Hassan; ಮುಖಾಮುಖಿ ಢಿಕ್ಕಿಯಾದ ಟಿಪ್ಪರ್ ಮತ್ತು ಕಾರು: ನಾಲ್ವರು ಮೃತ್ಯು
Team Udayavani, Jul 21, 2023, 8:21 PM IST
ಹಾಸನ: ಟಿಪ್ಪರ್ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪಾಳ್ಯ ಸಮೀಪ ಈಶ್ವರಹಳ್ಳಿ ಕೂಡಿಗೆಯಲ್ಲಿ ಅಪಘಾತ ಸಂಭವಿಸಿದೆ. ಸಕಲೇಶಪುರ ಕಡೆಗೆ ಹೋಗುತ್ತಿದ್ದ ಇನೋವಾ ಕಾರಿಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆದಾರರಿಗೆ ಸೇರಿದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹಾಸನ ತಾಲೂಕಿನ ಕುಪ್ಪಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಎಂದು ತಿಳಿದು ಬಂದಿದೆ
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾಮಗಾರಿ ಮಂದಗತಿ ಸಾಗುತ್ತಿದ್ದು ಏಳೆಂಟು ವರ್ಷಗಳಿಂದ ನೂರಾರು ಅಮಾಯಕ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ ಅದರೂ ಎಚ್ಚೆತ್ತುಕೊಳ್ಳದ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ನಡೆಯುವ ಸ್ಥಳದಲ್ಲಿ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸದೇ ಇರುವುದು ಅಪಘಾತಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.