2023ಕ್ಕೆ ಹಾಸನ ವಿಮಾನ ನಿಲ್ದಾಣ ನಿರ್ಮಾಣ ಪೂರ್ಣ


Team Udayavani, Apr 2, 2022, 1:44 PM IST

2023ಕ್ಕೆ ಹಾಸನ ವಿಮಾನ ನಿಲ್ದಾಣ ನಿರ್ಮಾಣ ಪೂರ್ಣ

ಹಾಸನ: ನಗರದ ಹೊರ ವಲಯದ ಬೂವನಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು 2023 ಏಪ್ರಿಲ್‌ಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾಟ್ಯ ದರ್ಶಿ ಅನಿಲ್‌ ಕುಮಾರ್‌ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಕಾಮಗಾರಿ ಪ್ರಗತಿ ಹಾಗೂ ಕಾಮಗಾರಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ದರು. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಇರುವ ಅಡೆತಡೆಗಳನ್ನು ನಿವಾರಣೆ ಮಾಡಲಾಗುತ್ತಿದೆ ಎಂದರು.

193 ಕೋಟಿ ಅಂದಾಜು ಯೋಜನೆ: ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಟ್ಟು 193.65 ಕೋಟಿ ರೂ. ಅಂದಾಜು ಯೋಜನೆ ತಯಾರಿಸಲಾಗಿದೆ. ಇದರಲ್ಲಿ ರನ್‌ ವೇ, ಟರ್ಮಿನಲ್‌ ಬಿಲ್ಡಿಂಗ್‌, ಎಟಿಸಿ ಬಿಲ್ಡಿಂಗ್‌, ಕಾಂಪೌಂಡ್‌ವಾಲ್‌ ಮತ್ತು ಹೈಟೆನ್ಷನ್‌ ವಿದ್ಯುತ್‌ ಲೈನ್‌ ಸ್ಥಳಾಂತರ ಸೇರಿದೆ. ಈವರೆಗೆ 40 ಕೋಟಿ ಹಣ ಬಿಡು ಗಡೆಯಾಗಿದೆ. ಹೈಟೆಷನ್‌ ವಿದ್ಯುತ್‌ ಲೈನ್‌ ಸ್ಥಳಾಂತರಕ್ಕೆ ಕೆಪಿಟಿಸಿಎಲ್‌ಗೆ 19 ಕೋಟಿ ರೂ. ಜಮಾ ಮಾಡಲಾ ಗಿದ್ದು, ಸ್ಥಳಾಂತರ ಕೆಲಸವೂ ಶೀಘ್ರ ಆಗಲಿದೆ ಎಂದು ವಿವಿರ ನೀಡಿದರು.

ಕಾಮಗಾರಿ ವೇಗಕ್ಕೆ ಕ್ರಮ: ವಿಮಾಣ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಏನೇನು ಅಡೆ ತಡೆ, ಸಮಸ್ಯೆ ಇದೆ ಎಂಬು ದನ್ನು ಅವಲೋಕಿಸಿ ಆ ಎಲ್ಲವುಗಳನ್ನು ಆದಷ್ಟು ಬೇಗ ಬಗೆಹರಿಸಿ ಕಾಮಗಾರಿಗೆ ವೇಗ ನೀಡಲು ಸೂಚಿಸಲಾಗಿದೆ. ಸದ್ಯ ಕಾಮಗಾರಿ ಪ್ರಗತಿ ಚುರುಕಾಗಿದೆ. ಕೆಲ ಸಣ್ಣ ಪುಟ್ಟ ಸಮಸ್ಯೆಗಳ ಬಗ್ಗೆ ಗುತ್ತಿಗೆದಾರರು ನಮ್ಮ ಗಮನಕ್ಕೆ ತಂದಿ ದ್ದಾರೆ. ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ಗ್ರಾಮಸ್ಥರಿಗೆ ಪ್ರತ್ಯೇಕ ರಸ್ತೆ ನಿರ್ಮಾಣ: ವಿಮಾನ ನಿಲ್ದಾಣ ನಿರ್ಮಾಣವಾಗುವ ಪ್ರದೇಶದಲ್ಲಿ ಸುತ್ತ ಮುತ್ತಲ ಗ್ರಾಮಗಳ ರೈತರು ಈ ಮೊದಲು ಕಾಮಗಾರಿ ನಡೆಯುತ್ತಿರುವ ಜಾಗದಲ್ಲೇ ಸಂಚರಿಸುತ್ತಿದ್ದರು. ಅವರಿಗೆ ಈಗ ರಸ್ತೆ ಇಲ್ಲವಾಗಿದೆ. ಪ್ರತ್ಯೇಕ ರಸ್ತೆ ಮಾಡಿ ಕೊಡಿ ಎಂಬ ರೈತರ ಬೇಡಿಕೆಯನ್ನು ಒಪ್ಪಿ 536 ಎಕರೆ ಯಲ್ಲೇ ವಿಮಾನ ನಿಲ್ದಾಣದ ಬೌಂಡರಿ ಅಂಚಿನಲ್ಲೇ ಸುಮಾರು 9 ಮೀಟರ್‌ ಅಗಲದ 5 ಕಿ.ಮೀ.ಉದ್ದದ ರಸ್ತೆ ನಿರ್ಮಾಣಕ್ಕೆ ಸುಮಾರು 5 ಎಕರೆ ಜಾಗದಲ್ಲಿ ರಸ್ತೆ ನಿರ್ಮಿಸಿಕೊಡಲು ಶುಕ್ರವಾರ ನಡೆಸಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ತ್ವರಿತವಾಗಿ ರಸ್ತೆ ಕಾಮಗಾರಿ ಮುಗಿಸುವಂತೆಯೂ ಸೂಚಿಸಲಾಗಿದೆ. ಅದಾದರೆ ಸುತ್ತಮುತ್ತಲ ರೈತರಿಗೆ ಅನುಕೂಲವಾಗಲಿದೆ. ಆ ನಂತರ ಕಾಂಪೌಂಡ್‌ ನಿರ್ಮಿಸಲಾಗುವುದು ಎಂದು ಹೇಳಿದರು.

2ನೇ ಪ್ಯಾಕೇಜ್‌ಗೆ ಶೀಘ್ರವೇ ಟೆಂಡರ್‌: ಈಗಾಗಲೇ ಮೊದಲ ಪ್ಯಾಕೇಜ್‌ನಲ್ಲಿ ರನ್‌ವೇ ನಿರ್ಮಾಣ, ಸುತ್ತಲೂ ಕಾಂಪೌಂಡ್‌ ನಿರ್ಮಿಸುವ ಕೆಲಸ ನಡೆಯು ತ್ತಿದೆ. 2ನೇ ಪ್ಯಾಕೇಜ್‌ಗೆ ಮುಂದಿನ ವಾರದಲ್ಲೇ ಟೆಂಡರ್‌ ಕರೆಯಲಾಗುವುದು. 2ನೇ ಪ್ಯಾಕೇಜ್‌ನಲ್ಲಿ ಟರ್ಮಿನಲ್‌ ಬಿಲ್ಡಿಂಗ್‌, ಎಟಿಸಿ ಟವರ್‌ ನಿರ್ಮಾಣ ವಾಗಲಿದೆ ಎಂದು ಹೇಳಿದರು.

2200 ಮೀಟರ್‌ ರನ್‌ವೇ: ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಮಾತನಾಡಿ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆದಿದೆ. ವಿಮಾನ ನಿಲ್ದಾಣದ ಬೌಂಡರಿ ಸಮಸ್ಯೆ ಸರ್ವೆ ಮಾಡಿ ಗುರುತು ಮಾಡುವ ಮೂಲಕ ಬಗೆಹರಿಸಲಾಗಿದೆ. ರೈತರೂ ಸಹಕಾರ ನೀಡಿದ್ದಾರೆ. ಪ್ರಮುಖ ಬೇಡಿಕೆಯಾಗಿದ್ದ ಪ್ರತ್ಯೇಕ ರಸ್ತೆ ನಿರ್ಮಾಣದ ಸಮಸ್ಯೆ ಬಗೆಹರಿಸಲಾಗಿದೆ. ಇತರೆ ಸಣ್ಣಪುಟ್ಟ ಸಮಸ್ಯೆಗಳೂ ಬಗೆಹರಿದಿವೆ. ಕೆಪಿಟಿಸಿಎಲ್‌ನಿಂದ ಹೈಟೆನ್ಶನ್‌ ವಿದ್ಯುತ್‌ ಮಾರ್ಗ ನಿರ್ಮಾಣದ ಕೆಲಸ ಬಾಕಿಯಿದ್ದು, ಕಾಮಗಾರಿ ಯಂತ್ರೋಪಕರಣ ಸಾಗಿಸಲು ಸಮಸ್ಯೆಯಾಗಿದೆ. ಅದಕ್ಕೆ ಈಗಾಗಲೇ ಹಣ ಬಿಡುಗಡೆಯಾಗಿದ್ದು, ಸ್ಥಳಾಂತರ ಕೆಲಸ ಶೀಘ್ರ ಆರಂಭ ಆಗಲಿದೆ. ಈ ಸಂಬಂಧ ಪ್ರತಿ ತಿಂಗಳು ಸಭೆ ನಡೆಸಿ ಏನೇ ಇದ್ದರೂ ಪರಿಹರಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಇತ್ಯರ್ಥಗೊಳಿಸಲಾಗದ ಸಮಸ್ಯೆ ಇದ್ದರೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ವಿಮಾನ ನಿಲ್ದಾಣದ ರನ್‌ವೇ ಉದ್ದ 2200ಮೀ. (2.5 ಕಿಮೀ), ಏರ್‌ಬಸ್‌ 320 ವಿಮಾನ ಇಳಿಯಲು 3000 ಮೀಟರ್‌ವರೆಗೂ ರನ್‌ವೇ ವಿಸ್ತರಣೆ ಮಾಡಲು ಅವಕಾಶ ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಎಟಿಆರ್‌ ಮಾದರಿ ವಿಮಾನ ಇಳಿಯಲು 2200 ಮೀ.ರನ್‌ ವೇ ನಿರ್ಮಾಣವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಸ್ಪಷ್ಟಪಡಿಸಿದರು. ಹಾಸನ ಜಿಪಂ ಸಿಇಒ ಕಾಂತರಾಜ್‌, ಹಾಸನ ಉಪ ವಿಭಾಗಾಧಿಕಾರಿ ಬಿ.ಎ.ಜಗದೀಶ್‌, ಲೋಕೋಪ ಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್‌ ಮತ್ತಿತರ ಅಧಿಕಾರಿಗಳು ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಹಾಜರಿದ್ದರು.

980 ಎಕರೆ ಅಗತ್ಯ : ವಿಮಾನ ನಿಲ್ದಾಣಕ್ಕಾಗಿ ಈ ಹಿಂದೆ 980 ಎಕರೆ ಅಗತ್ಯವಿದೆ ಎಂದು ಭೂ ಸ್ವಾಧೀನದ ಪ್ರಕ್ರಿಯೆ ನಡೆದಿತ್ತು. ಆದರೆ, ಹಾಲಿ ಸ್ವಾಧೀನ ಪಡಿಸಿರುವ 536 ಎಕರೆ ವ್ಯಾಪ್ತಿಯಲ್ಲೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬಹುದು. ಹೆಚ್ಚುವರಿಯಾಗಿ ಸುಮಾರು 400 ಎಕರೆ ಭೂ ಸ್ವಾಧೀನ ಮಾಡುವ ಪ್ರಸ್ತಾಪ ಇಲ್ಲ. ಹೆಚ್ಚುವರಿ ಭೂಮಿ ಅಗತ್ಯವಿಲ್ಲ ಎಂದು ಸಚಿವ ಸಂಪುಟ ಸಭೆಯಲ್ಲಿಯೇ ತೀರ್ಮಾನ ಆಗಿದೆ ಎಂದು ಅನಿಲ್‌ ಕುಮಾರ್‌ ಸ್ಪಷ್ಟಪಡಿಸಿದರು.

ಭೂ ಮಾಲಿಕರಿಗೆ ಶೀಘ್ರದಲ್ಲೇ ಪರಿಹಾರ : ವಿಮಾನ ನಿಲ್ದಾಣ ನಿರ್ಮಾಣಕ್ಕೆ 536 ಎಕರೆ ಬಳಸಿಕೊಳ್ಳಲಾಗುತ್ತಿದೆ. 24 ಎಕರೆ ಭೂ ಸ್ವಾಧೀನ ಬಾಕಿ ಇದೆ. ಸ್ವಾಧೀನದ ಪ್ರಕ್ರಿಯೆಗಳು ನಡೆದಿದ್ದು, ಅಂತಿಮ ಹಂತದಲ್ಲಿದೆ. ಭೂ ಮಾಲಿಕರಿಗೆ ಪರಿಹಾರ ನೀಡಬೇಕಾಗಿದ್ದು, ಪರಿಹಾರ ಕೊಡುವ ಕೆಲಸವನ್ನು ಆದಷ್ಟು ಬೇಗ ಮುಗಿಸುತ್ತೇವೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದ್ದಾರೆ.

ಅದಾದ ಕೂಡಲೇ ವಿಮಾನ ನಿಲ್ದಾಣಕ್ಕೆ ಸ್ವಾಧೀನವಾಗುವ 536 ಎಕರೆ ಸುತ್ತಲೂ ಕಾಂಪೌಂಡ್‌ ಹಾಕಿ ಕಾಮಗಾರಿಗೆ ವೇಗ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅನಿಲ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.