ಕೋವಿಡ್: ಹೆಚ್ಚಿನ ಜಾಗೃತಿ ಅತ್ಯಗತ್ಯ
Team Udayavani, May 12, 2021, 4:58 PM IST
ಸಕಲೇಶಪುರ: ತಾಲೂಕಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲುಯಾರಿಗಾದರು ಆಸಕ್ತಿ ಇದ್ದಲ್ಲಿ ಸರ್ಕಾರದ ಸಂಬಳ ಜೊತೆಗೆ ನಾನು ಪ್ರತಿತಿಂಗಳು ನನ್ನ ವೈಯುಕ್ತಿಕ ಹಣ ನೀಡುತ್ತೇನೆ ಎಂದು ಶಾಸಕ ಎಚ್.ಕೆಕುಮಾರಸ್ವಾಮಿ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿ,ಬೆಂಗಳೂರುಬಿಟ್ಟರೆ ಹಾಸನದಲ್ಲಿ ಹೆಚ್ಚು ಸೋಂಕು ದೃಢಪಡುತ್ತಿದ್ದು, ಸರ್ಕಾರಮಾರ್ಗಸೂಚಿ ಪಾಲಿಸಬೇಕಿದೆ. ಕೋವಿಡ್ ಕುರಿತು ಜನರಿಗೆ ಸರಿಯಾದ ಮಾಹಿತಿ ಇಲ್ಲ, ಸೋಂಕಿನ ಲಕ್ಷಣಗಳ ಕುರಿತು ಸಮಗ್ರ ಮಾಹಿತಿನೀಡಬೇಕು ಎಂದರು. ಕಳೆದ ಎರಡು ತಿಂಗಳಲ್ಲಿ ತಾಲೂಕಿನಲ್ಲಿ ಸುಮಾರು1980 ಕೊರೊನಾ ಟೆಸ್ಟ್ ಮಾಡಿದ್ದು, 1318 ಮಂದಿಗೆ ಪಾಸಿಟಿವ್‌ಬಂದಿದೆ.
630 ಜನ ಗುಣಮುಖರಾದರೆ 13 ಜನ ಸಾವನ್ನಪ್ಪಿದ್ದಾರೆ.ತಾಲೂಕಿನಲ್ಲಿ 45 ರಿಂದ 60 ವರ್ಷ ಮೇಲ್ಪಟ್ಟವರಿಗೆ ಸುಮಾರು 25000ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆಆರಂಭಿಸಲಾಗಿದೆ. ಕ್ರಾಫರ್ಡ್ ಆಸ್ಪತ್ರೆಯಲ್ಲಿ ಒಟ್ಟು 43 ಬೆಡ್ ಗಳನ್ನುಕೋವಿಡ್ ರೋಗಿಗಳಿಗೆ ಮೀಸಲಾಗಿದ್ದು 16 ರೋಗಿಗಳಿಗೆ ಆಕ್ಸಿಜನ್‌ನೀಡಲಾಗುತ್ತಿದ್ದು 21 ಜನ ರೋಗಿಗಳಿಗೆ ಮಾಮೂಲಿ ಬೆಡ್ ನೀಡಲಾಗಿದೆಎಂದು ಮಾಹಿತಿ ನೀಡಿದರು.
ತಾಲೂಕಿನಲ್ಲಿ ಕೆಲವು ಖಾಸಗಿ ಆ್ಯಂಬುಲೆನ್ಸ್‌ಚಾಲಕರು ಕೋವಿಡ್ ರೋಗಿಗಳಿಂದ ದುಬಾರಿ ದರ ವಸೂಲುಮಾಡುತ್ತಿರುವ ಕುರಿತು ಚರ್ಚೆ ನಡೆಯಿತು. ಉಪವಿಭಾಗಾಧಿಕಾರಿಗಿರೀಶ್ ನಂದನ್, ತಹಶೀಲ್ದಾರ್ ಜೈಕುಮಾರ್, ಇ.ಓ ಹರೀಶ್,ಡಿವೈಎಸ್‌ಪಿ ಗೋಪಿ, ಟಿಎಚ್‌ಒ ಮಹೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.