ಹಾಸನ: 4 ಪ್ರತ್ಯೇಕ ರಸ್ತೆ ಅಪಘಾತ: ನಾಲ್ವರ ಸಾವು
Team Udayavani, Jan 1, 2023, 11:27 PM IST
ಹಾಸನ: ಜಿಲ್ಲೆಯ ವಿವಿಧೆಡೆ ಸಂಭವಿಸಿದ 4 ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಚನ್ನರಾಯಪಟ್ಟಣದ ವಿವೇಕನಗರ ವಾಸಿ ಮೂಲತಃ ತುಮಕೂರು ಜಿಲ್ಲೆ, ತುರುವೇಕೆರೆಯ ದಬ್ಬೆಘಟ್ಟ ಹೋಬಳಿಯ ತಂಡಗ ಗ್ರಾಮದ ಶಿಕ್ಷಕ ಟಿ.ಎನ್.ಮೋಹನ್‌ಕುಮಾರ್ (39) ಎಂಬವರ ಬೈಕ್‌ಗೆ ಚನ್ನರಾಯ ಪಟ್ಟಣದ ಹೌಸಿಂಗ್ ಬೋರ್ಡ್ ಸಮೀಪ ಲಾರಿ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕುಮಾರ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಮನಗರದ ಕನಕಪುರ ತಾಲೂಕು, ದೊಮ್ಮರದೊಡ್ಡಿ ಬೀದಿ ವಾಸಿ ಜಯಣ್ಣ (40)ಎಂಬವರ ದ್ವಿಚಕ್ರ ವಾಹನವು ಶ್ರವಣಬೆಳಗೊಳ ಹೋಬಳಿ ಹೊಸಳ್ಳಿ ಗ್ರಾಮದ ಸಮೀಪ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸವಾರ ಸಾವನ್ನಪ್ಪಿ, ಮತ್ತೊಬ್ಬ ಗಾಯಗೊಂಡಿದ್ದಾರೆ.
ಆಲೂರು ಪಟ್ಟಣದ ಅಂಬೇಡ್ಕರ್ ನಗರದ ವಾಸಿ ಬ್ಯಾಂಕ್ ನೌಕರ, ಮೂಲತಃ ಪಾಳ್ಯ ಹೋಬಳಿ, ಮಡಬಲು ಗ್ರಾಮ ಸೋಮೇಶ್ (52)ಎಂಬವರ ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಅವರು ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದರು.
ಅರಕಲಗೂಡು ತಾಲೂಕು, ರಾಮನಾಥಪುರ ಹೋಬಳಿ ಬಸವಾಪಟ್ಟಣ ಗ್ರಾಮದ ಅರ್ಜುನ್ (30 )ಎಂಬವರ ಬೈಕ್ ನಾಯಿ ಅಡ್ಡ ಬಂದ ಪರಿಣಾಮ ಪಲ್ಟಿಯಾಗಿ ಅವರು ಮೃತಪಟ್ಟ ಘಟನೆ ಬೆಳವಾಡಿ ಗ್ರಾಮದಲ್ಲಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.