13 ರಿಂದ ಹರ್ ಘರ್ ಮೇ ತಿರಂಗಾ ಅಭಿಯಾನ
Team Udayavani, Aug 9, 2022, 4:01 PM IST
ಹಾಸನ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ಆ.13 ರಿಂದ 15 ರವರೆಗೆ ಮನೆ ಹಾಗೂ ಅಂಗಡಿ ಮುಂಗ್ಗಟ್ಟುಗಳ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಮೂಲಕ ಹರ್ ಘರ್ ಮೇ ತಿರಂಗಾ ಅಭಿಯಾನ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಸಬಾಂಗಣದಲ್ಲಿ ಸೋಮವಾರ ಹರ್‌ಘರ್ ಮೇ ತಿರಂಗಾ ಅಭಿಯನದ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ಮನೆ, ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಆಚರಿಸಬೇಕು ಎಂದು ಹೇಳಿದರು. ಕ್ವಿಟ್ ಇಂಡಿಯಾ ಚಳವಳಿ ನೆನಪಿಗಾಗಿ ಜಿಲ್ಲೆಯ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನಿಸಿ, ಗೌರವಿ ಸಬೇಕು ಎಂದು ಉವಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್‌ಗೆ ಸೂಚಿಸಿದರು.
ಜಿಪಂ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಬಾವುಟ ಸಿದ್ಧಪಡಿಸಿ ಹಂಚಿಕೆ ಮಾಡಲಾಗುತ್ತಿದೆ. ಸರ್ಕಾರದಿಂದ ಜಿಲ್ಲಾಡಳಿತಕ್ಕೆ ಒಂದು ಲಕ್ಷ ಬಾವುಟಗಳು ಪೂರೈಕೆಯಾಗಿವೆ. ಸ್ಥಳೀಯ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳ ಮೂಲಕ ಧ್ವಜ ಮಾರಾಟ ಮಾಡಲಾಗುವುದು. ಹರ್‌ಘರ್ ಮೇ ತಿರಂಗಾದ ಉದ್ದೇಶ ಹಾಗೂ 75ನೇ ಸ್ವಾತಂತ್ರ್ಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು ಡೀಸಿ ನಿರ್ದೇಶನ ನೀಡಿದರು. ನಗರ ಸಭೆ ಸಾರ್ವಜನಿಕರಿಗೆ ಬಾವುಟ ಖರೀದಿಸುವಂತೆ ಜಾಗೃತಿ ಮೂಡಿಸುವುದರ ಜೊತೆಗೆ ಬಾವುಟಗಳು ಎಲ್ಲಿ ಸಿಗುತ್ತವೆ ಎಂಬ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಉಪಭಾಗಾಧಿಕಾರಿ ಜಗದೀಶ್, ಜಿಪಂ ಮುಖ್ಯ ಯೋಜನಾಧಿಕಾರಿ ಪರಪ್ಪ ಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿನೋದ್‌ಚಂದ್ರ, ನಗರ ಸಭೆ ಆಯುಕ್ತ ಪರಮೇಶ್ವರಪ್ಪ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.