Hassan ಪೆನ್‌ಡ್ರೈವ್ ಪ್ರಕರಣದಲ್ಲಿ ಎ. ಮಂಜು ಹೆಸರು
ಪ್ರಕರಣದ ಆರೋಪಿ ನವೀನ್ ಗೌಡನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್
Team Udayavani, May 12, 2024, 11:47 PM IST
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರೆನ್ನಲಾದ ಅಶ್ಲೀಲ ವೀಡಿಯೋಗಳ ಹಂಚಿಕೆ ಪ್ರಕರಣದಲ್ಲಿ ಈಗ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ. ಮಂಜು ಅವರ ಹೆಸರು ತಳುಕು ಹಾಕಿಕೊಂಡಿದೆ.
ಪ್ರಕರಣದ ಆರೋಪಿಯಾಗಿರುವ ನವೀನ್ ಗೌಡನ ಫೇಸ್‌ಬುಕ್ ಖಾತೆಯಿಂದ ರವಿವಾರ ಆಗಿರುವ ಪೋಸ್ಟ್‌ನಲ್ಲಿ ಅಶ್ಲೀಲ ವೀಡಿಯೋ ವೈರಲ್ ಆಗಿರುವುದರ ಹಿಂದೆ ಶಾಸಕ ಎ. ಮಂಜು ಅವರ ಪಾತ್ರವೂ ಇರಬಹುದು ಎಂದು ಹೇಳಲಾಗಿದೆ. ಎಪ್ರಿಲ್ 20ರಂದು ರಸ್ತೆಯಲ್ಲಿ ನನಗೆ ಸಿಕ್ಕಿರುವ ಒಂದು ಪೆನ್‌ಡ್ರೈವ್ ಅನ್ನು ಎ.21ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ ಶಾಸಕ ಎ. ಮಂಜು ಅವರಿಗೆ ನಾನು ನೀಡಿದ್ದೇನೆ.
ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ ಹಾಗೆ ವೀಡಿಯೋ ವೈರಲ್ ಹಿಂದೆ ಇರುವ ಮಹಾ ನಾಯಕ ಅರಕಲಗೂಡು ಶಾಸಕರೇ ಆಗಿರಬಹುದು ಎಂದು ನವೀನ್ ಗೌಡ ಅವರ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಇದು ಮತ್ತೂಂದು ವಿವಾದಕ್ಕೆಡೆ ಮಾಡಿದೆ.
ನವೀನ್ ಗೌಡ ಯಾರೆಂದು
ನನಗೆ ಗೊತ್ತೇ ಇಲ್ಲ: ಮಂಜು
ನವೀನ್ ಗೌಡ ಯಾರು ಅಂತಾ ನನಗೆ ಗೊತ್ತೇ ಇಲ್ಲ. ಎ.21ರಂದು ಹತ್ತಾರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಅಲ್ಲಿ ನೂರಾರು ಜನರನ್ನು ಮಾತನಾಡಿಸಿದ್ದೇನೆ. ಅವರಲ್ಲಿ ಈ ವ್ಯಕ್ತಿ ಯಾರು ಎಂಬುದೇ ತಿಳಿದಿಲ್ಲ ಎಂದು ಅರಕಲಗೂಡು ಶಾಸಕ ಎ.ಮಂಜು ಸ್ಪಷ್ಟಪಡಿಸಿದರು.
ಮಐಸೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ನವೀನ್ ಗೌಡ ಹೆಸರನ್ನು ಇವತ್ತಿನವರೆಗೂ ನಾನು ಕೇಳಿಯೇ ಇಲ್ಲ. ಆತನನ್ನೂ ನೋಡಿಯೂ ಇಲ್ಲ. ಇನ್ನೂ ಪೆನ್‌ಡ್ರೈವ್ ಪಡೆಯುವುದು ಎಲ್ಲಿ ಬಂತು. ಆತನ ಹಿಂದೆ ಯಾರೋ ಮಹಾನುಭಾವರು ಇರಲೇ ಬೇಕು. ನಮ್ಮ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಡುವಿನ ಸಂಬಂಧ ಹಾಳು ಮಾಡಲು ಈ ರೀತಿ ಮಾಡಲಾಗುತ್ತಿದೆ. ನವೀನ್ ಗೌಡನ ವಿರುದ್ಧ ಅರಕಲಗೂಡು ಠಾಣೆಯಲ್ಲಿ ಸೋಮವಾರ ದೂರು ದಾಖಲಿಸುತ್ತೇನೆ. ಆತನ ವಿರುದ್ಧ ಮಾನನಷ್ಟ ಮೊಕದ್ದಮೆ ಕೂಡ ಹೂಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.