Pendrive Case: ಜೆಡಿಎಸ್ ಶಾಸಕ ಎ.ಮಂಜು ವಿಚಾರಣೆ
Team Udayavani, Jun 1, 2024, 8:31 PM IST
ಹಾಸನ: ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಸಂಬಂಧ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ. ಮಂಜು ಅವರು ಶನಿವಾರ ಹಾಸನದ ಸಿಇಎನ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸಿದರು.
ಬೆಳಗ್ಗೆ 11.30ಕ್ಕೆ ಹಾಜರಾದ ಮಂಜು ಅವರು ಎಎಸ್ಪಿ ಎಂ.ಕೆ.ತಮ್ಮಯ್ಯ ಅವರಿಂದ 12.45 ಗಂಟೆ ವರೆಗೆ ವಿಚಾರಣೆಗೆ ಒಳಗಾದರು. ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಗೌಡನು ಶಾಸಕ ಮಂಜುಗೆ ಎ.20ರಂದು ಪೆನ್‌ಡ್ರೈವ್ ಕೊಟ್ಟಿದ್ದೆ ಎಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ಮೇ 12ರಂದು ಬರೆದುಕೊಂಡಿದ್ದ. ಎಸ್‌ಐಟಿ ವಶದಲ್ಲಿದ್ದ ನವೀನ್ ಗೌಡನನ್ನು ಎಎಸ್ಪಿ ತಮ್ಮಯ್ಯ ವಿಚಾರಣೆ ನಡೆಸಿದಾಗಲೂ ಅದನ್ನು ಪುನರುಚ್ಚರಿಸಿದ್ದ ಹಿನ್ನೆಲೆಯಲ್ಲಿ ಶಾಸಕರನ್ನು ವಿಚಾರಣೆಗೆ ಕರೆಯಲಾಗಿತ್ತು.
ಎ.ಮಂಜು ಪ್ರತಿಕ್ರಿಯಿಸಿ, ನನ್ನ ವಿರುದ್ಧ ಆರೋಪ ಮಾಡಿದ್ದ ನವೀನ್ ಗೌಡ ವಿರುದ್ಧ ನಾನೇ ಎಸ್‌ಐಟಿಗೆ ದೂರು ನೀಡಿದ್ದೆ. ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.