಾಸನ ವಿಮಾನ ನಿಲ್ದಾಣ ನಿರ್ಮಾಣದ ಟೆಂಡರ್ ಪ್ರಕ್ರಿಯೆ ನಡೆದು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡುವ ಹಂತದಲ್ಲಿದ್ದರೂ ಸರ್ಕಾರ ಸ್ಪಂದಿಸದೆ ಕಾಮಗಾರಿ ಆರಂಭವಾಗಿಲ್ಲ ಎಂದು ಆಪಾದಿಸಿದರು. ಲಾಕ್‌ಡೌನ್‌ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಒಬ್ಬನೇ ಗುತ್ತಿಗೆದಾರನಿಗೆ 1,200 ಕೋಟಿ ರೂ. ಬಿಲ್ ಇತ್ತೀಚೆಗೆ ಪಾವತಿಯಾಗಿದೆ. ಆದರೆ ಸಣ್ಣ ಗುತ್ತಿಗೆದಾರರು ಬಿಲ್ ಪಾವತಿಯಾಗದೇ ಪರದಾಡುತ್ತಿದ್ದರೂ ಆಬಗ್ಗೆ ಸರ್ಕಾರ ಗಮನ ಹರಿಸಿಲ್ಲ ಎಂದು ಆಪಾದಿಸಿದರು.
ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಿ: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಹೇಮಾವತಿ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆ
ಕರೆದು ಯಾವ್ಯಾವ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂಬುದನ್ನು ಶಾಸಕರೊಂದಿಗೆ ಚರ್ಚಿಸಲಿ ಎಂದು ಒತ್ತಾಯಿಸಿದರು.
ಬರಪೀಡಿತ ಪಟ್ಟಿಗೆ ಸೇರಿಸಿ: ಅರಸೀಕೆರೆ ತಾಲೂಕು ಮಾತ್ರ ಬರಪೀಡಿತ ಪಟ್ಟಿಗೆ ಸೇರಿದೆ. ಈ ವರ್ಷ ಈ ವರೆಗೂ ಮಳೆಯಾಗದ ಹಾಸನ, ಚನ್ನರಾಯಪಟ್ಟಣ, ಬೇಲೂರು ಮತ್ತು ಹೊಳೆನರಸೀಪುರ ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸಿ ಕುಡಿಯುವ ನೀರು ಪೂರೈಕೆಗೆ ಹಣ ಬಿಡುಗಡೆಗೆ ರೇವಣ್ಣ ಒತ್ತಾಯಿಸಿದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.