ರೈತ ಯುವಕರ ಮದುವೆ ಆದ್ರೆ 2 ಲಕ್ಷ ರೂ. ಪ್ರೋತ್ಸಾಹಧನ: ಎಚ್‌.ಡಿ.ಕುಮಾರಸ್ವಾಮಿ

Team Udayavani, Mar 10, 2023, 7:32 AM IST

ರೈತ ಯುವಕರ ಮದುವೆ ಆದ್ರೆ 2 ಲಕ್ಷ ರೂ. ಪ್ರೋತ್ಸಾಹಧನ: ಎಚ್‌.ಡಿ.ಕುಮಾರಸ್ವಾಮಿ

ಹಾಸನ: ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನು ವಿವಾಹವಾಗುವ ಯುವತಿಯರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದರು.

ಹಾಸನ ಜಿಲ್ಲೆಗೆ ಪಂಚರತ್ನ ಯಾತ್ರೆ ಪ್ರವೇಶ ಮಾಡಿದ ಅರಸೀಕೆರೆ ತಾಲೂಕು ಕರಗುಂದ ಗ್ರಾಮದ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ. ಕಂಕಣಭಾಗ್ಯ ಕೂಡಿ ಬರಲಿ ಎಂದು ಅವಿವಾಹಿತ ರೈತ ಸಮುದಾಯದ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡಿದ್ದನ್ನು ಗಮನಿಸಿದ್ದೇನೆ. ರೈತರು ಸ್ವಾವಲಂಬಿಯಾಗುವ ಅಂಶ ಯೋಜನೆ ಪಂಚರತ್ನದಲ್ಲಿ ಸೇರಿದೆ. ಜೊತೆಗೆ ರೈತರ ಮಕ್ಕಳನ್ನು ವಿವಾಹವಾಗುವ ಯುವತಿಯವರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮವನ್ನೂ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಸುಮಲತಾ ಬಿಜೆಪಿ ಸೇರ್ಪಡೆಗೆ ಮಹತ್ವವಿಲ್ಲ
ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯ ವಿಚಾರಕ್ಕೆ ನಾನು ಮಹತ್ವ ಕೊಡಲ್ಲ. ನರೇಂದ್ರಮೋದಿ ಅವರು ಬರುವ ಸಂದರ್ಭದಲ್ಲಿ ಅವರು ಬಿಜೆಪಿ ಸೇರಬಹುದು. ನನಗೆ ಬಹಳ ದಿವಸದ ಹಿಂದೆಯೇ ಈ ಬೆಳವಣಿಗೆ ಗೊತ್ತಿತ್ತು ಎಂದರು.

ಕಿವಿಗೆ ಹೂ ಮುಡಿಸುವ ಯತ್ನ ಮಾಡಿದ್ದರು:
ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ನಮ್ಮ ಕಿವಿಗೆ ಹೂ ಮುಡಿಸುವ ತಂತ್ರ ರೂಪಿಸಿದ್ದರು. ಜಿ.ಟಿ.ದೇವೇಗೌಡರ ಮನೆಗೆ ಹೋಗಿ ಸಮಾಧಾನ ಮಾಡಿದಂತೆ ನನ್ನನ್ನು ಸಮಾಧಾನ ಮಾಡಲಿಲ್ಲ ಎಂಬ ಶಿವಲಿಂಗೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಹೇಗೆ ಸಮಾಧಾನ ಮಾಡಬೇಕಿತ್ತು?, ನಾನೇ ಖುದ್ದು ಎರಡು ಬಾರಿ ಕರೆಸಿ ಮಾತನಾಡಿದ್ದೇನೆ. ಅರಸೀಕೆರೆಯಲ್ಲಿ ಜಾತಿ ರಾಜಕೀಯವಿದೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕು. ಸಮಯ ಕೊಡಿ ಎಂದಿದ್ದರು. ಸಂಸದ ಪ್ರಜ್ವಲ್‌ ರೇವಣ್ಣ ಎಷ್ಟು ಬಾರಿ ಅವರ ಮನೆಗೆ ಹೋಗಿದ್ದಾರೆ ಎಂಬುದನ್ನು ಶಿವಲಿಂಗೇಗೌಡರೇ ಹೇಳಲಿ ಎಂದರು.

ದೇವೇಗೌಡರು, ರೇವಣ್ಣ ದುಡಿಮೆಯಿಂದ ಶಾಸಕರಾಗಿ ಕನಿಷ್ಠ ಸೌಜನ್ಯಕ್ಕೂ ದೇವೇಗೌಡರು, ರೇವಣ್ಣ ಅವರಿಂದ ಈ ಮಟ್ಟಕ್ಕೆ ಬಂದೆ ಅಂತ ಶಿವಲಿಂಗೇಗೌಡರ ಬಾಯಲ್ಲಿ ಬರಲಿಲ್ಲ ಎಂದು ಕಿಡಿ ಕಾರಿದರು.

ಇದೇ ವ್ಯಕ್ತಿ ನಾಳೆ ಬೆಳಗ್ಗೆ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸೋತು ಮನೆಗೆ ಹೋದ ಮೇಲೆ, ಯಾವ ಊರ ಸಿದ್ದರಾಮಯ್ಯ ಅಂತ ಹೇಳುವ ದಿನಗಳೂ ದೂರ ಇಲ್ಲ. ಅ ವ್ಯಕ್ತಿಯ ನಡವಳಿಕೆ ಗೊತ್ತಿದೆ ಬಿಡಿ ಎಂದರು.

ಮಾಜಿ ಸಚಿವ ಎ.ಮಂಜು ಜೆಡಿಎಸ್‌ ಸೇರ್ಪಡೆ ಈಗಾಗಲೇ ಅಧಿಕೃತವಾಗಿ ತೀರ್ಮಾನ ಆಗಿದೆ. ಪಕ್ಷ ಸೇರ್ಪಡೆ ದಿನಾಂಕವನ್ನು ರೇವಣ್ಣ ಅವರು ತೀರ್ಮಾನ ಮಾಡಬೇಕು. ಯಾಕೆಂದರೆ ಅವರು ಎಲ್ಲವನ್ನೂ ಪಂಚಾಂಗ ನೋಡಿಯೇ ತೀರ್ಮಾನ ಮಾಡೋದು. ಪಂಚಾಂಗ ಏನಿರುತ್ತೆ ಅದರ ಮೇಲೆ ತೀರ್ಮಾನ ಆಗುತ್ತೆ ಎಂದು ನಸು ನಕ್ಕರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.