ಹಾಸನ: ಅಪ್ಪನ ಹಣ ಕದ್ದು ಪೊಲೀಸರ ಅತಿಥಿಯಾದ ಮಗ
Team Udayavani, Apr 30, 2022, 3:25 PM IST
ಹಾಸನ: ಅಪ್ಪನ ಮನೆಯಲ್ಲಿ ಮಗನೆ ಕಳ್ಳತನ ಮಾಡಿ ಪೊಲೀಸ್ ಬಲೆಗೆ ಸಿಕ್ಕಿಬಿದ್ದು ಆರೋಪಿಯಿಂದ 13,20 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ತಿಳಿಸಿದರು.
ನಗರದ ಜಿಲ್ಲಾ ಎಸ್ಪಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಸನದ ಗ್ರಾಮಾಂತರ ಪೊಲೀಸ್ ಕಾರ್ಯಚರಣೆಯಲ್ಲಿ ಮನೆಯ ಬೀಗ ಮುರಿದು ನಗದು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ತನಿಖೆ ಮಾಡಿ ದಾಗ ಆತನಿಂದ ಕಳವು ಆಗಿದ್ದ 13,20 ಲಕ್ಷ ನಗದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಏ.22ರಂದು ಹಾಸನ ತಾಲೂಕು, ದೊಡ್ಡಾಲದಹಳ್ಳಿ ಗ್ರಾಮದ ಡಿ.ಕೆ. ರಂಗಸ್ವಾಮಿ ಅವರ 14 ಗುಂಟೆ ಜಮೀನು ಯಗಚಿ ನೀರಾವರಿ ಯೋಜನೆಯ ನಾಲೆ ನಿರ್ಮಾಕ್ಕೆ ಸ್ವಾಧೀನವಾಗಿತ್ತು. ಭೂ ಸ್ವಾಧೀನದ ಪರಿಹಾರದ ಮೊತ್ರ 13,20 ಲಕ್ಷ ರೂ.ಗಳನ್ನು ಕೌಶಿಕ ಗ್ರಾಮದ ಕರ್ನಾಟಕ ಬ್ಯಾಂಕಿನಿಂದ ಡ್ರಾ ಮಾಡಿಕೊಂಡು ಮನೆಯ ಬೀರುವನಲ್ಲಿಟ್ಟಿದ್ದರು. ಕಳೆದ ಶುಕ್ರವಾರ ಮಧ್ಯಾಹ್ನ ರಂಗಸ್ವಾಮಿ ಅವರು ಮನೆಗೆ ಬೀಗ ಹಾಕಿಕೊಂಡು ದನಗಳನ್ನು ಮೇಯಿಸಲು ಗ್ರಾಮದ ಕೆರೆಯ ಹತ್ತಿರ ಹೋಗಿ ಸಂಜೆ ವಾಪಸ್ ಮನೆಗೆ ಬರುವ ವೇಳೆಗೆ ಮನೆಯ ಬೀಗ ಮುರಿದು ಒಳನುಗ್ಗಿ 13.20 ಲಕ್ಷ ರೂ.ಗಳನ್ನು ಕಳವು ಮಾಡ ಲಾಗಿತ್ತು. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀ ಸರು ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸುತ್ತಿದ್ದರು.
ಪೊಲೀಸರ ಆತಿಥ್ಯಕ್ಕೆ ಸತ್ಯ ಕಕ್ಕಿದ: ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ಹಾಸನ ಗ್ರಾಮಾಂತರ ಠಾಣೆ ಇನ್‌ಸ್ಟೆಕ್ಟರ್ ಅರೋಕಿಯಪ್ಪ ಅವರ ನೇತೃತ್ವದಲ್ಲಿ ನೇಮಕವಾಗಿದ್ದ ವಿಶೇಷ ಪೊಲೀಸ್ ತಂಡವು ಮಾಹಿತಿ ಆಧರಿಸಿ ಹಾಸನದ ರಾಜಘಟ್ಟ ಬಡಾವಣೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಅವರ ಮಗ ರಂಗನಾಥ (38) ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಅಪ್ಪ ಮನೆಯಲ್ಲಿ ಹಣ ಇಟ್ಟಿದ್ದ ಮಾಹಿತಿ ಪಡೆದು ಕಳವು ಮಾಡಿರುವುದಾಗಿ ರಂಗನಾಥ ಒಪ್ಪಿಕೊಂಡಿದ್ದಾನೆ. ಕಳವು ಮಾಡಿದ್ದ ಮೊತ್ತವನ್ನು ಆರೋಪಿ ರಂಗನಾಥನಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹಣ ಪಾಲಾಗುವುದೆಂದು ಕಳವು: ರಂಗಸ್ವಾಮಿ ಅವರಿಗೆ ಮೂವರು ಮಕ್ಕಳಿದ್ದು, ಭೂ ಪರಿಹಾರದ ಮೊತ್ತವನ್ನು ಮೂವರು ಮಕ್ಕಳಿಗೂ ಹಂಚಬಹುದು ಎಂದು ಭಾವಿಸಿ ಮೊದಲ ಮಗ ರಂಗನಾಥನ ಕಳವು ಮಾಡಿದ್ದ. ಆರೋಪಿ ರಂಗನಾಥ 12 ವರ್ಷಗಳ ಹಿಂದೆ ವಿವಾಹವಾಗಿದ್ದು, ಹಾಸನದ ರಾಜಘಟ್ಟದಲ್ಲಿ ವಾಸವಾಗಿದ್ದ. ತನ್ನ ಸಹೋದರರಿಗೆ ಪಾಲು ಕೊಡಬಹುದು ಎಂದು ಮನೆಯಲ್ಲಿಟ್ಟಿದ್ದ ಹಣ ರಂಗನಾಥ ಕಳವು ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ ಎಂದು ಎಸ್ಪಿ ಶ್ರೀನಿವಾಸಗೌಡ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.