![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 6, 2021, 3:04 PM IST
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಸೆಯಂತೆ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡುವ ಮೂಲಕ ದಶಕದ ವಿಘ್ನವನ್ನು ನಿವಾರಿಸಿದ್ದಾರೆ ಎಂದು ಶಾಸಕ ಪ್ರೀತಂಜೆ. ಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹಾಸನದ ಬುವನ ಹಳ್ಳಿ ಬಳಿಯಲ್ಲಿ ಈಗಾಗಲೇ ಸ್ಥಳ ಕಾದಿರಿಸಲಾಗಿದೆ. ಹಲವು ವರ್ಷಗಳಿಂದ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗದೇ ಮಾಜಿ ಪ್ರಧಾನಿ ದೇವೇಗೌಡರ ಕನಸು ಕನಸಾಗಿಯೇ ಉಳಿದಿತ್ತು. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಕಾಮಗಾರಿ ಮಾಡುವಂತೆ ಮನವಿ ಮಾಡಿದಾಗ ಹಲವು ಮಂದಿ ಇದನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು ಎಂದು ಹೇಳಿದರು.
ಹಿಂದೆ ಭರವಸೆ ನೀಡಿದ್ದೆ: ಮಾಜಿಪ್ರಧಾನಿ ದೇವೇಗೌಡರ ಆಸೆ ಈಡೇರಿಸುತ್ತೇನೆ ಎಂದು ಹಿಂದೆಯೇ ಹೇಳಿದ್ದೆ. ಅದರಂತೆ ಜ.25ರಂದು ಮುಖ್ಯ ಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಸಿದ್ದ ಮನವಿಗೆ ಪೂರಕವಾಗಿ ಮತ್ತು ನಿರಂತರ ಪ್ರಯತ್ನದಿಂದ ಶುಕ್ರವಾರ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚೆಗೆ ಬಂದಿತ್ತು ಎಂದು ಹೇಳಿದರು.
ಬೇರೆ ಅರ್ಥ ಕೊಡುವುದು ಬೇಡ: ಅಧಿವೇಶನದಲ್ಲೇ ಕೂಡಲೇ ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.ನಾನು ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಜಿಲ್ಲೆಯ ಹಿರಿಯ ರಾಜಕಾರಣಿಯೊಬ್ಬರು ಶಂಕುಸ್ಥಾಪನೆ ಮಾಡಿದ ಕಾಮಗಾರಿ ನಿಲ್ಲಬಾರದು ಎಂಬ ಉದ್ದೇಶ ನನ್ನಾಗಿದೆ. ಇದಕ್ಕೆ ಬೇರೆ ಅರ್ಥ ಕೊಡುವುದು ಬೇಡ ಎಂದು ಮನವಿ ಮಾಡಿದರು.
ಇದನ್ನೂ ಓದಿ :ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವರಾದ ನಾವು ‘ತಾಂಟಲು’ ಸಿದ್ದ: ಪ್ರತಿಭಾ ಕುಳಾಯಿ
ಉದ್ಯೋಗ ಅವಕಾಶ ಸಿಗಲಿದೆ: ಕಳೆದ 40 ವರ್ಷದಿಂದ ಪೂರ್ಣಗೊಳ್ಳದ ಹೊರವರ್ತುಲ ರಸ್ತೆ, ಒಳಚರಂಡಿ ಸೇರಿ ಈಗ ವಿಮಾನ ನಿಲ್ದಾಣ ಕಾಮಗಾರಿಯನ್ನು ಬಿಜೆಪಿ ಸರಕಾರ ಬಂದ ಒಂದೂವರೆ ವರ್ಷದಲ್ಲೇ ಆರಂಭಿಸಿದ್ದಕ್ಕೆ ಜನಸಾಮಾನ್ಯರಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಹಿಂದಿನ ಸರ್ಕಾರ ಇದನ್ನು ಮಾಡಬೇಕಿತ್ತು ಅವರು ಮಾಡಲಿಲ್ಲ, ಹಾಗೆಂದು ನಾವು ಸುಮ್ಮನೆ ಕೂರುವುದಿಲ್ಲ, ವಿಮಾನ ನಿಲ್ದಾಣ ಪ್ರಾರಂಭವಾದರೆ, ಜಿಲ್ಲೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಹೆಸರು ಬರುವುದರೊಂದಿಗೆ ಅನೇಕ ಕಾರ್ಖಾನೆಗಳು ಜಿಲ್ಲೆಯಲ್ಲಿ ಸ್ಥಾಪನೆ ಆಗಲಿವೆ. ಇದರಿಂದ ಯುವಕರಿಗೆ ಉದ್ಯೋಗ ಅವಕಾಶ ದೊರೆಯುತ್ತದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Namma Santhe: ಕಟಲ್ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್
Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್ ಸೇರಿ ಮತ್ತೆ ನಾಲ್ವರ ಬಂಧನ
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.