Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Team Udayavani, Nov 20, 2024, 12:09 AM IST
ಹಾಸನ: ತವರು ಮನೆಯಿಂದ ಮತ್ತಷ್ಟು ವರದಕ್ಷಿಣೆ ತರುವಂತೆ ಹಿಂಸೆ ನೀಡಿದ ಪತಿ, 3 ತಿಂಗಳ ಗರ್ಭಿಣಿ ಪತ್ನಿಯ ಜೀವ ತೆಗೆದಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ನೊರಕ್ಕಿ ಗ್ರಾಮದಲ್ಲಿ ನಡೆದಿದೆ.
ಅದೇ ತಾಲೂಕಿನ ದೊಡ್ಡೇರಿ ಕಾವಲು ಗ್ರಾಮದ ನಯನಾ (24) ಕೊಲೆಯಾದ ಗೃಹಿಣಿ. ಯಶೋದಮ್ಮ ಅವರ ಪುತ್ರಿ ನಯನಾಳ ವಿವಾಹ 3 ವರ್ಷಗಳ ಹಿಂದೆ ನೊರಕ್ಕಿ ಗ್ರಾಮದ ಅಯ್ಯಪ್ಪ (31)ನ ಜತೆಗೆ ಆಗಿತ್ತು.
ರವಿವಾರ ರಾತ್ರಿ ಅಯ್ಯಪ್ಪ ಮಾವನ ಮನೆಗೆ ಬಂದು ಅಲ್ಲಿಯೇ ಉಳಿದುಕೊಂಡಿದ್ದ. ಸೋಮವಾರ ಬೆಳಗ್ಗೆ ತನ್ನೂರು ನೊರಕ್ಕಿ ಗ್ರಾಮಕ್ಕೆ ಪತ್ನಿಯನ್ನು ಕರೆದುಕೊಂಡು ಹೋಗಿದ್ದ. ಬಳಿಕ ನಿಮ್ಮ ಮಗಳನ್ನು ಕೊಲೆ ಮಾಡಿದ್ದೇನೆಂದು ಆಕೆಯ ತಂದೆಗೆ ತಿಳಿಸಿದ್ದಾನೆ. ಕೃತ್ಯವೆಸಗಿದ ಬಳಿಕ ಅಯ್ಯಪ್ಪನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.